ತುಳು ರಾಜ್ಯದ ಬೇಡಿಕೆಗೆ ನಮ್ಮ ಬೆಂಬಲವಿಲ್ಲ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ನಾವೆಲ್ಲರೂ ಕರ್ನಾಟಕದವರು, ಪ್ರತ್ಯೇಕ ತುಳು ರಾಜ್ಯದ ಬೇಡಿಕೆ ನಮ್ಮ ಮುಂದಿಲ್ಲ. ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಕೂಡ ಇಲ್ಲ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕು. ನಮ್ಮಲ್ಲಿನ ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಯ ಮಾನ್ಯತೆಗೆ ನಮ್ಮ ಹೋರಾಟ ಇದೆ […]

ಬಸ್ ನಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿದರೆ ಕ್ರಿಮಿನಲ್ ಕೇಸ್ ದಾಖಲು: ಡಿಸಿ ಜಗದೀಶ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸುವುದು ನಮ್ಮ ಗುರಿ. ಎಲ್ಲಿ ಪ್ರಕರಣ ಹೆಚ್ಚಾಗುತ್ತಿದೆ. ಏನು ಕಾರಣ ಎಂಬುವುದರ ಕುರಿತು ಅವಲೋಕನ ನಡೆಸಿ, ಆ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಬಸ್ ನಲ್ಲಿ ಪ್ರಯಾಣಿಕರನ್ನು ಭರ್ತಿ ಮಾಡುವ ಬಹಳಷ್ಟು ಮಂದಿ ನಮ್ಮಲ್ಲಿದ್ದಾರೆ. ಯಾರಾದ್ರೂ ಶೇ. 50ಕ್ಕಿಂತ ಹೆಚ್ಚಿನ ಜನರನ್ನು ಬಸ್ಸಿನಲ್ಲಿ ತುಂಬಿಸಿದರೆ, ಅರ್ಧದಲ್ಲೇ ಪ್ರಯಾಣಿಕರನ್ನು ಇಳಿಸಿ ಬಸ್ ಮಾಲೀಕರು, ನಿರ್ವಾಹಕರು, ಚಾಲಕರ ಮೇಲೆ ಕ್ರಿಮಿನಲ್ ಪ್ರಕರಣ […]

ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡಿ: ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ

ಉಡುಪಿ: ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಮುಖ್ಯಮಂತ್ರಿ ಹಾಗೂ ಸರ್ಕಾರ ಮುಖ್ಯ ಕಾರ್ಯದರ್ಶಿ ಬಳಿ ಮನವಿ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಿಲ್ಲೆಯ ಆರ್ಥಿಕ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ವರ್ತಕರು ಹಾಗೂ ಸಾರ್ವಜನಿಕರು ಅನ್ ಲಾಕ್ ಮಾಡುವಂತೆ ಕೇಳಿಕೊಂಡಿದ್ದಾರೆ. ಹಾಗಾಗಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿನ್ನೆ ಕರೆ ಮಾಡಿ ವಿನಂತಿ ಮಾಡಿಕೊಂಡಿದ್ದೆ. ಅವರು ಜಿಲ್ಲೆಯ ಹೆಲ್ತ್ ಬುಲೆಟಿನ್ ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ […]

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಿರ್ವ: ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಎನ್ ಸಿಸಿ ಘಟಕವು ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಆಯುಷ್ ಮಂತ್ರಾಲಯವು ನೀಡಿರುವ ಮಾರ್ಗಸೂಚಿಯಂತೆ ಬಿ ವಿತ್ ಯೋಗ, ಬಿ ಏಟ್ ಹೋಂ ಘೋಷವಾಕ್ಯದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು‌ ಇಂದು ಹಮ್ಮಿಕೊಂಡಿತ್ತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಸಾಂಕೇತಿಕವಾಗಿ ಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ಶುಭಹಾರೈಸಿದರು. ಈ […]