ಉಡುಪಿ: ಎರಡೂವರೆ ವರ್ಷ ಪ್ರಾಯದ ಮಗು ಕೋವಿಡ್ ಗೆ ಬಲಿ

ಉಡುಪಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಎರಡೂವರೆ ವರ್ಷ ಪ್ರಾಯದ ಗಂಡು ಮಗು ಭಾನುವಾರ ಕೋವಿಡ್ ನಿಂದ ನಿಧನವಾಗಿದೆ. ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಮನೆಯವರು ಜೂ.17ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿನ ಕೋವಿಡ್ ಪರೀಕ್ಷೆ ಪಾಸಿಟಿವ್ ಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ನಿನ್ನೆ ಸಾವನ್ನಪ್ಪಿದೆ ಎಂದು ಡಿಎಚ್‌ಓ ತಿಳಿಸಿದ್ದಾರೆ.

ಬೆಳ್ತಂಗಡಿ: ಶ್ರೀಸಾಯಿರಾಮ್ ಪ್ಲವರ್ಸ್ ಆ್ಯಂಡ್ ಡೆಕೊರೆಟರ್ಸ್ ಹುಣ್ಸೆಕಟ್ಟೆ ವತಿಯಿಂದ ವಾಹನ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಕೋವಿಡ್ 19 ಉಚಿತ ಸೇವೆಗಾಗಿ‌ ಶ್ರೀಸಾಯಿರಾಮ್ ಪ್ಲವರ್ಸ್ ಆ್ಯಂಡ್ ಡೆಕೊರೆಟರ್ಸ್ ಹುಣ್ಸೆಕಟ್ಟೆ ಇವರ ವತಿಯಿಂದ ಒಂದು ವಾರಗಳ ಕಾಲ ಓಮಿನಿ ವಾಹನವನ್ನು ನೀಡಲಾಯಿತು. ವಾಹನದ ಮಾಲಕರಾದ ಸೀತಾರಾಮ್ ಆರ್. ಅವರು ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಅವರ ಮೂಲಕ ಪಂಚಾಯತ್ ಗೆ ವಾಹನ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಕಿರಿಯ ಇಂಜಿನಿಯರ್ ಮಹಾವೀರ ಆರಿಗ, ಸಿಬ್ಬಂದಿ ಮೆಟಿಲ್ಡ ಡಿಕೋಸ್ತ, ಸಚಿನ್ ಸಾಲ್ಯಾನ್ ಮತ್ತು ವಾಹನದ ಚಾಲಕರಾದ […]

ಉಡುಪಿ: ಅನ್ ಲಾಕ್ ಮಾರ್ಗಸೂಚಿ ಪ್ರಕಟ; ಸಂಪೂರ್ಣ ಮಾಹಿತಿ ಇಲ್ಲಿದೆ

ಉಡುಪಿ: ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕೆಳಗಿಳಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಜೂನ್ 21) ಅನ್ ಲಾಕ್ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಉಡುಪಿ ಜಿಲ್ಲಾಧಿಕಾರಿ ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ನೂತನ ಮಾರ್ಗಸೂಚಿಯ ವಿವರ ಹೀಗಿದೆ: ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- A ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ಜಿಲ್ಲೆಯಾದ್ಯಾಂತ ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ […]

ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ […]

ಉಡುಪಿ ಸಹಿತ ಆರು ಜಿಲ್ಲೆಗಳು ಅನ್ ಲಾಕ್: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ, ಶಿವಮೊಗ್ಗ ಸೇರಿದಂತೆ ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಉತ್ತರಕನ್ನಡ, ಬೆಳಗಾವಿ, ಮಂಡ್ಯ,ಕೊಪ್ಪಳ, ಚಿಕ್ಕಬಳ್ಳಾಪುರ, […]