“ಉಡುಪಿ ಶೈನಿಂಗ್ ಸ್ಟಾರ್” ಆಗಲು ಇಲ್ಲಿದೆ ಸುವರ್ಣಾವಕಾಶ: ಹಾಡುವವರಿಗೆ ಒಂದು ಭರ್ಜರಿ ಗಾಯನ ಸ್ಪರ್ಧೆ

ಉಡುಪಿXPRESS ನ್ಯೂಸ್: ಮಣಿಪಾಲ ಮಹಿಳಾ ಸಮಾಜ, ಹಾಡುವ ಪ್ರತಿಭೆಗಳಿಗೆ “ಉಡುಪಿ ಶೈನಿಂಗ್ ಸ್ಟಾರ್ “ಎನ್ನುವ ಆನ್ಲೈನ್ ಸಂಗೀತ ಸ್ಪರ್ಧೆ ಆಯೋಜಿಸಿದ್ದು ಉಡುಪಿ ಶೈನಿಂಗ್ ಸ್ಟಾರ್ ಆಗುವ ಕನಸಿರುವವರಿಗೆ ಸುವರ್ಣಾವಕಾಶ ನೀಡಿದೆ. ಈಗಾಗಲೇ ಆನ್ಲೈನ್ ಗಾಯನ ಸ್ಪರ್ಧೆಗೆ ನೋಂದಣಿ ಆರಂಭವಾಗಿದ್ದು, ಜೂ.30 ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಯಾರು ಭಾಗವಹಿಸಬಹುದು? ಅಂದಹಾಗೆ ಈ ಸ್ಪರ್ಧೆಗೆ ಉಡುಪಿ ಜಿಲ್ಲೆಯವರಿಗೆ ಭಾಗವಹಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದ್ದು,8-16 ವರ್ಷ ವಯೋಮಾನದವರಿಗೆ ಭಾಗವಹಿಸಲು ಮಾತ್ರ ಅವಕಾಶವಿದೆ. ಈಗಾಗಲೇ ಸಂಗೀತ ಕ್ಷೇತ್ರದಲ್ಲಿ ಖ್ಯಾತರಾದ ಪ್ರಸಿದ್ದರಿಗೆ ಇಲ್ಲಿ ಅವಕಾಶವಿಲ್ಲ. […]
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ ಸಹಿತ ಮೂವರು ಆರೋಪಿಗಳು ದೋಷಿ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ (52) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಇಂದು ಮಧ್ಯಾಹ್ನ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಿದ್ದಾರೆ. ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ […]
ಗಾಂಧೀಜಿ ಮರಿ ಮೊಮ್ಮಗಳಿಗೆ ಏಳು ವರ್ಷ ಜೈಲು ಶಿಕ್ಷೆ

ಜೊಹಾನ್ಸ್‌ಬರ್ಗ್: ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಗಾಂಧಿ ಮರಿ ಮೊಮ್ಮಗಳು ಆಶಿಶ್ ಲತಾ ರಾಮ್‌ಗೋಬಿನ್ (56) ಶಿಕ್ಷೆಗೆ ಗುರಿಯಾಗಿದ್ದಾರೆ. ಇವರು ಆರು ದಶಲಕ್ಷ ಆಫ್ರಿಕನ್ ರಾಂಡ್ ( ಅಂದಾಜು ₹3.22 ಕೋಟಿ) ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿದ ಆರೋಪ ಎದುರಿಸುತ್ತಿದ್ದಾರೆ. ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ತಾವು ಆಮದು ಮಾಡಿಕೊಳ್ಳುತ್ತಿದ್ದ […]
ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮುಖಂಡ ಸೇರಿ ಇಬ್ಬರ ಬಂಧನ

ಬಾಲಚಂದ್ರ ಭಟ್ ಉಡುಪಿ: ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಉದಯ ಕುಮಾರ್ ಗಾಣಿಗ (40) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಅಗ್ರಹಾರ ಹಾಗೂ ಯಡಮೊಗೆ ನಿವಾಸಿ ರಾಜೇಶ್ ಭಟ್ ಎಂದು ಗುರುತಿಸಲಾಗಿದೆ. ರಾಜೇಶ್ ಭಟ್ ಈ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದು, ಬಾಲಚಂದ್ರ ಭಟ್ ಅಗ್ರಹಾರ ಕೊಲೆಗೆ ಕುಮ್ಮಕ್ಕು ನೀಡಿರುವುದಾಗಿ ಎನ್ನಲಾಗಿದೆ. ಈ ಬಗ್ಗೆ ಮೃತರ ಪತ್ನಿ […]