ಸಣ್ಣ ಪುಟ್ಟ ಅಂಗಡಿಗಳಿಗೂ ಪರ್ಯಾಯ ದಿನಗಳಲ್ಲಿ ತೆರೆಯಲು ಅವಕಾಶ ನೀಡಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮನವಿ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕ್ರಮ ಶ್ಲಾಘನೀಯವಾದರೂ ಕಳೆದ ೫೦ ದಿನಗಳಿಂದ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಯಾದ ನಿರ್ಬಂಧಗಳಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುವುದು ಕಷ್ಟವಾಗಿದೆ. ಬಟ್ಟೆ ಮಳಿಗೆಗಳಲ್ಲಿ ಹಾಗೂ ಇನ್ನಿತರ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ನೌಕರಿಯಿಲ್ಲದೆ ದಿನನಿತ್ಯದ ಅಗತ್ಯಗಳನ್ನು ಪೂರೈಸುವುದು ಕಷ್ಟಕರವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ತಿಳಿಸಿದ್ದಾರೆ. ಸಾಮಾನ್ಯ ಜನರನ್ನೂ ಗಮನದಲ್ಲಿಟ್ಟುಕೊಂಡು ಈಗಾಗಲೇ ಕೆಲವು ವ್ಯಾಪಾರಗಳಿಗೆ ವಿನಾಯಿತಿ ನೀಡಲಾಗಿದ್ದು ಇನ್ನುಳಿದ ಸಣ್ಣ ಪುಟ್ಟ […]

ಕಾರ್ಕಳ:ಸಾಣೂರು ಗ್ರಾಮದ ಅಂಗಡಿ ವರ್ತಕರಿಗೆ- ರಿಕ್ಷಾ ಚಾಲಕರಿಗೆ ಕೋವಿಡ್ ಟೆಸ್ಟ್ ತಪಾಸಣಾ ಶಿಬಿರ

ಕಾರ್ಕಳ: ಪ್ರಾಥಮಿಕ ಆರೋಗ್ಯ ಕ್ರೇಂದ್ರ, ಇರ್ವತ್ತೂರು ಮತ್ತು ಸಾಣೂರು ಗ್ರಾಮ ಪಂಚಾಯತ್ ಇವರ ಸಹಕಾರದೊಂದಿಗೆ ಸಾಣೂರು ಗ್ರಾಮದ 2ನೇ ಮತ್ತು 3ನೇ ವಾರ್ಡ್ನ ಅಂಗಡಿಯವರಿಗೆ, ರಿಕ್ಷಾ ಚಾಲಕರಿಗೆ ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ತಪಾಸಣಾ ಶಿಬಿರವು ನಡೆಯಿತು. 60 ಮಂದಿ ತಪಸಣಾ ಶಿಬಿರದಲ್ಲಿ ಭಾಗವಹಿಸಿದ್ದರು. ಶಿಬಿರದಲ್ಲಿ ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕ್ರೇಂದ್ರದ ರೋಹಿಣಿ, ತಾಲೂಕು ಆರೋಗ್ಯ ಇಲಾಖಾ ಕೇಂದ್ರದ ದಿವ್ಯಾ ಪೂಜಾರಿ, ಆಶಾ ಕಾರ್ಯಕರ್ತೆ ವಿಶಾಲಾಕ್ಷೀ, ಮತ್ತು ಪಂಚಾಯತ್ ಸದಸ್ಯರಾದ ಸತೀಶ್ ಪುಜಾರಿ, ವಸಂತ್ ಹಾಗೂ […]

ಮಂಗಳೂರು: ಜುಲೈ 5ರ ವರೆಗೆ ಲಾಕ್ ಡೌನ್ ಮುಂದುವರಿಕೆ; ಅಗತ್ಯ ವಸ್ತು ಖರೀದಿ ಅವಧಿ ವಿಸ್ತರಣೆ

ಮಂಗಳೂರು: ಕೊರೊನಾ ಸೋಂಕು‌ ದೃಢಪಡುವ ಪಾಸಿಟಿವಿಟಿ ದರವನ್ನು‌ ಶೇ. 5ಕ್ಕಿಂತ ಕೆಳಗೆ ತರುವ ಉದ್ದೇಶದಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಅನ್ನು ಜುಲೈ 5 ರ ವರೆಗೆ ಮುಂದುವರಿಸಿ ಹಾಗೂ ಅಗತ್ಯ ವಸ್ತುಗಳ ಖರೀದಿ ಅವಧಿಯನ್ನು ಮಧ್ಯಾಹ್ನ 1ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಹೊಸ ಮಾರ್ಗಸೂಚಿ ನಾಳೆಯಿಂದ (ಜೂನ್ 21) ಅನ್ವಯವಾಗಲಿದ್ದು, ಕೆಲವೊಂದು ಅಗತ್ಯ ಸೇವೆಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಜೂನ್ 21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು […]

ಉಡುಪಿ: ನಾಳೆಯ (ಜೂನ್ 21) ಕೋವಿಡ್ ಲಸಿಕೆ ವಿವರ

ಉಡುಪಿ: ಜಿಲ್ಲೆಯಲ್ಲಿ ನಾಳೆ (ಜೂನ್ 21) ಕೋವಿಡ್-19 ಲಸಿಕಾ ಮಹಾಮೇಳ ನಡೆಯಲಿದೆ. ಮಹಾಮೇಳದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆಯನ್ನು ನೀಡಲಾಗುವುದು. ಒಟ್ಟು 21,000 ಕೋವಿಡ್-19 ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾಕರಣದ ಮಹಾ ಮೇಳದ ಉದ್ಘಾಟನೆಯು ಹನುಮಂತನಗರ ಸರಕಾರಿ […]

ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಮಗು ಮೃತ್ಯು

ಉಪ್ಪಿನಂಗಡಿ: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉಪ್ಪಿನಂಗಡಿ ಯಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಇಂದು ನಡೆದಿದೆ. ಯಬಜತ್ತೂರು ಗ್ರಾಮದ ಕೆಮ್ಮಾರದ ನಿವಾಸಿಗಳಾದ ನಿವೃತ್ತ ಸೈನಿಕ ಸೈಜು ಹಾಗೂ ದೀಪ್ತಿ ದಂಪತಿ ಪುತ್ರಿ ಶ್ರೇಯಾ(2.5) ಮೃತಪಟ್ಟ ಮಗು. ಮೃತ ಶ್ರೇಯಾ ಇಂದು ಆಟವಾಡುತ್ತಾ, ತಿಳಿಯದೇ ಇಲಿಪಾಷಾಣಾ ತಿಂದಿದ್ದಾಳೆ. ಈ ವಿಚಾರ ಪೋಷಕರಿಗೆ ತಿಳಿಯುತ್ತಿದ್ದಂತೆ ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಈ ಬಗ್ಗೆ […]