ದ್ವಿತೀಯ ಪಿಯು ಫಲಿತಾಂಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಮಧ್ಯಂತರ ತಡೆ ನೀಡಿದೆ. ರಿಪೀಟರ್ಸ್ ಗೆ ಪರೀಕ್ಷೆ ನಡೆಸುವ ಬಗ್ಗೆ ಆಕ್ಷೇಪಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ವರದಿ ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಸೂಚನೆ ನೀಡಿತ್ತು. ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿದೆ. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಮತ್ತು 76 ಸಾವಿರ ರಿಪೀಟರ್ಸ್ ಗಳ ಫಲಿತಾಂಶದ ಬಗ್ಗೆ ತಜ್ಞರ […]

ಆಡಳಿತದಲ್ಲಿ‌ ಭ್ರಷ್ಟಾಚಾರ, ಹಸ್ತಕ್ಷೇಪ ಹೆಚ್ಚಾಗಿದೆ: ಎಚ್.ವಿಶ್ವನಾಥ್

ಬೆಂಗಳೂರು: ಆಡಳಿತದಲ್ಲಿ ಬೇರೆಯವರ ಹಸ್ತಕ್ಷೇಪ, ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದರಿಂದ ಬಿಜೆಪಿ‌ ಸರ್ಕಾರದ ಮೇಲೆ ಸಾರ್ವಜನಿಕರ ಅಭಿಪ್ರಾಯ ಹೋಗಿದೆ ಎಂದು ನಾಮನಿರ್ದೇಶಿತ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್​ ಭೇಟಿ ಬಳಿಕ ಮಾತನಾಡಿದ ಅವರು, ಮೈತ್ರಿ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿ ಬಂದಿದ್ದೇವೆ. ಆದರೆ, ಕುಟುಂಬ ರಾಜಕಾರಣ, ರಾಕ್ಷಸ ರಾಜಕಾರಣ ಇಲ್ಲೂ ಕೂಡ ಕಾಣುತ್ತಿದ್ದೇವೆ. ನಾನು ಯಾವುದೇ ಬಣದಲ್ಲೂ ಇಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತ. ಪಕ್ಷದ ಹಿತದೃಷ್ಟಿಯಿಂದ ಕೆಲವೊಂದು ಮಾತುಗಳನ್ನು ಹೇಳಿದ್ದೇನೆ […]

ಭಾರತೀಯ ರೈಲ್ವೆ ಇಲಾಖೆಯಲ್ಲಿ 3591 ಹುದ್ದೆಗಳು: ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೇ ನೇರ ನೇಮಕಾತಿ ನಡೆಯಲಿದ್ದು, 10ನೇ ತರಗತಿ ಹಾಗೂ ಐಟಿಐ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆ ಉತ್ತೀರ್ಣರಾಗಿರಬೇಕು. ವಯೋಮಿತಿ: ಗರಿಷ್ಠ 24 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ. ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷಗಳ […]

ಉಡುಪಿ: ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

ಉಡುಪಿ: ಮೈನ್‌ ಸ್ವಿಚ್ ಬೋರ್ಡ್ ಪರಿಶೀಲಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಲೆಕ್ಟ್ರೀಷಿಯನ್ ಮೃತಪಟ್ಟ ಘಟನೆ ಉದ್ಯಾವರ ಕನಕೋಡದಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತನನ್ನು ಮಲ್ಪೆ‌ ಕೊಡವೂರು ನಿವಾಸಿ ಮನೋಜ್‌ ಕರ್ಕೇರ ಮತ್ತು ಶಶಿಕಲಾ ದಂಪತಿಯ ಪುತ್ರ ಮೋಕ್ಷಿತ್ ಕರ್ಕೇರ (25 ) ಎಂದು ಗುರುತಿಸಲಾಗಿದೆ. ಈತ ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದು, ಜತೆಗೆ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ […]