ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್‌ ಸಿಂಗ್‌

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಕೋವಿಡ್‌–19 ಸಂದಿಗ್ಧ ಪರಿಸ್ಥಿತಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿದ್ದಾರೆ. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್‌ ಎದುರು ಯಾವುದೇ ಪ್ರಸ್ತಾವನೆ ಇಲ್ಲ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ದನಿ ಎತ್ತಿದ್ದರೆ, ಇನ್ನು ಕೆಲವರು ಅವರ ಪರ ಸಹಿ ಸಂಗ್ರಹ […]

ಉಡುಪಿ: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ನಿಧನ

ಉಡುಪಿ: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ (ಪದ್ದು) ಬಂಗೇರಾ (74 ) ಕೊರೊನಾ ಸೋಂಕಿನಿಂದ ನಿಧನ ಹೊಂದಿದರು. ಅವರು ಕೊರೊನಾ ಸೋಂಕಿಗೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಶೇಖರ್ ಪದ್ದು ಮೂಲತಃ ಉಡುಪಿ ತಾಲೂಕಿನ ಬಡಾನಿಡಿಯೂರಿನವರು. 80ರ ದಶಕದಲ್ಲಿ ದೇಶದ ಫುಟ್ಬಾಲ್ ತಂಡವನ್ನು ಮುನ್ನಡೆಸಿದ್ದರು.‌ ಭಾರತ ತಂಡದ ಗೋಲ್ ಕೀಪರ್ ಹಾಗೂ ಕ್ಯಾಪ್ಟನ್ ಕೂಡ ಆಗಿದ್ದರು.

ಕೋವಿಡ್ ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ; ಸಚಿವ ಕೋಟ

ಮಂಗಳೂರು: ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಇಳಿಮುಖವಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್ ಮುಂದುವರಿಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೆಲ ಕೈಗಾರಿಕೆ ಹೊರತುಪಡಿಸಿ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್‌ ಮುಂದುವರೆಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಸಭೆಯಲ್ಲಿ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಮತ್ತೆ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‌ಡೌನ್ ಮುಂದುವರಿಯಲಿದೆ ಎಂದು ತಿಳಿಸಿದರು. ಕೆಲ ವಿಷಯಗಳಿಗೆ […]

ಇಳಿಕೆಯಾಗದ ಕೋವಿಡ್ ಸೋಂಕು: ರಾಜ್ಯದ 8 ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಗೊಳಿಸುವಂತೆ ಸಿಎಂ ಸೂಚನೆ

ಬೆಂಗಳೂರು: ಕೋವಿಡ್‌ ದೃಢಪಡುವ ಪ್ರಮಾಣವನ್ನು ಶೇ. 5ಕ್ಕಿಂತ ಕಡಿಮೆಗೊಳಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಗೊಳಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಕಾರಣ ರಾಜ್ಯ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಸಂಖ್ಯೆ […]

ಲಾಕ್ ಡೌನ್ ಮುಂದುವರಿಸಿದರೆ ಜನರ ಮೇಲೆ ಮತ್ತಷ್ಟು ಆರ್ಥಿಕ ಸಂಕಷ್ಟದ ಹೊರೆ ಬೀಳಲಿದೆ: ಶಾಸಕ ಭಟ್

ಉಡುಪಿ: ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾಗುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮಾಡುವ ಅಗತ್ಯವಿಲ್ಲ. ಲಾಕ್‌ಡೌನ್ ಮುಂದುವರಿಸುವುದರಿಂದ ಜನರು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ. ಕೆಲವೊಂದು ನಿಬಂಧನೆಗಳೊಂದಿಗೆ ಜೀವನ ನಿರ್ವಹಣೆಗೆ ಅವಕಾಶ ಕೊಡಬೇಕು. ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಕಾರ್ಯಕ್ರಮಗಳಿಗೆ ನೀಡಬಾರದು. ಕನಿಷ್ಠ ಮೂರು ತಿಂಗಳು ಈ ಚಟುವಟಿಕೆಗಳು ಬಂದ್ ಆಗಬೇಕು ಎಂದರು. ಗೂಡಾಂಗಡಿ, ಹೋಟೆಲ್, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಅವಕಾಶ ಕೊಡಬೇಕು. ಜೂನ್ 14 ನಂತರವೂ ಲಾಕ್‌ಡೌನ್ ಮುಂದುವರೆದರೆ ಆರ್ಥಿಕ […]