ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

ಉಡುಪಿ : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ 3,000 ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್‌ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜದ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ […]

ಉಡುಪಿ: ಪ್ರಧಾನ ಮಂತ್ರಿ‌ ಸುರಕ್ಷಾ ವಿಮಾ ಯೋಜನೆ, ಜೀವನಜ್ಯೋತಿ‌ ವಿಮಾ ಯೋಜನೆಗೆ ಗ್ರಾಪಂ ಸಂಪರ್ಕಿಸಿ

ಉಡುಪಿ: ವಿಮಾ ಸಪ್ತಾಹ ಅಂಗವಾಗಿ ಸಂಜೀವಿನಿ ಮತ್ತು ಇತರೆ ಎಲ್ಲಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ, ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ, ಸ್ವಚ್ಛತಾ ಕಾರ್ಯಕರ್ತರಿಗೆ ಹಾಗೂ ಅದರ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ‌ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆಗಳನ್ನು ಮಾಡಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಮತ್ತು ಬ್ಯಾಂಕ್ ಗಳ ಸಹಯೋಗದಲ್ಲಿ ಇದೇ ಜೂನ್ 24 ಮತ್ತು 25ರಂದು‌ ಸ್ಥಳದಲ್ಲಿಯೇ ವಿಮೆ ಮಾಡಿಸುವ ಶಿಬಿರವನ್ನು ಆಯೋಜಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು‌ […]

ಉಡುಪಿ: ಜಿಲ್ಲೆಯಲ್ಲಿ ನರ್ಮ್ ಬಸ್ ಸಂಚಾರ ಆರಂಭಿಸುವಂತೆ ನಾಗರಿಕ ಸಮಿತಿ ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಯಾಗಿದ್ದು, ವಾಣಿಜ್ಯ ಚಟುವಟಿಕೆ, ಅಂಗಡಿ ಮುಂಗಟ್ಟು, ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಜನ ಜೀವನ ನಿಧಾನಗತಿಯಲ್ಲಿ ಸಹಜಸ್ಥಿತಿಗೆ ಬರುವ ಲಕ್ಷಣಗಳು ಕಂಡುಬಂದಿದೆ. ಆದರೆ ನಾಗರಿಕರು, ಕೂಲಿ ಕಾರ್ಮಿಕರು, ಉದ್ಯೋಗಿಗಳು ಸೂಕ್ತ ಸಂಚಾರ ಸೌಕರ್ಯ ಇಲ್ಲದೆ ಅಸಹಾಯಕ ಪರಿಸ್ಥಿತಿ ಎದುರಿಸುತ್ತಿರುವುದು ಕಂಡುಬಂದಿದೆ. ನಗರದಲ್ಲಿ ನರ್ಮ್ ಬಸ್, ಖಾಸಗಿ ಬಸ್ ಗಳ ಸಂಚಾರ ಆರಂಭಗೊಂಡಿಲ್ಲ. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು, ನಗರದ ಹೊರ ವಲಯದ ಕಾರ್ಮಿಕರು, ಸಾರ್ವಜನಿಕರು ದುಡಿಮೆಗಾಗಿ ಕಿ.ಮೀ. ಗಟ್ಟಲೇ ನಡೆದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ […]

ದ.ಕ.: ನಾಳೆಯಿಂದ (ಜೂ.23) ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಅವಕಾಶ; ಸಚಿವ ಕೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ (ಜೂನ್ 23) ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಟ್ಟೆ, ಜೆರಾಕ್ಸ್, ಚಪ್ಪಲಿ, ಮೊಬೈಲ್ ಅಂಗಡಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಹೀಗಾಗಿ ಅಂಗಡಿ ತೆರೆಯಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೆ, ಜಿಲ್ಲೆಯ ಶಾಸಕರು, ಸಂಸದರು ಲಾಕ್ ಡೌನ್ ನಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ […]

ಕಾರ್ಕಳ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ನಿಧನ

ಕಾರ್ಕಳ: ಕಾರ್ಕಳ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ (65) ಅವರು ಕೋವಿಡ್ ನಿಂದ ಸೋಮವಾರ ನಿಧನ ಹೊಂದಿದರು. ಬೆಳ್ಮಣ್ ನಿವಾಸಿಯಾಗಿರುವ ಅವರು, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಬಿಜೆಪಿ ಬೆಳ್ಮಣ್ ಘಟಕದ ಮಾಜಿ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿದ್ದರು. ಬೆಳ್ಮಣ್ ರೋಟರಿಯ ಸಕ್ರಿಯ ಸದಸ್ಯರಾಗಿದ್ದರು. ನಂದಳಿಕೆ ಬೋರ್ಡ್ ಶಾಲೆ, ಬೆಳ್ಮಣ್ ಸರಕಾರಿ ಪ್ರೌಢಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೃತರು ಪತ್ನಿ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗಣ್ಯರಿಂದ ಸಂತಾಪ: ಮೋಹನ್ ದಾಸ್ ಶೆಟ್ಟಿ  ನಿಧನಕ್ಕೆ ಕಾರ್ಕಳ ಶಾಸಕ ವಿ […]