ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್‌ಎ ಒಂದೇ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಘಾಜಿಯಾಬಾದ್: ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಖೆಡ್ಡಕ್ಕೆ ಯಾರೂ ಬೀಳಬಾರದು. ಹಿಂದೂ-ಮುಸ್ಲಿಂ ಏಕತೆಯ ಹೆಸರಲ್ಲಿ ಮೊದಲು ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಆಗಿದ್ದರು ಎಂಬ ದಾರಿತಪ್ಪಿಸುವ ಹೇಳಿಕೆಗಳಿಗೆ ಕಿವಿಕೊಡಬಾರದು. ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್‌ಎಗಳು ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಭಾನುವಾರ ಘಾಜಿಯಾಬಾದ್‌ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಸ್ಲಿಮರು ಭಾರತದಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ, ಅಂತಹ ವ್ಯಕ್ತಿ […]
ಪ್ರಧಾನಿ ಮೋದಿಯನ್ನು ಟೀಕಿಸುವವರಿಗೆ ಒಳಿತಾಗಲ್ಲ: ಸಚಿವ ಮಾಧುಸ್ವಾಮಿ
ಉಡುಪಿ: ಕೋವಿಡ್ ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಉಡುಪಿಯಲ್ಲಿ ಇಂದು ಆಯೋಜಿಸಿದ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರ ದೇಶದ 80 ಕೋಟಿ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಬೇಕಾದರೆ ಸರ್ಕಾರಕ್ಕೆ ಎಷ್ಟು ಆರ್ಥಿಕ ಹೊರೆ ಬೀಳಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು […]
ಮಸೀದಿಗಳಲ್ಲಿ ನಮಾಝ್ ವೇಳೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ
ಉಡುಪಿ: ರಾಜ್ಯ ಸರಕಾರವು ಜುಲೈ 5 ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಿದೆ. ಆದರೂ ಕೊರೊನಾ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ. ಇದನ್ನು ಗಮನದಲ್ಲಿರಿಸಿಕೊಂಡು ಸರಕಾರದ ಆದೇಶದಂತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮಸೀದಿಗಳಲ್ಲಿ ನಮಾಝ್ ಮಾಡುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಇಬ್ರಾಹಿಂ ಸಾಹೇಬ್ ಕೋಟ ಕರೆನೀಡಿದ್ದಾರೆ. ಮಸೀದಿಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಮತ್ತು ಮಾಸ್ಕ್ ಧಾರಣೆಯನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮಸೀದಿಗಳನ್ನು ತೆರೆಯಬೇಕು. ಆ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, […]
ಅನ್ ಲಾಕ್ ಆದರೂ ಒಂದು ವಾರ ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶವಿಲ್ಲ
ಉಡುಪಿ: ಕೋವಿಡ್ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೋಮವಾರದಿಂದ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂರನೇ ಹಂತದ ಅನ್ ಲಾಕ್ ಮಾರ್ಗಸೂಚಿಯಲ್ಲಿ ದೇವಸ್ಥಾನ, ಮಠ ಮಂದಿರಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ರಾಜ್ಯದ ಬಹುತೇಕ ದೇಗುಲಗಳು ನಾಳೆಯಿಂದ (ಜುಲೈ 5) ಭಕ್ತರಿಗೆ ಪ್ರವೇಶ ನೀಡಲು (ದೇವರ ದರ್ಶನ) ಸಿದ್ಧತೆ ಆರಂಭಿಸಿವೆ. ಆದರೆ, ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಮಾತ್ರ ಭಕ್ತರು ಇನ್ನೊಂದು ವಾರ ಕಾಯಲೇಬೇಕಾಗಿದೆ. ಹೌದು, ನಾಳೆಯಿಂದ ಉಡುಪಿ […]