ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸುತ್ತೇವೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 30ರ ಒಳಗೆ ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು. ಯಾವುದೇ ವಿದ್ಯಾರ್ಥಿಗೂ […]

ಎಸ್ಸೆಸ್ಸೆಲ್ಸಿ ಪರೀಕ್ಷೆಯ ದಿನಾಂಕ ಘೋಷಣೆ

ಬೆಂಗಳೂರು: ಪ್ರಸ್ತಕ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಅದರಂತೆ ಜುಲೈ 19 ಮತ್ತು ಜುಲೈ 22 ರಂದು ಎರಡು ದಿನಗಳು ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ ಎಂದು  ಶಿಕ್ಷಣ ಸಚಿವ ಸುರೇಶ್​ ಕುಮಾರ್ ಘೋಷಿಸಿದ್ದಾರೆ. ಜುಲೈ 19ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಜುಲೈ 22ರಂದು ಭಾಷಾ ವಿಷಯಗಳ ಪರೀಕ್ಷೆ ಪರೀಕ್ಷಾ ಸಮಯ: ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ಬುಧವಾರವೇ ಹಾಲ್​ ಟಿಕೆಟ್ ಬಿಡುಗಡೆ ಈ ಬಾರಿ 2 […]

ಕೇಂದ್ರ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ?.

ಉಡುಪಿ: ಕೇಂದ್ರ ಸಚಿವ ಸಂಪುಟಕ್ಕೆ ಶೀಘ್ರದಲ್ಲೇ ಸರ್ಜರಿ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹಾಗೆ ಕರ್ನಾಟಕದ ಇಬ್ಬರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಹಾವೇರಿ-ಗದಗ ಸಂಸದ ಶಿವಕುಮಾರ್ ಉದಾಸಿ ಹಾಗೂ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಹೆಸರು ಸಹ ಸಂಭಾವ್ಯರ ಪಟ್ಟಿಯಲ್ಲಿದೆ ಎನ್ನಲಾಗಿದೆ. ನಾಲ್ಕು ಬಾರಿಯ ಸಂಸದ  ಅಂಗಡಿ ಅವರು ಸುಮಾರು 16 ತಿಂಗಳು ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿ […]

ಟ್ವಿಟರ್‌ ಭಾರತೀಯ ಗ್ರಾಹಕರ ಕುಂದು ಕೊರತೆ ಅಧಿಕಾರಿ ದಿಢೀರ್ ರಾಜೀನಾಮೆ

ನವದೆಹಲಿ: ಟ್ವಿಟರ್‌ ಸಂಸ್ಥೆಯ ಭಾರತೀಯ ಗ್ರಾಹಕರ ಕುಂದು ಕೊರತೆ ನಿವಾರಣಾ ಅಧಿಕಾರಿ ಧರ್ಮೇಂದ್ರ ಚತುರ್ ದಿಢೀರ್ ಆಗಿ‌ ರಾಜೀನಾಮೆ ನೀಡಿದ್ದಾರೆ. ಅವರು ಇತ್ತೀಚೆಗಷ್ಟೇ ಈ ಹುದ್ದೆಯನ್ನು ಅಲಂಕರಿಸಿದ್ದರು. ಆದರೆ ದಿಢೀರ್ ಬೆಳವಣಿಗೆಯೊಂದರಲ್ಲಿ ಅವರು, ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರದ ಐಟಿ ನಿಯಮ ಪ್ರಕಾರ ಭಾರತದಲ್ಲಿ ಕುಂದುಕೊರತೆ ನಿವಾರಣಾ ಅಧಿಕಾರಿಯನ್ನು ನೇಮಿಸುವುದು ಎಲ್ಲಾ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಚತುರ್‌ರನ್ನು ಟ್ವಿಟರ್‌ ನೇಮಿಸಿಕೊಂಡಿತ್ತು. ಐಟಿ ನಿಯಮ ಪಾಲನೆ ಮಾಡದ ಟ್ವಿಟರ್‌ ಹಾಗೂ ಕೇಂದ್ರದ ನಡುವೆ […]

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಬಗ್ಗೆ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ. ಶಿಕ್ಷಣ ಸಚಿವ ಸುರೇಶ್​ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.