ಸರಳವಾಗಿ ಕಲೀರಿ ಇಂಗ್ಲಿಷ್:ಈ ವಾರದ ಇಂಗ್ಲಿಷ್ ಕ್ಲಾಸ್ ಇಲ್ಲಿದೆ.
ನಿಮಗೆ ಬೇಗ ಬೇಗ ಇಂಗ್ಲೀಷ್ ಕಲಿಬೇಕು, ಇಂಗ್ಲೀಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಉಡುಪಿXPRESS.COM ಮಾಧ್ಯಮ ಸಹಯೋಗದಲ್ಲಿ ಜೀರೋ ಟು ಜೀರೋ ಇಂಗ್ಲೀಷ್ ಕ್ಲಾಸ್ ಶುರುವಾಗಿದೆ. ಇಂಗ್ಲೀಷ್ ತಜ್ಞರಾದ ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲೀಷ್ ಪಾಠ ಮಾಡ್ತಾರೆ. ಕೆಳಗಿನ ಲಿಂಕ್ ಒತ್ತಿ ಈ ವಾರದ ಇಂಗ್ಲೀಷ್ ಕ್ಲಾಸ್ ಗೆ ಎಂಟ್ರಿ ಆಗಿ https://youtu.be/okmfpnxpkE0
ಬಸ್ ಟಿಕೆಟ್ ದರ ಏರಿಸುವ ಮೂಲಕ ಜನಸಾಮಾನ್ಯರ ಸುಲಿಗೆ: ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡನೆ
ಉಡುಪಿ: ಕೋವಿಡ್-19 ಮೊದಲ ಲಾಕ್ ಡೌನ್ ಬಳಿಕ ಖಾಸಗಿ ಬಸ್ ಟಿಕೆಟ್ ದರವನ್ನು ಶೇ. 15ರಷ್ಟು ಹೆಚ್ಚಿಸಲಾಗಿತ್ತು. ಲಾಕ್‌ಡೌನ್ ಸಡಿಲಿಕೆ ಆದರೂ ಇಂಧನ ಬೆಲೆ ಏರಿಕೆಯ ನೆಪವೊಡ್ಡಿ ಟಿಕೆಟ್ ದರವನ್ನು ಇಳಿಕೆ ಮಾಡಲಿಲ್ಲ. ಇದೀಗ ಕೋವಿಡ್ 19 ಎರಡನೇ ಅಲೆಯ ಲಾಕ್‌ಡೌನ್ ಸಡಿಲಿಕೆ ಆಗಿದ್ದು, ಬಸ್ ಟಿಕೆಟ್ ದರವನ್ನು ಶೇ.25ರಷ್ಟು ಹೆಚ್ಚಿಸಲು ಸರಕಾರ ಅನುಮತಿ ನೀಡಿದೆ. ಆ ಮೂಲಕ ಸರ್ಕಾರ ಕೊರೊನಾ ಸಂಕಷ್ಟ ಕಾಲದಲ್ಲೂ ಜನಸಾಮಾನ್ಯರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ […]
ಉಡುಪಿ ಜಿಲ್ಲೆಗೆ ಎಂಓ4 ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ: ಸಚಿವ ಬಿ.ಸಿ ಪಾಟೀಲ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭತ್ತದ ಭಿತ್ತನೆಗೆ ಪ್ರತೀ ವರ್ಷ ಎಂಓ4 ಬಿತ್ತನೆ ಬೀಜದ ಕೊರತೆಯಾಗುತ್ತಿದ್ದು, ಮುಂದಿನ ವರ್ಷದಿಂದ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿಯಲ್ಲಿನ ಹಡಿಲು ಕೃಷಿ ಭೂಮಿಯಲ್ಲಿ ಭಿತ್ತನೆ ಮಾಡುವ ಕಾರ್ಯ ನಡೆಯುತ್ತಿದು, ಇದು ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ. ಜಿಲ್ಲೆಯ ಪ್ರತಿಯೊಬ್ಬ ರೈತರೂ […]
ಸಚಿವ ಯೋಗೀಶ್ವರ್, ಸಿ.ಟಿ. ರವಿ ದೆಹಲಿಗೆ ದಿಢೀರ್ ಭೇಟಿ
ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ವಿಚಾರ ತಣ್ಣಗಾಯ್ತು ಎನ್ನುವಾಗಲೇ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿರುವುದು ಬಹಳಷ್ಟು ಕುತೂಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಪರೀಕ್ಷೆ ಬರೆದಿದ್ದೇವೆ, ಶೀಘ್ರವೇ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಯೋಗೇಶ್ವರ ದೆಹಲಿಗೆ ತೆರಳಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಶುಕ್ರವಾರ ತಡರಾತ್ರಿ ದೆಹಲಿಗೆ ತೆರಳಿರುವ ಅವರು, ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡದೆ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಾರೆ. ನಾಯಕತ್ವ […]
ಹಡಿಲು ಭೂಮಿ ಕೃಷಿ ಅಭಿಯಾನ ರಾಜ್ಯಕ್ಕೆ ವಿಸ್ತರಣೆಯಾಗಲಿ: ಕೃಷಿ ಸಚಿವ ಬಿ.ಸಿ. ಪಾಟೀಲ್
ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಹಡಿಲು ಭೂಮಿ ಕೃಷಿ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದಲ್ಲಿ, ರಾಜ್ಯದಲ್ಲಿ ಹಡಿಲು ಬಿದ್ದಿರುವ 15 ಲಕ್ಷ ಹೆಕ್ಟೇರ್ ಕೃಷಿ ಭೂಮಿಯನ್ನು ಹಸನಾಗಿಸಬಹುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ಕೇದಾರೋತ್ಥಾನ ಟ್ರಸ್ಟ್‌ನಿಂದ ಕಡೆಕಾರಿನಲ್ಲಿ ಶನಿವಾರ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. , ಶಾಸಕ ರಘುಪತಿ ಭಟ್ ಕೃಷಿ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಅವರ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಜಿಲ್ಲೆಯಲ್ಲಿ ಹಡಿಲು […]