ಮೂರು ತಿಂಗಳ ವೇತನ ಬಾಕಿ: ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಂದ ಮುಷ್ಕರ
ಉಡುಪಿ: ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯ ವೈದ್ಯರು, ನರ್ಸ್ ಸೇರಿದಂತೆ ಸಿಬ್ಬಂದಿ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದಾರೆ. ಆಸ್ಪತ್ರೆಯ 200ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದು, ಕೂಡಲೇ ವೇತನ ಪಾವತಿಸುವಂತೆ ಆಗ್ರಹಿಸಿದ್ದಾರೆ. ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ನಮಗೆ ಬಹಳ ಸಮಸ್ಯೆ ಆಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ. ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ […]
ಆರ್ಥಿಕ ಮುಗ್ಗಟ್ಟಿನಿಂದ ತಬಲ ಕಲಾವಿದ ಸುರೇಶ್ ದಂಪತಿ ಆತ್ಮಹತ್ಯೆ
ಮಂಗಳೂರು: ಆರ್ಥಿಕ ಮುಗ್ಗಟ್ಟಿನಿಂದಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಬುಧವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಎಂದು ಗುರುತಿಸಲಾಗಿದೆ. ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ. ಮೃತ ದಂಪತಿ ಓರ್ವ ಪುತ್ರನನ್ನು ಅಗಲಿದ್ದಾರೆ. ಸುರೇಶ್ ಖ್ಯಾತ ತಬಲ ಕಲಾವಿದರಾಗಿದ್ದರು. ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ […]