ಉಡುಪಿ: ಖಾಸಗಿ ಸಿಟಿ ಬಸ್ ಪರಿಷ್ಕೃತ ದರ ವಿವರ

ಉಡುಪಿ: ಕೋವಿಡ್ 19 ಹಿನ್ನೆಲೆಯಲ್ಲಿ ಶೇ. 50ರಷ್ಟು ಮಾತ್ರ ಸೀಟು ಭರ್ತಿಗೆ ಅವಕಾಶ ನೀಡಿದ ಕಾರಣದಿಂದ ಹಾಗೂ ಡೀಸೆಲ್ ಬೆಲೆ ಹೆಚ್ಚಳವಾದ ನಿಟ್ಟಿನಲ್ಲಿ ಖಾಸಗಿ ಸಿಟಿ ಬಸ್ ಗಳ ದರವನ್ನು ಶೇ. 25ರಷ್ಟು ಹೆಚ್ಚಿಸಲಾಗಿದ್ದು, ಜುಲೈ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಸಿಟಿ ಬಸ್ ಪರಿಷ್ಕೃತ ದರ: ದೂರ ಕಿ.ಮೀ.ಗಳಲ್ಲಿ  ಹಳೆಯ ದರ  ಪರಿಷ್ಕೃತ ದರ 1.     0.1-2.0.              ₹10          […]

ಉಡುಪಿ: ನಾಳೆ (ಜುಲೈ 1)ಯಿಂದ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಪುನರಾರಂಭ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡೂವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರವು ನಾಳೆಯಿಂದ (ಜುಲೈ 1) ಪುನರಾರಂಭಗೊಳ್ಳಲಿದೆ. ಜಿಲ್ಲೆಯಲ್ಲಿ ಒಟ್ಟು 450 ಸರ್ವಿಸ್ ಹಾಗೂ ಸಿಟಿ ಬಸ್‌ಗಳಿದ್ದು, ಇವುಗಳಲ್ಲಿ ಶೇ.30ರಷ್ಟು ಬಸ್ ಮಾತ್ರ ನಾಳೆಯಿಂದ ರಸ್ತೆಗೆ ಇಳಿಯಲಿದೆ. ಅವು ಗಳಲ್ಲಿ ಕೆಲವು ಬಸ್‌ಗಳು ಮಂಗಳೂರಿಗೂ ಸಂಚರಿಸಲಿದೆ. ಉಳಿದ ಬಸ್‌ಗಳನ್ನು ಮುಂದೆ ಹಂತ ಹಂತವಾಗಿ ಓಡಿಸಲಾಗುವುದು. ಅದೇ ರೀತಿ ನಾಳೆಯಿಂದ ಶೇ. 25ರಷ್ಟು ಟಿಕೆಟ್ ದರ ಕೂಡ ಹೆಚ್ಚಿಸಲಾಗುವುದು ಎಂದು ಕೆನರಾ ಬಸ್ ಮಾಲಕರ […]

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ: ಇಂದಿನ ವಿವರ

ಉಡುಪಿ: ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಅನ್ ಲಾಕ್ ಬಳಿಕ ಮತ್ತೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 940ಕ್ಕೆ ಏರಿಕೆ ಕಂಡಿದೆ. ಉಡುಪಿ‌ ತಾಲೂಕಿನಲ್ಲಿ 67, ಕುಂದಾಪುರ ತಾಲೂಕಿನಲ್ಲಿ 52 ಹಾಗೂ ಕಾರ್ಕಳ ತಾಲೂಕಿನಲ್ಲಿ 30 ಮಂದಿಯಲ್ಲಿ ಸೋಂಕು ಕಂಡುಬಂದಿದೆ. ಜೂನ್ 29ರಂದು 2380 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದ್ದು, 88 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. […]

ಕೋವಿಡ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸೇವೆ ಶ್ಲಾಘನೀಯ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಕೋವಿಡ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸೇವೆ ಮಹತ್ವದ್ದಾಗಿದೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ನಿಸ್ವಾರ್ಥ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೋವಿಡ್‌ಗೆ ಅಂಜಿ ಆಡಳಿತರೂಢ ಜನಪ್ರತಿನಿಧಿಗಳು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕಾಲದಲ್ಲೂ ಪಕ್ಷದ ಮುಖಂಡರು, ಕಾರ್ಯಕರ್ತರು ಕೋವಿಡ್ ಜಾಗೃತಿ ಮೂಡಿಸುವ ಜೊತೆಗೆ ಆರ್ಥಿಕ ಹಾಗೂ ಅಗತ್ಯ ಸಹಾಯ ಮಾಡುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿರುವುದು ಪ್ರಶಂಸನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ […]

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಒಟ್ಟು 51 ಡೆಲ್ಟಾ ಪ್ಲಸ್ ಪ್ರಕರಣ ಪತ್ತೆ

ನವದೆಹಲಿ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದಂತೆ ಕೊರೊನಾ ರೂಪಾಂತರ ತಳಿ ‘ಡೆಲ್ಟಾ ಪ್ಲಸ್’ ವೈರಸ್ ನಿಧನವಾಗಿ‌ ಹರಡಲು ಶುರುವಾಗಿದೆ. ಕರ್ನಾಟಕ ರಾಜ್ಯ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ‘ಡೆಲ್ಟಾ ಪ್ಲಸ್’ ಸೋಂಕು ದೃಢಪಟ್ಟಿದೆ. ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಕೇರಳ, ರಾಜಸ್ಥಾನ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾ, ಹರಿಯಾಣ ಮತ್ತು ಜಮ್ಮು–ಕಾಶ್ಮೀರದಲ್ಲಿ ಒಟ್ಟು 51 ‘ಡೆಲ್ಟಾ ಪ್ಲಸ್’ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸಿದ್ದೇವೆ ಎಂದು ನೀತಿ ಆಯೋಗ […]