ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನಿಲ್ಲ
ಬೆಂಗಳೂರು: ಖ್ಯಾತ ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರು ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಮೇ 4ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು, ಸುದೀರ್ಘ ಚಿಕಿತ್ಸೆಗೆ ಒಳಗಾಗಿದ್ದರು. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಸಿದ್ದಲಿಂಗಯ್ಯನವರು ಮೂಲತಃ ಮಾಗಡಿ ತಾಲೂಕಿನ ಮಂಚನಬೆಲೆ ಜಿಲ್ಲೆಯವರು. ಸಿದ್ದಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕವಿತೆಗಳನ್ನು ರಚಿಸಿದ್ದಾರೆ. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.
ಜೂನ್ 14ರಿಂದ ಲಾಕ್ ಡೌನ್ ಸಡಿಲಿಕೆ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕೊರೊನಾ ಇಳಿಕೆಯಾಗಿರುವ ರಾಜ್ಯದ 19 ಜಿಲ್ಲೆಗಳಲ್ಲಿ ಸೋಮವಾರ (ಜೂನ್ 14) ದಿಂದ ಲಾಕ್ಡೌನ್ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಅನ್ ಲಾಕ್, ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಮಾರ್ಗಸೂಚಿ ಪ್ರಕಟಿಸಿದೆ. ಯಾವುದಕ್ಕೆ ಅನುಮತಿ..? ದಿನಸಿ ಖರೀದಿ ಅವಧಿ ಮಧ್ಯಾಹ್ನ 2ರವರೆಗೆ ವಿಸ್ತರಣೆ. ಬೀದಿ ಬದಿ ವ್ಯಾಪಾರಕ್ಕೆ ಮಧ್ಯಾಹ್ನ 2ರವರೆಗೆ ಅವಕಾಶ. ವೈನ್ ಶಾಪ್, ಬಾರ್ಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮದ್ಯ ಪಾರ್ಸೆಲ್ಗೆ ಮಾತ್ರ ಅವಕಾಶ. ಕಟ್ಟಡ ಕಾಮಗಾರಿ, ಸಾಮಗ್ರಿಗಳಿಗೆ ಸಂಪೂರ್ಣ […]
ಜೂ.14: ವಿಶ್ವಸಂಸ್ಥೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಜೂನ್ 14ರಂದು ನಡೆಯಲಿರುವ ವಿಶ್ವಸಂಸ್ಥೆಯ ವರ್ಚುವಲ್ ವಿಧಾನದ ಮೂಲಕ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಣ್ಣಿನ ಗುಣಮಟ್ಟ ನಾಶ, ಮರುಭೂಮೀಕರಣ ಹಾಗೂ ಬರ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ. ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್ ಬೊಜ್ಕಿರ್ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿಶ್ವಸಂಸ್ಥೆಯ ಉಪ ಪ್ರಧಾನ ಕಾರ್ಯದರ್ಶಿ ಅಮೀನಾ ಮೊಹಮ್ಮದ್, ಯುಎನ್ಸಿಸಿಡಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಇಬ್ರಾಹಿಂ ಥಾಯ್ವ್ ಸಹ ಈ ಕಾರ್ಯಕ್ರಮವನ್ನು ಉದ್ಧೇಶಿಸಿ ವಿಚಾರ ಮಂಡನೆ ಮಾಡುವರು.
ಉಡುಪಿ: ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ನೆರವಾದ “ವೈದ್ಯರ ನಡೆ ಹಳ್ಳಿ ಕಡೆ“ ಕಾರ್ಯಕ್ರಮ
ಉಡುಪಿ: ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದ ಕೋವಿಡ್ ಸೋಂಕಿನ ಪ್ರಸರಣವನ್ನು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಮಾರ್ಗಸೂಚಿಗಳನ್ನು ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ರೂಪಿಸಿದ, “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವ ಮೂಲಕ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ.. ಜಿಲ್ಲೆಯಲ್ಲಿ ಅನುಷ್ಠಾನ ಮಾಡಿರುವ “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮಕ್ಕೆ ವೈದ್ಯರು, ಸ್ವಾಬ್ ಸಂಗ್ರಹಗಾರರು, ಗ್ರಾಮೀಣ ಕೋವಿಡ್ […]