ಉಡುಪಿ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಮುಂಬೈಯಿಂದ ಮಂಗಳೂರಿಗೆ ಹೊರಟಿದ್ದ ಮಹಿಳೆ ನಾಪತ್ತೆ
ಉಡುಪಿ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಮುಂಬೈಯ ಥಾಣೆಯಿಂದ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ಮಹಿಳೆ ಕಾಣೆಯಾಗಿದ್ದಾರೆ. ಈ ಬಗ್ಗೆ ಮುಂಬೈಯ ಥಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಕ್ಷಿತಾ ಆರ್. ಕೋಟ್ಯಾನ್ ಎಂಬ ಮಹಿಳೆ ತನ್ನ ತಾಯಿಗೆ ತೀವ್ರ ಆರೋಗ್ಯದ ಸಮಸ್ಯೆ ಇದ್ದ ಕಾರಣ ಅವರನ್ನು ನೋಡಲು ಜೂನ್ 12ರಂದು ರಾತ್ರಿ 10.45ಕ್ಕೆ 01133 ರೈಲಿನಲ್ಲಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಅದರಂತೆ ಮರುದಿನ ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ತಲುಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಆ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕೋವಿಡ್ ಲಸಿಕಾ ಅಭಿಯಾನ
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಎನ್ ಸಿಸಿ, ಎನ್ ಎಸ್ ಎಸ್ ,ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅಭಿಯಾನವನ್ನು ಆಯೋಜಿಸಲಾಯಿತು. ಕಾಲೇಜು ಪುನರಾರಂಭದ ಪೂರ್ವವಾಗಿ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ, ಭೋದಕೇತರ ಸಿಬ್ಬಂದಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 […]
ಉಡುಪಿ: ಬಿಜೆಪಿ ಕಡಿಯಾಳಿ ಮಹಾಶಕ್ತಿ ಕೇಂದ್ರದಿಂದ ವೃಕ್ಷಾರೋಪಣ ಕಾರ್ಯಕ್ರಮ
ಉಡುಪಿ: ಬಿಜೆಪಿ ನಗರ ಮಹಿಳಾ ಮೋರ್ಚಾದ ಕಡಿಯಾಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಡಿಯಾಳಿಯ ಕಮಲ ಬಾಯಿ ಹೈಸ್ಕೂಲ್ ನಲ್ಲಿ ಇಂದು ವೃಕ್ಷಾರೋಪಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟೆಂಗಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ , ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಕಡಿಯಾಳಿ ಮಹಿಳಾ ಮೋರ್ಚಾದ ಮಹಾಶಕ್ತಿ ಕೇಂದ್ರದ […]
ಕಾಪು ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ನಾಲ್ವರು ಅಂತರ್ ಜಿಲ್ಲಾ ಚೋರರ ಬಂಧನ
ಕಾಪು: ಕಾಪು ವೃತ್ತ ನಿರೀಕ್ಷಕರ ನೇತೃತ್ವದ ಪೊಲೀಸರ ತಂಡವು ವಿಶೇಷ ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಚೋರರನ್ನು ಬಂಧಿಸಿದ್ದು, ಬಂಧಿತರಿಂದ ಲಾರಿ, ಸ್ವಿಫ್ಟ್ ಕಾರು, ಮೊಬೈಲ್ ಪೋನ್ ಹಾಗೂ ನಗದು ಸಹಿತ ₹12.47 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಪಲಿಮಾರು ಗ್ರಾಮದ ಅಡ್ವೆ ನಿವಾಸಿ ಆಶ್ರಫ್ (27), ಉತ್ತರ ಕನ್ನಡ ಜಿಲ್ಲೆ ಮೂಲದ ಪ್ರಸ್ತುತ ಪಡುಬಿದ್ರಿ ಕಂಚಿನಡ್ಕ ಶಾಲೆ ಬಳಿ ವಾಸವಿರುವ ಮುನ್ನಾ ಯಾನೆ ಮಜೀರ್ ಶೇಖ್ (38), ಶಿವಮೊಗ್ಗ ಜಿಲ್ಲೆಯ ಮಂಜುನಾಥ ಯಾನೆ […]
ಕುಂದಾಪುರ: ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕೊವಿಡ್ ಲಸಿಕಾ ಅಭಿಯಾನ
ಕುಂದಾಪುರ: ಕಾಲೇಜು ಆರಂಭಕ್ಕೆ ಪೂರ್ವವಾಗಿ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ 19 ಲಸಿಕೆಯನ್ನು ನೀಡಲಾಯಿತು. ಇಂದು 200 ಲಸಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ನಾಳೆ 500 ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗುವುದು, ವಿಧ್ಯಾರ್ಥಿಗಳು ಆಧಾರ್ ಕಾರ್ಡ್ ಮತ್ತು ಕಾಲೇಜು ಐಡಿಗಳೊಂದಿಗೆ ಆಗಮಿಸುವಂತೆ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ.