ತೈಲಬೆಲೆ ಏರಿಕೆ ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಉಡುಪಿ: ತೈಲ ಬೆಲೆ ಏರಿಕೆ ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ‌ ಡಯಾನ ಸರ್ಕಲ್ ಬಳಿಯ ಶೆಟ್ಟಿ ಪೆಟ್ರೋಲ್ ಬಂಕ್ ಬಳಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಲೀಟರ್ ಪೆಟ್ರೋಲ್ ಕಚ್ಚಾತೈಲಕ್ಕೆ ₹ 31 ರೂ. ಆಗಿದ್ದು, ಸಂಸ್ಕರಣೆ ವೆಚ್ಚ ಹಾಗೂ ಡೀಲರ್ ಕಮಿಷನ್ ಸೇರಿ ₹ 39 ದರದಲ್ಲಿ ಗ್ರಾಹಕರಿಗೆ ನೀಡಬಹುದು. ಆದರೆ ರಾಜ್ಯ ಸರಕಾರದ ವ್ಯಾಟ್ ಹಾಗೂ […]

ಉಡುಪಿ: ಕೊರೊನಾ ಸೋಂಕು ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆ ಕಂಡಿದ್ದು, ಇಂದು (ಜೂನ್ 13) 223 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 105, ಕುಂದಾಪುರ ತಾಲೂಕಿನಲ್ಲಿ 61, ಕಾರ್ಕಳ ತಾಲೂಕಿನಲ್ಲಿ‌ 51 ಹಾಗೂ ಹೊರ ಜಿಲ್ಲೆಯ 6 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3222 ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 71 ಮತ್ತು 76 ವರ್ಷದ ಇಬ್ಬರು ಮಹಿಳೆಯರು, ಕುಂದಾಪುರ ತಾಲೂಕಿನ 75 […]

ಉಡುಪಿ: ಬುಕ್ ಸ್ಟಾಲ್, ಮೊಬೈಲ್ ಅಂಗಡಿ ತೆರೆಯಲು ಅನುಮತಿ

ಉಡುಪಿ: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯಕವಾಗಿರುವ ಪುಸ್ತಕ, ಪೆನ್ನು ಮತ್ತು ಸ್ಟೇಶನರಿ ವಸ್ತುಗಳು, ಮೊಬೈಲ್, ಮೊಬೈಲ್ ರಿಪೇರಿ ಹಾಗೂ accessories ಗಳನ್ನು ಖರೀದಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೂನ್ 16ರಂದು (ಬುಧವಾರ) ಒಂದು ದಿನದ ಮಟ್ಟಿಗೆ ಬುಕ್‌ಸ್ಟಾಲ್/ಸ್ಟೇಷನರಿ ಹಾಗೂ ಮೊಬೈಲ್ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿ: ಸನ್ಮಾನ, ಕಾರ್ಯಕ್ರಮಗಳನ್ನು ಆಯೋಜಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು: ಡಿಸಿ ಜಿ. ಜಗದೀಶ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ದೃಢಪಡುವ ಪಾಸಿಟಿವಿಟಿ ರೇಟ್ ಶೇ. 6ಕ್ಕೆ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿದರೂ ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ (ಜೂನ್ 14) ಹಲವಾರು ವಿನಾಯಿತಿಗಳನ್ನು ಘೋಷಣೆ ಮಾಡಿದೆ. ಅಗತ್ಯ ವಸ್ತು ಖರೀದಿ ಸಮಯವನ್ನು 2 ಗಂಟೆಯವರೆಗೂ ವಿಸ್ತರಿಸಲು ಅನುಮತಿ‌ ನೀಡಿದೆ. ಅಲ್ಲದೆ, 40 ಜನರಿಗೆ ಸೀಮಿತಗೊಳಿಸಿ ಮದುವೆ ನಡೆಸಲು ಅವಕಾಶ ನೀಡಿದೆ. ಆದರೆ ಈ ನಡುವೆ ಅನೇಕ ಸಂಘ ಸಂಸ್ಥೆಗಳು ಸನ್ಮಾನ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಕಂಡು […]

ರಸ್ತೆ ಅಪಘಾತ: ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

ಬೆಂಗಳೂರು: ರಸ್ತೆ ಅಪಘಾತವಾಗಿ ನಟ ಸಂಚಾರಿ ವಿಜಯ್ ಅವರು ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಸ್ನೇಹಿತರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು, ವಿಜಯ್ ಅವರ ತಲೆ ಹಾಗೂ ತೊಡೆ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ವಿಜಯ್ ಅವರನ್ನು ಕೂಡಲೇ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಕರೆತಂದ ವೇಳೆ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಅವರಿಗೆ ಮೆದುಳಿನ ಆಪರೇಷನ್ ಮಾಡಲಾಗಿದೆ. ತೊಡೆ […]