ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ನೇಮಕ
ಚೆನ್ನೈ: ಕೆಲವು ತಿಂಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ಬಿಜೆಪಿಯ ಸಾರಥ್ಯ ನೀಡಲಾಗಿದೆ ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಡಾ. ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಸೂಚಿಸಿದ್ದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ನಾಳೆಯಿಂದ ಮೂರ್ನಾಲ್ಕು ದಿನ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮ ಜುಲೈ 8ರಿಂದ 12ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 11ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು ಇದರ ಪರಿಣಾಮ ಕರಾವಳಿ, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮೂನ್ಸೂಚನೆಯಿದೆ. ಕರಾವಳಿ ಭಾಗದಲ್ಲಿ ಜುಲೈ 8 ರಂದು ಯೆಲ್ಲೋ ಅಲರ್ಟ್, ಜುಲೈ 9 ರಿಂದ 12 ರವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು […]
ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ.
ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ
ನವದೆಹಲಿ: ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 10ರಂದು ನಾಗರಿಕ ಸಮಿತಿಯಿಂದ “ಅನಾಥ ಪ್ರೇತಗಳಿಗೆ ಸದ್ಗತಿ” ಕಾರ್ಯಕ್ರಮ
ಉಡುಪಿ: ಕಳೆದ ಕೆಲವು ವರ್ಷಗಳಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಾ ಬಂದಿದೆ. ಇದುವರೆಗೆ ನಾಗರಿಕ ಸಮಿತಿಯಿಂದ 154 ಅನಾಥ ಶವಗಳ ಅಂತ್ಯಸಂಸ್ಕಾರ ನಡೆದಿದೆ. ಕೊರೊನಾ ವ್ಯಾಧಿಯಿಂದ ಮೃತಪಟ್ಟ, ಆತ್ಮಹತ್ಯೆ, ಅಪಘಾತ, ಇನ್ನಿತರ ಕಾಯಿಲೆಗಳಿಂದ ಮೃತಪಟ್ಟಿರುವ ಶವಗಳಾಗಿವೆ. ಮೃತ 154 ಅನಾಥರ ಆತ್ಮ ಸದ್ಗತಿಗಾಗಿ, ನಾಗರಿಕ ಸಮಿತಿಯು, “ಸಾಮೂಹಿಕ ಅನಾಥ ಪ್ರೇತಗಳಿಗೆ ಸದ್ಗತಿ” ಕಾರ್ಯಕ್ರಮವನ್ನು ಆಯೋಜಿಸಿದೆ. ಪುರೋಹಿತ ಕರಂಬಳ್ಳಿ ನಾಗರಾಜ್ ಐತಾಳ್ ಅವರ ಬಳಗದಿಂದ ತಿಲಹೋಮ, ನಾರಾಯಣ ಬಲಿ, ಮೊದಲಾದ […]