ಉಡುಪಿ: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ವತಿಯಿಂದ ಅಂಬಲಪಾಡಿ ರಿಲಾಯನ್ಸ್ ಪೆಟ್ರೋಲ್ ಬಂಕ್ನ ಎದುರುಗಡೆ ಇಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ವಕೀಲರಾದ ಶಿವರಾಮ ಶ್ರೀಯಾನ್, ರೆನಾಲ್ಡ್ ಪ್ರವೀಣ್ ಕುಮಾರ್, ವಿಲ್ಸನ್ ರೊಡ್ರಿಗಸ್, ಹಬೀಬ್ ಅಲಿ ಖಾದರ್, ಅನಂತ್ ನಾಯಕ್, ಸದಾಶಿವ ಅಮೀನ್, ನಾಗರಂಜನ್, ಸಂಕಪ್ಪ […]
ಸಿಇಟಿ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ
ಬೆಂಗಳೂರು: ಪ್ರಸಕ್ತ ಸಾಲಿನ (2021–22) ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ–2021) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ (ಜೂನ್ 15) ಆರಂಭಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಜೂನ್ 15ರಿಂದ ಜುಲೈ 10ರ ಸಂಜೆ 5.30ರವರೆಗೆ ಸಿಇಟಿಗೆ ನೋಂದಣಿ ಮತ್ತು ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಜುಲೈ 13 ಕೊನೆಯ ದಿನ. ವಿಶೇಷ ಪ್ರವರ್ಗಗಳ ಪ್ರಮಾಣಪತ್ರವನ್ನು ಜುಲೈ 14ರಿಂದ 20ರ ಒಳಗೆ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಗಳಲ್ಲಿ ತಿದ್ದುಪಡಿಗೆ […]
ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಅರ್ಥಿಕವಾಗಿ ತೀರ ಹಿಂದುಳಿದ ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ
ಹೂಡೆ: ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಸೂರಿಲ್ಲದವರಿಗೆ ಸೂರು ಒದಗಿಸುವ ಕಾರ್ಯಕ್ರಮದಡಿಯಲ್ಲಿ ದಾನಿಗಳ ಸಹಾಯದಿಂದ ಅರ್ಥಿಕವಾಗಿ ಹಿಂದುಳಿದ ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ ಮಾಡಲಾಯಿತು. ಮನೆ ಮಾಲೀಕರಾದ ಅನ್ವರ್ ಸಾದೀಕ್ ಮತ್ತು ದೇವದಾಸ್ ಖಾರ್ವಿ ಅವರಿಗೆ ಮನೆಯ ಕೀಲಿಕೈ ನೀಡುವ ಮೂಲಕ ಮನೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಘಟಕದ ಅಧ್ಯಕ್ಷ ನಿಸಾರ್ ಉಪ್ಪಿನಕೋಟೆ ಅವರು ಅನ್ವರ್ ಸಾದೀಕ್ ಅವರಿಗೆ ಕೀಲಿಕೈ ಕೊಟ್ಟು ಶುಭ ಹಾರೈಸಿದರು. ದೇವದಾಸ ಖಾರ್ವಿಯವರಿಗೆ ಪ್ರೊ. ಅಬ್ದುಲ್ […]
ನಾಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗಳೂರಿಗೆ
ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಜೂ.16ರಂದು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದು, ಅವರ ಪ್ರವಾಸ ವಿವರ ಹೀಗಿದೆ. ಅಂದು ಮಧ್ಯಾಹ್ನ 3.30ಕ್ಕೆ ಅವರು ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.20ಕ್ಕೆ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳುವ ಅವರು, ಬಳಿಕ 4.45ಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ತೆರಳುವರು. ಅಲ್ಲಿ 5 ಗಂಟೆಗೆ ರಾಜ್ಯದ ಸಚಿವರ ಜೊತೆ ಸಭೆ ನಡೆಸುವರು. ರಾತ್ರಿ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ […]
ಕಟಪಾಡಿ: ₹22.72 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ; ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪು ತಾಲೂಕಿನ ಕಟಪಾಡಿ ಪ್ರದೇಶದಲ್ಲಿ ₹22.72 ಕೋಟಿ ವೆಚ್ಚದಲ್ಲಿ ಅಂಡರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ (ಓವರ್ ಪಾಸ್) ಅನಿವಾರ್ಯತೆಯಿದೆ ಎಂದು ಕೇಂದ್ರ ಸಚಿವರಿಗೆ ಮನದಟ್ಟು ಮಾಡಲಾಗಿತ್ತು. ಅದರಂತೆ ಅಂಡರ್ ಪಾಸಿನ ಬದಲು ಓವರ್ ಪಾಸ್ ನಿರ್ಮಿಸಲು ಕೇಂದ್ರ ತಾತ್ವಿಕ […]