ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ
ಉಡುಪಿ ಜೂ11: ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ವನ್ನಾಗಿ ಆಚರಣೆ ಮಾಡುತ್ತಿದ್ದು, ಆದರೆ ಈ ವರ್ಷ ಕೋವಿಡ್-19 2ನೇ ಅಲೆಯ ಕಾರಣದಿಂದಾಗಿ ವಿಶೇಷವಾಗಿ ಸಭಾ ಕಾರ್ಯಕ್ರಮಗಳನ್ನೊಳಗೊಂಡ ವಿವಿಧರೀತಿಯ ಕಾರ್ಯಕ್ರಮಗಳ ಮೂಲಕ ಆಚರಿಸಲು ಸಾಧ್ಯವಾಗುತ್ತಿಲ್ಲ. ಕೋವಿಡ್-19 ಇದು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದರ ಪರಿಣಾಮವಾಗಿ ಆರ್ಥಿಕ ಮತ್ತು ಕಾರ್ಮಿಕ ಮಾರುಕಟ್ಟೆಯ ಆಘಾತವು ಜನರಜೀವನ ಹಾಗೂ ಜೀವನೋಪಾಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಈ ಬಿಕ್ಕಟ್ಟು ಸಾವಿರಾರು ದುರ್ಬಲ ಮಕ್ಕಳನ್ನು […]