ಬ್ರಹ್ಮಾವರ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಬ್ರಹ್ಮಾವರ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ನಿವಾಸಿ ನಾರಾಯಣ ನಾಯಕ್ (45) ಇಂದು ಶವವಾಗಿ ಪತ್ತೆಯಾಗಿದ್ದಾರೆ. ಕುಮ್ರಗೋಡು ಗ್ರಾಮದ ಮಾಬುಕಳ ಸೇತುವೆಯ ರಾಹೆ 66ರ ಎಡಬದಿಯ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ನಾರಾಯಣ ನಾಯಕ್ ಅವರು ಚಾಂತಾರು ಗ್ರಾಮದ ವಿಲ್ಸಿಲ್ಮಾ ಕಾಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿ, ಮಕ್ಕಳೊಂದಿಗೆ ವಾಸವಾಗಿದ್ದರು. ಅವರು ಜೂನ್ 14ರ ಮಧ್ಯಾಹ್ನ 3 ಗಂಟೆಯಿಂದ ಮನೆಯಿಂದ ಕಾಣೆಯಾಗಿದ್ದರು. ಇಂದು ಅವರು ಶವವಾಗಿ ಪತ್ತೆಯಾಗಿದ್ದು, ಮಾನಸಿಕ ಖಿನ್ನತೆ […]

ಅಜೆಕಾರು: ಕೆರೆಯಲ್ಲಿ‌ ಮೀನು ಹಿಡಿಯಲು‌ ಹೋದ ಬಾಲಕ ನೀರಿನಲ್ಲಿ‌ ಮುಳುಗಿ‌ ಮೃತ್ಯು

ಉಡುಪಿ: ಗೆಳೆಯರೊಂದಿಗೆ ಕೆರೆಯಲ್ಲಿ ಮೀನು ಹಿಡಿಯಲು ಹೋದ ಬಾಲಕನೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಎಳ್ಳಾರೆ ಗ್ರಾಮದಲ್ಲಿ ಇಂದು ಸಂಭವಿಸಿದೆ. ಮೃತ ಬಾಲಕನನ್ನು ಎಳ್ಳಾರೆ ಗ್ರಾಮದ ಸೋಮನಾಥ್‌ ಶೇರಿಗಾರ್ ಎಂಬವರ ಪುತ್ರ ಆದಿತ್ಯ (14) ಎಂದು ಗುರುತಿಸಲಾಗಿದೆ. ಈತ ಇಂದು ಮಧ್ಯಾಹ್ನ ತನ್ನ ಗೆಳೆಯರೊಂದಿಗೆ ಕೆರೆಗೆ ಮೀನು ಹಿಡಿಯಲು ಹೋಗಿದ್ದನು. ಈ ವೇಳೆ ಆದಿತ್ಯ ಆಕಸ್ಮಿಕವಾಗಿ‌ ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ಗೆಳೆಯರು ರಕ್ಷಣೆಗೆ ಧಾವಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಅಜೆಕಾರು […]

ಉಡುಪಿ: ಜೂನ್ 17ರ ಲಸಿಕಾ ಲಭ್ಯತೆ ವಿವರ

ಉಡುಪಿ: ಜಿಲ್ಲೆಯಲ್ಲಿ ಜೂನ್ 17 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಹಾಗೂ ಉಡುಪಿ ನಗರ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ ಲಸಿಕೆ ಲಭ್ಯವಿರುವುದಿಲ್ಲ. ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜೂನ್ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್) ಲಭ್ಯವಿದೆ. ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ […]

ಖಾಸಗಿ ಅನುದಾನಿತ ಶಾಲಾ-ಕಾಲೇಜಿನ ಎಲ್ಲ ಸಿಬ್ಬಂದಿಗೂ ಪರಿಹಾರ ಘೋಷಿಸಿ: ಸಿದ್ದರಾಮಯ್ಯ

ಬೆಂಗಳೂರು: ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಸಂಬಳ ಪಡೆಯದೆ ದುಡಿಯುತ್ತಿರುವ ಎಲ್ಲ ಸಿಬ್ಬಂದಿಗೂ ಪರಿಹಾರ ಘೋಷಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೊರೊನಾ ಮೊದಲ ಅಲೆಯಲ್ಲೂ ಅನುದಾನಿತ ಶಾಲೆ ಕಾಲೇಜುಗಳ ಸಿಬ್ಬಂದಿ ಬಹಳಷ್ಟು ಸಂಕಷ್ಟಕ್ಕೀಡಾಗಿದ್ದರು. ಆಗಲೂ ಸರ್ಕಾರ ಅವರ ನೆರವಿಗೆ ಬರಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಸಂಬಳಗಳಿಲ್ಲದೆ ಈ ಕುಟುಂಬಗಳು ವಿಪರೀತ ಸಂಕಷ್ಟಕ್ಕೆ ಸಿಲುಕಿವೆ ಎಂದೂ ಹೇಳಿದ್ದಾರೆ. ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ಅತಿಥಿ ಶಿಕ್ಷಕರು ಬೀದಿ ಬದಿ ತರಕಾರಿ, ಹೂ, ಹಣ್ಣು ಮಾರಾಟ […]

ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ಕೆಲವು ಶಾಸಕರು ಬೇಡಿಕೆ ಇಟ್ಟಿರುವುದು ಸತ್ಯ: ಈಶ್ವರಪ್ಪ

ಬೆಂಗಳೂರು: ಪಕ್ಷದ ಕೆಲವು ಶಾಸಕರು ದೆಹಲಿಗೆ ಹೋಗಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಡಿ ಎಂಬ ಬೇಡಿಕೆ ಇಟ್ಟಿರುವುದು ಸತ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ನಾಯಕತ್ವ ಬದಲಾವಣೆ ವಿವಾದ ಶಮನ ಮಾಡಲು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಅವರ ರಾಜ್ಯದ ಭೇಟಿಗೆ ಮೊದಲೇ ಈಶ್ವರಪ್ಪ ಅವರು ಈ ಹೇಳಿಕೆ ನೀಡಿರುವುದು ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪನವರೇ 2ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ. ಇನ್ನು […]