ಕೆಂಜೂರು ಲಯನ್ಸ್ ಕ್ಲಬ್‌ ಪದಾಧಿಕಾರಿಗಳ ಪದಗ್ರಹಣ

ಕೆಂಜೂರು: ನೂತನವಾಗಿ ರಚನೆಯಾದ ಕೆಂಜೂರು ಲಯನ್ಸ್ ಕ್ಲಬ್‌ ನ ಪದಾಧಿಕಾರಿಗಳ ಹಾಗೂ ಸದಸ್ಯರ ಪದಗ್ರಹಣ ಸಮಾರಂಭ ಈಚೆಗೆ ನಡೆಯಿತು. ಜಿಲ್ಲಾ ಗವರ್ನರ್ ಎನ್.ಎಂ. ಹೆಗಡೆ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಜಿಲ್ಲಾ ಪ್ರಥಮ ಮಹಿಳೆ ಸಂಧ್ಯಾ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ನೂತನ ಕ್ಲಬ್‌ನ ಅಧ್ಯಕ್ಷರಾಗಿ ಜಯಶ್ರೀ ವಿಜಯ ಕುಮಾರ್ ಶೆಟ್ಟಿ ಕೆಂಜೂರು, ಕಾರ್ಯದರ್ಶಿಯಾಗಿ ವಿನುತಾ ಎಸ್. ಶೆಟ್ಟಿ, ಕೋಶಾಧಿಕಾರಿಯಾಗಿ ಲಕ್ಷ್ಮೀ ಅಡಿಗ ಹಾಗೂ ಇನ್ನಿತರ ಸದಸ್ಯರು ಅಧಿಕಾರ ಸ್ವೀಕರಿಸಿದರು. ಅತಿಥಿಗಳಾಗಿ ಆಗಮಿಸಿದ್ದ ಕೋಟೇಶ್ವರ ಲಯನ್ಸ್ ಕ್ಲಬ್‌ನ […]

ಕಾರ್ಕಳ: ಜಾಗತಿಕ ಅನುದಾನ ಯೋಜನೆ ಉದ್ಘಾಟನೆ

ಕಾರ್ಕಳ: ರೋಟರಿ ಕ್ಲಬ್ ಮಣಿಪಾಲದ ಮಹಾತ್ವಕಾಂಕ್ಷೆ ಜಾಗತಿಕ ಅನುದಾನ (Global Grant) ಯೋಜನೆಯಾದ “ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ) ಜಾಗೃತಿ ಕಾರ್ಯಕ್ರಮವನ್ನು ಕಾರ್ಕಳ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು. ರೋಟರಿ ಜಿಲ್ಲಾ 3182 ನ ಗವರ್ನರ್ ರಾಜಾರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮುದಾಯ ಮಧುಮೇಹ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಶಿಬಿರಗಳನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯ ಭಾಗವಾಗಿ […]

ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆ: ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆಯಲ್ಲಿ ಆಸಕ್ತಿ, ಅನುಭವ ಇರುವ ಅರ್ಹ ಫಲಾನುಭವಿಗಳು ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳು (ವಿಶೇಷ ಘಟಕ ಯೋಜನೆ), ಮೀನು ಮಾರಾಟಕ್ಕೆ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನಗಳನ್ನು ಮತ್ತು ಇತರ ಕಾರ್ಯಕ್ರಮಗಳ ಲಾಭ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 […]

ಗೃಹ ಕಾರ್ಮಿಕರು ಕೋವಿಡ್ ಪರಿಹಾರ ಪಡೆಯಲು ಮಾಲೀಕರ ಸಹಿ ಅಗತ್ಯ

ಉಡುಪಿ: ರಾಜ್ಯದಲ್ಲಿ ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಪರಿಣಾಮವಾಗಿ ಸಂಕಷ್ಟಕ್ಕೊಳಗಾದ 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2,000 ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/  ಮೂಲಕ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ […]

ಲಾಕ್‌ಡೌನ್‌ ನಿರ್ಬಂಧ ಸಡಿಲ; ಮಾಲ್‌, ದೇವಸ್ಥಾನ, ಬಾರ್ ಗಳಿಗೆ ಅವಕಾಶ: ವೀಕೆಂಡ್ ಕರ್ಫ್ಯೂ ರದ್ದು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್‌ ಲಾಕ್‌ಡೌನ್‌ ನಿಯಮಗಳನ್ನು ಇನ್ನಷ್ಟು ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಈ ಕೆಳಕಂಡಂತೆ ಲಾಕ್ ಡೌನ್ ನಿಯಮಗಳನ್ನು‌ ಸಡಿಲಿಕೆ ಮಾಡಲಾಗಿದೆ. ಜುಲೈ 5ರ ಬೆಳಿಗ್ಗೆ 5ರಿಂದ ಜುಲೈ 19ರ ಬೆಳಿಗ್ಗೆ 5ರ ವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. 1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ […]