ಶೇ. 5.05 ಕೋವಿಡ್ ಪಾಸಿಟಿವಿಟಿ ದರ ಹೊಂದಿರುವ ಉಡುಪಿ ಜಿಲ್ಲೆಯಲ್ಲೂ ಅನ್ ಲಾಕ್ ಮಾಡಿ: ಸಿಎಂಗೆ ಶಾಸಕ ರಘುಪತಿ ಭಟ್ ಮನವಿ

ಉಡುಪಿ: ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ನೀಡಿದ ಆದೇಶದ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯನ್ನು ಸೇರಿಸಿ ಅನ್ ಲಾಕ್ ಮಾಡುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೊವೀಡ್ ಪರೀಕ್ಷೆ ನಡೆದಿದ್ದು, ಪ್ರಸ್ತುತ ದಿನಕ್ಕೆ 3 ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಸದ್ಯ ಜಿಲ್ಲೆಯಲ್ಲಿ ಶೇ.5.05 ಪಾಸಿಟಿವಿಟಿ ದರ […]

ಬಿಜೆಪಿ‌ ಮುಖಂಡ, ಸಮಾಜ ಸೇವಕ ಸುಧಾಕರ್ ಶೆಟ್ಟಿ ಮಟ್ಟಿ ಬೈಲು ನಿಧನ

ಹಿರಿಯಡಕ: ಬಿಜೆಪಿ ಮುಖಂಡ, ಸಮಾಜಸೇವಕ ಸುಧಾಕರ್ ಶೆಟ್ಟಿ ಮಟ್ಟಿ ಬೈಲು (56) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಸುಧಾಕರ್ ಶೆಟ್ಟಿ ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಪುತ್ತಿಗೆ ಸೇತುವೆ ಉಳಿಸುವಲ್ಲಿ ಹೋರಾಟ ನಡೆಸಿ ಸೈ ಎನಿಸಿಕೊಂಡಿದ್ದರು. ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರತಿವರ್ಷ ಸಾವಿರಾರು ಕದಿರು ಸೇವೆ ನೀಡುತ್ತಿದ್ದರು. ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು, ಕಾಪು ಕ್ಷೇತ್ರದ ಮಾಜಿ ಶಾಸಕ ದಿ. ಭಾಸ್ಕರ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಬಿಜೆಪಿ […]

ಕೋವಿಡ್‌ ನಿಂದ ಮೃತರಾದ ರಾಜ್ಯದ 31 ಪತ್ರಕರ್ತರಿಗೆ ಸರಕಾರದಿಂದ ಪರಿಹಾರ: ತಗಡೂರು

ಉಡುಪಿ: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಸುಮಾರು 70 ಮಂದಿ ಮೃತಪಟ್ಟಿದ್ದು, ಇದರಲ್ಲಿ ಮೊದಲ ಅಲೆಯಲ್ಲಿ ಮೃತಪಟ್ಟ ಒಟ್ಟು 31 ಮಂದಿ ಪತ್ರಕರ್ತರ ಕುಟುಂಬಗಳಿಗೆ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಹಾಗೂ ಎರಡು ಕುಟುಂಬಗಳಿಗೆ ಮನೆ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶ್ರಮಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು. ರಾಜ್ಯದಲ್ಲಿ ಸುಮಾರು […]

ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆ

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10ರಷ್ಟು ಇದೆ. ಮೈಸೂರಿನಲ್ಲಿ ಶೇ. 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಶೇ 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, […]

ಮರವಂತೆಯಲ್ಲಿ ಹಾನಿಗೊಳಗಾದ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ ತಕ್ಷಣ ಬಿಡುಗಡೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಡುಪಿ ಜೂ.19: ಉಡುಪಿ ಜಿಲ್ಲೆಯಲ್ಲಿ ತೌಖ್ತೆ ಚಂಡಮಾರುತದಿAದ ಸಮುದ್ರ ಕೊರೆತ ಉಂಟಾಗಿ ಹಾನಿಗೊಳಗಾದ ಬೈಂದೂರು ತಾಲೂಕು ಮರವಂತೆಯ 1.5 ಕಿಮೀ ರಸ್ತೆಯ ಮರು ನಿರ್ಮಾಣಕ್ಕೆ ತಕ್ಷಣವೇ 3 ಕೋಟಿ ರೂ ಗಳನ್ನು ಬಿಡುಗಡೆಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.   ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾ ದಿಂದ , ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು , ಸಂಬoದಿಸಿದ […]