ಪದವಿ ಕಾಲೇಜು ಆರಂಭಕ್ಕೆ ಸದ್ಯಕ್ಕಿಲ್ಲ ಹಸಿರು ನಿಶಾನೆ!

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ತರಗತಿಗಳ ಆರಂಭದ ಬಗ್ಗೆ ಸದ್ಯ ಯಾವುದೇ ತೀರ್ಮಾನ ವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ. ಕೊರೋನ ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ  ಬಗ್ಗೆ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ ಎಂದರು. ಇನ್ನು ರಾಜ್ಯದಲ್ಲಿ ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿ, […]

ದೇಶದ್ರೋಹದ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಸಮರ್ಥಿಸುವ ಮೂಲಕ ಸಿದ್ದರಾಮಯ್ಯ ಯೋಧರಿಗೆ ಅವಮಾನ ಮಾಡಿದ್ದಾರೆ: ಶಾಸಕ ಸುನಿಲ್ ಕುಮಾರ್

ಮಣಿಪಾಲ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕೇಳಿಬಂದಿರುವ ದೇಶದ್ರೋಹದ ಆರೋಪ ಹಾಗೂ ಆ ನಂತರ ನಡೆದ ಪೊಲೀಸ್ ವಿಚಾರಣೆ ಇದೀಗ ರಾಜಕೀಯ ಸ್ವರೂಪ ಪಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಏನಿದು ಪ್ರಕರಣ.? ಕಾರ್ಕಳದ ರಾಧಾಕೃಷ್ಣ ಹಿರ್ಗಾನ ಎಂಬಾತ ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಸೈನಿಕರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಈ ಸಂಬಂಧ ಪೊಲೀಸರು ವಿಚಾರಣೆಗೆ ಕರೆದರೂ ರಾಧಾಕೃಷ್ಣ ವಿಚಾರಣೆ […]

ಸುಳ್ಳು ಕೇಸ್ ಆಧರಿಸಿ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತ ಮೇಲೆ ಪೊಲೀಸರ ದೌರ್ಜನ್ಯ: ಸಿದ್ದರಾಮಯ್ಯ

ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಅವರ ಅನಾರೋಗ್ಯವನ್ನೂ‌ ಲೆಕ್ಕಿಸದೆ, ಹಳೆಯ ಸುಳ್ಳು ಕೇಸ್ ಆಧರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.

ಮಣಿಪಾಲ: “Dolce Desserts” ಕೇಕ್ ಶಾಪ್ ಶುಭಾರಂಭ

ಮಣಿಪಾಲ: ಮಣಿಪಾಲದ ಗ್ರೀನ್ ವ್ಯೂವ್ ಬಿಲ್ಡಿಂಗ್ ನಲ್ಲಿ ನೂತನ “Dolce Desserts” ಕೇಕ್ ಶಾಪ್ ಶುಭಾರಂಭಗೊಂಡಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಹಾಗೂ ಉಡುಪಿ ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ ಅವರು ಶಾಪ್ ಗೆ ಭೇಟಿ ನೀಡಿ ಶುಭಹಾರೈಸಿದರು. ಶಾಪ್ ಮಾಲೀಕರಾದ ಅನುಷಾ ಶೆಟ್ಟಿ ಅವರು ಅತಿಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಶಾಪ್ ನಲ್ಲಿ ವಿನೂತನ ಶೈಲಿಯ ಹಾಗೂ ಪ್ಲೇವರ್ ನ ಕೇಕ್ ಗಳು […]

ನಾಳೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎಸೆಸ್ಸೆಲ್ಸಿ,ಪ್ರಥಮ ಪಿಯು ಅಂಕಗಳನ್ನು ಆನ್ಲೈನ್ ನಲ್ಲೇ ನೋಡಬಹುದು

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಅಂಕಗಳನ್ನು ವೀಕ್ಷಿಸುವ ಅವಕಾಶವನ್ನು ನೀಡಿದ್ದು, ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಯ ಪೋರ್ಟಲ್(SATS) ನಲ್ಲಿ ವೀಕ್ಷಿಸಬಹುದು. ಪೋರ್ಟಲ್ ಲಿಂಕ್ ನಾಳೆಯಿಂದ ಸಕ್ರಿಯವಾಗಲಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು https://sts.karnataka.gov.in/SATSPU/ ಈ ಲಿಂಕ್ ಮೂಲಕ ನೋಡಬಹುದು. ಅಂಕಗಳನ್ನು ವೀಕ್ಷಿಸಿದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳಲ್ಲಿ ಸಂದೇಹ ಕಂಡುಬಂದರೆ ಅಥವಾ ಯಾವುದೇ ಲೋಪದೋಷ ಕಂಡುಬಂದರೆ ಆಯಾ ಕಾಲೇಜು ಪ್ರಾಂಶುಪಾಲರಿಗೆ ಇದೇ ತಿಂಗಳ 12ರೊಳಗೆ ಮಾಹಿತಿ ನೀಡಿ […]