ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವೃಕ್ಷಾರೋಹಣ ಕಾರ್ಯಕ್ರಮ

ಉಡುಪಿ: ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಇಂದ್ರಾಳಿ ರೈಲ್ವೆ ಸ್ಟೇಷನ್ ನ ಬಳಿ ಬುಧವಾರ ವೃಕ್ಷಾರೋಹಣ ಕಾರ್ಯಕ್ರಮ ಆಯೋಜಿಸಲಾಯಿತು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ. ರೈಲ್ವೆ ಇಂಜಿನಿಯರ್ ವೆಂಕಟೇಶ್, […]

ಉಡುಪಿ: ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರ ಹುದ್ದೆ :ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ಕೋವಿಡ್ -19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ 18 ವರ್ಷದೊಳಗಿನ ಮಕ್ಕಳಿಗೆ ನೈತಿಕ, ಭಾವನಾತ್ಮಕ ಮತ್ತು ಸಾಮಾಜಿಕ ನೆರವನ್ನು ಒದಗಿಸಿ ಅವರನ್ನು ಮಾನಸಿಕ ಆಘಾತದಿಂದ ಹೊರತರಲು ಹಾಗೂ ಮಗುವಿನ ಧೀರ್ಘಕಾಲಿಕ ಸಕಾರಾತ್ಮಕ ಬೆಳವಣಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಬಾಲಹಿತೈಷಿ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.icps.karnataka.gov.in     ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ […]

ಉಡುಪಿ ಜಿಲ್ಲೆ: ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ

ಉಡುಪಿ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೇ 20 ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಪ್ರಯಾಣ ದರ ಪರಿಷ್ಕರಣೆಯನ್ನು ಸಾರ್ವಜನಿಕರ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಸ್ಥಳೀಯ ಜನಸಂಖ್ಯೆಗನುಗುಣವಾಗಿ ಮತು ಟ್ಯಾಕ್ಸಿ ಮಾಲಕ/ ಚಾಲಕರ ಜೀವನ ನಿರ್ವಹಣಾ ವೆಚ್ಚ, ಇಂಧನ ಬೆಲೆಗಳ ಹೆಚ್ಚಳ ಹಾಗೂ ವಾಹನಗಳ ಬೆಲೆ ಮತ್ತು ನಿರ್ವಹಣಾ ವೆಚ್ಚವು ಹೆಚ್ಚಾಗಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕೆಳಗಿನಂತೆ ದರ ನಿಗಧಿಪಡಿಸಿ, ಆದೇಶ ಹೊರಡಿಸಿ, ನಿರ್ಣಯ ಕೈಗೊಳ್ಳಲಾಗಿರುತ್ತದೆ. […]

ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಕಾಲೇಜು ಶುರು

ಚಿಕ್ಕಬಳ್ಳಾಪುರ: 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಲೇಜು ಆರಂಭದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಲೇಜು ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಬಹುದು ಎಂದು ತಾಂತ್ರಿಕ ಸಲಹಾ […]

ವಂಡ್ಸೆ ವನದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ವೃಕ್ಷಾಪರೋಹಣ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು:  ಶ್ಯಾಮ್ ಪ್ರಸಾದ ಮುಖರ್ಜಿಯವರ ಬಲಿದಾನ ದಿವಸದ ಸ್ಮರಣೆ ಪ್ರಯುಕ್ತ ಜೂನ್ ೨೩ ರಿಂದ ಜುಲಾಯಿ ೬ ರ ವರೆಗೆ ನಡೆಯಲಿರುವ ವೃಕ್ಷಾಪರೋಹಣ ಕಾರ್ಯಕ್ರಮದ ಅಂಗವಾಗಿ ವಂಡ್ಸೆ ವನದುರ್ಗಾಪರಮೇಶ್ವರಿ (ಕಾನಮ್ಮ) ದೇವಸ್ಥಾನದ ವಠಾರದಲ್ಲಿ ಈ ಅಭಿಯಾನಕ್ಕೆ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಿ.ಕೆ. ಶಿವರಾಮ ಶೆಟ್ಟಿ, ವಂಡ್ಸೆ ಜಿಲ್ಲಾ ಪಂಚಾಯತ್ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, […]