ಜೇನು ಸಾಕಣಿಕೆ: ನೋಂದಣಿಗೆ ಆಗಸ್ಟ್ 30 ಕೊನೆಯ ದಿನ

ಉಡುಪಿ : ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳ್ಳುತ್ತಿರುವ ರಾಷ್ಟ್ರೀಯ ಜೇನುನೊಣ ಸಾಕಣಿಕೆ ನಿಖರ ಮತ್ತು ಹನಿ ಮಿಷನ್ ಯೋಜನೆಯಡಿ ಮಧುಕ್ರಾಂತಿ ಪೋರ್ಟಲ್ ಎಂಬ ವೆಬ್ ಪೋರ್ಟಲ್‌ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ. ತಾಲೂಕಿನಲ್ಲಿ 10 ಕ್ಕಿಂತ ಹೆಚ್ಚು ಜೇನು ಪೆಟ್ಟಿಗೆಯನ್ನು ಹೊಂದಿರುವ ರೈತರು, ಜೇನು ಕೃಷಿಕರು, ಉದ್ದಿಮೆದಾರರು ಹಾಗೂ ಜೇನು ಉತ್ಪಾದನಾ ಸಂಘ ಸಂಸ್ಥೆಗಳು ವೆಬ್ ಪೋರ್ಟಲ್‌ನಲ್ಲಿ ತಮ್ಮ ವಿವರವನ್ನು ನೊಂದಾಯಿಸಿಕೊಳ್ಳಲು ಆಗಸ್ಟ್ 30 ಕೊನೆಯ ದಿನ. ಮಧುಕ್ರಾಂತಿ ಪೋರ್ಟಲ್ ನೊಂದಣಿ ಶುಲ್ಕವನ್ನು 10 […]

ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ,ಯುವತಿಯರಿಂದ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ […]

ಉಡುಪಿ ಜಿಲ್ಲೆಯಲ್ಲಿ ಅನ್ ಲಾಕ್: ಜು. 19 ರ ವರೆಗಿನ ಪರಿಷ್ಕೃತ ಮಾರ್ಗಸೂಚಿ ಇಲ್ಲಿದೆ

ಉಡುಪಿ: ರಾಜ್ಯ ಸರ್ಕಾರವು ಕೋವಿಡ್-19 ಪಾಸಿಟಿವಿಟಿ ಆಧಾರದ ಮೇಲೆ ಹೆಚ್ಚಿನ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ತೆರೆಯಲು ಅನುಮತಿ ನೀಡಿ, ಈ ಹಿಂದೆ ಹೊರಡಿಸಿದ ಎಲ್ಲಾ ಆದೇಶಗಳನ್ನು ರದ್ದುಪಡಿಸಿ, ಜುಲೈ 19 ರ ಬೆಳಗ್ಗೆ 6 ಗಂಟೆಯವರೆಗೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ. ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಂತೆ ಜುಲೈ 5 ರಿಂದ ಮುಂದಿನ ಆದೇಶದವರೆಗೆ ಈ ಕೆಳಗಿನಂತೆ ಮಾರ್ಗಸೂಚಿಗಳನ್ನು ಹೊರಡಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ. ಜಿಲ್ಲೆಯಾದ್ಯಂತ […]

ದ್ವಿತೀಯ ಪಿಯುಸಿ ರಿಪೀಟರ್ಸ್​ ವಿದ್ಯಾರ್ಥಿಗಳು ಕೂಡ ಪಾಸ್: ಹೈಕೋರ್ಟ್ ಗೆ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು: 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ (ರಿಪೀಟರ್ಸ್) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತೋ?, ಇಲ್ಲವೋ ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಹತ್ವದ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಎಲ್ಲಾ 76 ಸಾವಿರ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ತಲಾ 35 ಅಂಕ ನೀಡುವುದರ ಮೂಲಕ ಪಾಸ್ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, […]