ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಬದುಕುವ ಸಾಧ್ಯತೆ ಕಡಿಮೆ: ವೈದ್ಯರ ಹೇಳಿಕೆ
ಬೆಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯವಾಗಿದ್ದು, ಅವರು ಬದುಕುವುದು ಕಷ್ಟವೆಂದು ವೈದ್ಯರು ತಿಳಿಸಿದ್ದಾರೆ. ಸ್ನೇಹಿತ ನವೀನ್ ಜೊತೆ ಶನಿವಾರ ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ವಿಜಯ್ ಅವರ ಮೆದುಳಿನ ಎರಡೂ ಭಾಗಕ್ಕೆ ಹೊಡೆತ ಬಿದ್ದು, ರಕ್ತ ಹೆಪ್ಪುಗಟ್ಟಿತ್ತು. ಭಾನುವಾರ ಬೆಳಿಗ್ಗೆಯೇ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿದ್ದ ಅಪೋಲೊ ಆಸ್ಪತ್ರೆ ವೈದ್ಯರು, ವಿಜಯ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದರು. ಆದರೆ, ಇದುವರೆಗೂ ವಿಜಯ್ ಅವರಿಗೆ ಪ್ರಜ್ಞೆ ಬಂದಿಲ್ಲ. ಶಸ್ತ್ರಚಿಕಿತ್ಸೆ […]
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಮತ್ತು ವಿತರಕ ಕೆ.ಸಿ.ಎನ್ ಚಂದ್ರಶೇಖರ್ ಸೋಮವಾರ ನಿಧನ ಹೊಂದಿದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಂದೆ ಕೆ.ಸಿ.ಎನ್.ಗೌಡರ ಮಾರ್ಗದರ್ಶನದಲ್ಲಿ ಚಲನಚಿತ್ರ ನಿರ್ಮಾಣ, ಪ್ರದರ್ಶನ, ಚಿತ್ರ ವಿತರಣೆಯಲ್ಲಿ ಅಪಾರ ಅನುಭವಗಳಿಸಿದ್ದರು. ಬೆಂಗಳೂರಿನ ನವರಂಗ್, ಊರ್ವಶಿ ಮತ್ತು ದೊಡ್ಡಬಳ್ಳಾಪುರದ ರಾಜ್ ಕಮಲ್ ಚಿತ್ರಮಂದಿರದ ಮಾಲೀಕರಾಗಿದ್ದರು. ಐವತ್ತಕ್ಕೂ ಹೆಚ್ಚು ಚಿತ್ರ ನಿರ್ಮಾಣ ಮಾಡಿದ್ದ ಅವರು, ಸೆನ್ಸಾರ್ ಮಂಡಳಿ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ದಾರಿ […]
ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ
ಬೆಂಗಳೂರು: ಅಪಘಾತಕ್ಕೀಡಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ತಿಳಿಸಿದ್ದಾರೆ. ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಕನಕವಾಗ್ತಿದೆ. ರಿಕವರಿ ಚಾನ್ಸ್ ಕಡಿಮೆ ಇದೆ. ಈ ವಿಷಯವನ್ನ ವಿಜಯ್ ಅವರ ಕುಟುಂಬಕ್ಕೆ ಈಗಾಗಲೇ ತಿಳಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶನಿವಾರ ರಾತ್ರಿ ಅಪಘಾತಕ್ಕೀಡಾದ ನಟ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಮೆದುಳಿನ ಬಲ ಭಾಗ […]