ಉಡುಪಿ ಶಾಸಕರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಕೋವಿಡ್ ನಿಯಮ ಉಲ್ಲಂಘನೆ: ವ್ಯಾಪಕ ಟೀಕೆ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವಾಗಲೇ ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋವಿಡ್-19 ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿರುವ ಘಟನೆ ನಡೆದಿದೆ. ಹೌದು, ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಇಂದು ಕೆಮ್ಮಣ್ಣು ಗ್ರಾಪಂ ವ್ಯಾಪ್ತಿಯ ಪಡುತೋನ್ಸೆ ಯಾಳಕೆರೆ ಮನೆ ಬಳಿ 15 ಎಕರೆ ಹಡಿಲು ಕೃಷಿ ಭೂಮಿಯಲ್ಲಿ ನಾಟಿ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ 200ಕ್ಕೂ ಅಧಿಕ ಮಂದಿ ಯಾವುದೇ ಸುರಕ್ಷಿತ ಅಂತರ ಕಾಪಾಡದೆ ಕೋವಿಡ್-19 ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ, ಈ […]
ಉಡುಪಿ ತಂಬಾಕು ಮುಕ್ತ ಜಿಲ್ಲೆಯಾಗಿಸಲು ಕೈ ಜೋಡಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಪ್ರತಿ ವರ್ಷ 8 ಮಿಲಿಯನ್ ಜನರು ಸಾವನ್ನಪ್ಪುತ್ತಾರೆ. ನೇರವಾಗಿ ತಂಬಾಕು ಉತ್ಪನ್ನಗಳ ಸೇವನೆಯಿಂದಲೇ 7 ಮಿಲಿಯನ್ ಜನರು ಸಾವೀಗೀಡಾಗುತ್ತಾರೆ. ಭಾರತದಲ್ಲಿ ಪ್ರತಿ ದಿನ 3500 ಸಾವುಗಳು ತಂಬಾಕು ಉತ್ಪನ್ನಗಳ ಬಳಕೆಯಿಂದ ಸಂಭವಿಸುತ್ತದೆ. ಭಾರತದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರು 26.7 ಕೋಟಿ (28.6%) ಜನರು ತಂಬಾಕು ಉತ್ಪನ್ನಗಳ ಬಳಕೆಯನ್ನು ಮಾಡುತ್ತಾರೆ. 1.2 ಮಿಲಿಯನ್ ಜನರು ಪರೋಕ್ಷ ಧೂಮಪಾನಕ್ಕೆ ತುತ್ತಾಗುತ್ತಾರೆ. ವಿಶ್ವಾದಾದ್ಯಂತ ಪ್ರತಿ ವರ್ಷ 9 ಮಿಲಿಯನ್ ಜನರು ತಂಬಾಕು ಸೇವನೆಯಿಂದ ಕ್ಯಾನ್ಸರ್, […]
ಗಂಗೊಳ್ಳಿಗೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ಕೋವಿಡ್ ನಿಯಂತ್ರಣ ಕ್ರಮಗಳ ವೀಕ್ಷಣೆ
ಕುಂದಾಪುರ: ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಶಾಸಕ ಸುಕುಮಾರ್ ಶೆಟ್ಟಿ ಮಾಹಿತಿ ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.೧೦ರಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್ಲಾಕ್ ಆದ ಬಳಿಕ ಜನರು ಮೈಮರೆಯದೆ […]
ಉಡುಪಿ: ಕೊರೊನಾ ಸೋಂಕು ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆ ಕಂಡಿದ್ದು, ಇಂದು (ಜೂನ್ 12) 258 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 133, ಕುಂದಾಪುರ ತಾಲೂಕಿನಲ್ಲಿ 75, ಕಾರ್ಕಳ ತಾಲೂಕಿನಲ್ಲಿ 47 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3348 ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 68 ವರ್ಷದ ಮಹಿಳೆ ಹಾಗೂ ಕುಂದಾಪುರ 43 ವರ್ಷದ ಸೋಂಕಿನಿಂದ ಅಸುನೀಗಿದ್ದಾರೆ. […]
ಸಿಂಪಲ್ಲಾಗ್ ಒಂದ್ ಇಂಗ್ಲಿಷ್ ಕ್ಲಾಸ್ :ಈ ವಾರದ ಇಂಗ್ಲಿಷ್ ಕ್ಲಾಸ್ ವಿಡಿಯೋ ಇಲ್ಲಿದೆ
ನಿಮಗೆ ಬೇಗ ಬೇಗ ಇಂಗ್ಲಿಷ್ ಕಲಿಬೇಕು, ಇಂಗ್ಲಿಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಉಡುಪಿXPRESS.COM ಮಾಧ್ಯಮ ಸಹಯೋಗದಲ್ಲಿ ಜೀರೋ ಟು ಜೀರೋ ಇಂಗ್ಲೀಷ್ ಕ್ಲಾಸ್ ಶುರುವಾಗಿದೆ. ಇಂಗ್ಲೀಷ್ ತಜ್ಞರಾದ ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲಿಷ್ ಪಾಠ ಮಾಡ್ತಾರೆ. ಪ್ರತೀ ಶನಿವಾರ ಸಂಜೆ ಇವರ ಯು-ಟ್ಯೂಬ್ ಕ್ಲಾಸ್ ಗೆ ನೀವು ಹಾಜರಾಗಬಹುದು. ಕೆಳಗಿನ ಲಿಂಕ್ ಒತ್ತಿ […]