ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ; ಹೊಸ ರಾಜಕೀಯ ಲೆಕ್ಕಾಚಾರ ಶುರು
ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಇಂದು ತಮ್ಮ ರಾಜಕೀಯ ಎದುರಾಳಿ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ತಮ್ಮ ಮನೆಗೂ ಅವರನ್ನು ಆಹ್ವಾನಿಸಿ ಇಬ್ಬರೂ ಒಟ್ಟಿಗೆ ಉಪಾಹಾರ ಸೇವಿಸುವ ಮೂಲಕ ಹೊಸ ರಾಜಕೀಯ ಚರ್ಚೆ ಹುಟ್ಟುಹಾಕಿದ್ದಾರೆ. ಪ್ರಮೋದ್ ಅವರು ಕಳೆದ ಮೂರ್ನಾಲ್ಕು ವರ್ಷಗಳಿಂದ ತಮ್ಮ ರಾಜಕೀಯ ಜೀವನದ ಬಗ್ಗೆ ಕಿಂಚಿತ್ತೂ ಸುಳಿವು ಬಿಟ್ಟುಕೊಡುತ್ತಿಲ್ಲ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಕೊನೆ […]
ನಾಳೆಯಿಂದ ಶೈಕ್ಷಣಿಕ ವರ್ಷ ಆರಂಭ: ಜುಲೈ 1ರಿಂದ ಶಾಲಾ ತರಗತಿಗಳು ಶುರು
ಬೆಂಗಳೂರು: ನಾಳೆಯಿಂದಲೇ (ಜೂನ್ 15) ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಜುಲೈ 1ರಿಂದ ಶಾಲಾ ತರಗತಿಗಳು ಆರಂಭವಾಗಲಿದೆ. ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರಾದ ಅನ್ಬುಕುಮಾರ್ ಸೂಚಿಸಿದ್ದಾರೆ. ಜೂನ್ 15ರಿಂದ ಮಕ್ಕಳ ಶಾಲಾ ದಾಖಲಾತಿ ಪ್ರಾರಂಭಿಸಿ ಆಗಸ್ಟ್ 31ರೊಳಗೆ ಮುಕ್ತಾಯಗೊಳಿಸಬೇಕು. ಲಾಕ್ ಡೌನ್ ಇರೋ ಜಿಲ್ಲೆಯವರು ಪಾಸ್ನೊಂದಿಗೆ ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ […]
ಅದಾನಿ ಸಮೂಹ ಸಂಸ್ಥೆಗಳ ಮೂರು ಎಫ್‌ಪಿಐ ಖಾತೆಗಳ ಮುಟ್ಟುಗೋಲು
ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳಲ್ಲಿ ಷೇರು ಹೊಂದಿರುವ ಮೂರು ಎಫ್‌ಪಿಐ (ವಿದೇಶಿ ಬಂಡವಾಳ ಹೂಡಿಕೆ) ಖಾತೆಗಳನ್ನು ನ್ಯಾಷನಲ್ ಸೆಕ್ಯುರಿಟೀಸ್ ಡೆಪಾಸಿಟರಿ ಲಿಮಿಟೆಡ್ (ಎನ್‌ಎಸ್‌ಡಿಎಲ್) ಮುಟ್ಟುಗೋಲು ಹಾಕಿಕೊಂಡ ಘಟನೆ ನಡೆದಿದೆ. ಈ ಬೆಳವಣಿಗೆ ನಡೆದ ಬೆನ್ನಲ್ಲೇ ಸೋಮವಾರದ ಬೆಳಗ್ಗಿನ ವಹಿವಾಟಿನಲ್ಲಿ ‘ಅದಾನಿ ಎಂಟರ್‌ಪ್ರೈಸಸ್’ ಷೇರು ಮೌಲ್ಯವು ಶೇ. 25ರಷ್ಟು ಕುಸಿತ ಕಂಡಿದೆ. ಮುಂಬೈ ಷೇರುಪೇಟೆಯಲ್ಲಿ ‘ಅದಾನಿ ಎಂಟರ್‌ಪ್ರೈಸಸ್’ ಷೇರು ಮೌಲ್ಯವು ಶೇ 24.99ರಷ್ಟು ಕುಸಿದು ₹1,201.10 ಆಗಿದೆ. ‘ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕಾನಮಿಕ್ ಝೋನ್’ ಷೇರು ಮೌಲ್ಯ […]
ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ₹ 1 ಲಕ್ಷ ಪರಿಹಾರ: ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ಕೋವಿಡ್ -19 ಮಹಾಮಾರಿಯಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ₹ 1ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಬಹಳಷ್ಟು ಸಂಕಷ್ಟಕ್ಕೆ ತುತ್ತಾಗಿದ್ದು, ಹೀಗಾಗಿ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದರು. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಲ್ಲಿ ಕೊರೊನಾದಿಂದ ವಯಸ್ಕರು ಮೃತಪಟ್ಟಿದ್ದರೆ, ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದರು.
ಕೊನೆಗೂ ಬದುಕಿ ಬರಲಿಲ್ಲ ನಟ ಸಂಚಾರಿ ವಿಜಯ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ (38) ಚಿಕಿತ್ಸೆ ಫಲಕಾರಿಯಾಗದೆ ಅಪೋಲೊ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸಂಚಾರ ವಿಜಯ್ ಕೊನೆಯುಸಿರೆಳೆದಿದ್ದಾರೆ ಎಂಬುದನ್ನು ಒಪ್ಪಲು ಬಹಳ ಕಷ್ಟವಾಗುತ್ತಿದೆ. ಲಾಕ್ಡೌನ್ಗೂ ಮೊದಲು ಕೆಲವು ಬಾರಿ ಅವರನ್ನ ಭೇಟಿಯಾಗಿದ್ದೆ. ಎಲ್ಲರೂ ಅವರ ಮುಂಬರುವ ಚಿತ್ರಕ್ಕಾಗಿ ನಿರೀಕ್ಷಿತರಾಗಿದ್ದರು.. ಅದು ರಿಲೀಸ್ಗೆ ಕಾಯುತ್ತಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ಎಂದಿದ್ದಾರೆ. ಇನ್ನು ಸಂಚಾರಿ […]