ನೈತಿಕ ಜವಾಬ್ದಾರಿ ಮರೆತು ವೈಯಕ್ತಿಕ ದಾಳಿ ಮಾಡುತ್ತಿರುವ ಪಬ್ಲಿಕ್ ಟಿವಿ: ನಟ ರಕ್ಷಿತ್ ಶೆಟ್ಟಿ ಆಕ್ರೋಶ

ಬೆಂಗಳೂರು: ಕನ್ನಡದ ಸುದ್ದಿ ವಾಹಿನಿಯೊಂದು ತನ್ನ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ನಿಮ್ಮದು ’ಟಿಆರ್ ಪಿ’ ಗೋಸ್ಕರ ಇರುವ ನ್ಯೂಸ್ ಚಾನೆಲ್. ಅದೇ ನಿಮ್ಮ ಅಸ್ತ್ರ. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗೂ ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಳಿಕೆ: ನಾಳೆಯಿಂದ ಮತ್ತಷ್ಟು ವಿನಾಯಿತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 5ಕ್ಕಿಂತ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ (ಜುಲೈ 2) ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಇಂದು ಜಿಲ್ಲಾಡಳಿತ ನೂತನ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿ, […]

ಮೂಡಬಿದಿರೆ:’ಧರ್ಮದೈವ’ ತುಳು ಕಿರುಚಿತ್ರ ಲೋಕಾರ್ಪಣೆ

ಮೂಡಬಿದಿರೆ : “ದೈವಾರಾಧನೆ ತುಳುನಾಡಿನ ಸಂಸ್ಕೃತಿಯ ಬಹು ಮುಖ್ಯ ಭಾಗ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗಳೆಯಲು ಸಾಧ್ಯವಿಲ್ಲ, ಅಲ್ಲದೆ ಈ ವಿಚಾರಗಳು ಬರಿ ಮೂಢನಂಬಿಕೆಯಲ್ಲ; ಮೂಲ ನಂಬಿಕೆ. ಇಡೀ ತುಳು ಸಮಾಜವೇ ದೈವಾರಾಧನೆಯ ನಂಬಿಕೆ ಮೇಲೆ ನಿಂತಿದೆ ‘ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ .ಎಮ್. ಮೋಹನ್ ಆಳ್ವ ಹೇಳಿದರು. ತುಳುನಾಡಿನ ದೈವಾರಾಧನೆ ಕುರಿತು ಪುತ್ತೂರಿನ ಸೋನು ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ‘ಧರ್ಮದೈವ’ ತುಳುನಾಡ ಬೊಲ್ಪು ತುಳು ಕಿರುಚಿತ್ರವನ್ನು ಇಲ್ಲಿನ ಕುವೆಂಪು ಸಭಾಂಗಣದಲ್ಲಿ ಲೋಕಾರ್ಪಣೆಗೊಳಿಸಿ […]