ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆಯಾಗುವುದನ್ನು ತಡೆಹಿಡಿಯಲು ಸಚಿವ ಕೋಟ ಆದೇಶ
ಉಡುಪಿ: ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ […]