ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ: ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ವಿಶೇಷ ಪೂಜೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕೇತ್ರದ ಸಂಸದರಾದ ಶೋಭಾ ಕರಂದ್ಲಾಜೆಯವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಮಂತ್ರಿ ಮಂಡಲದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕಾಪು ಮಂಡಲದ ವತಿಯಿಂದ ಕಾಪುವಿನ ಸಾವಿರಸೀಮೆಯ ಒಡೆಯ ಜನಾರ್ದನ ದೇವಳದಲ್ಲಿ ಇಂದು ವಿಶೇಷ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಯುವಮೊರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ […]
ಉಡುಪಿ ಜಿಲ್ಲೆಯ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಮೂರ್ನಾಲ್ಕು ತಿಂಗಳೊಳಗೆ ಇತ್ಯರ್ಥಪಡಿಸಲಾಗುವುದು: ಅರಣ್ಯ ಸಚಿವ ಲಿಂಬಾವಳಿ
ಉಡುಪಿ: ಜಿಲ್ಲೆಯಲ್ಲಿ ಸುಮಾರು 68 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಇದೆ. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಕೈಬಿಡಬಹುದಾದ ಅರಣ್ಯ ಪ್ರದೇಶದ ಬಗ್ಗೆ ವಿಧಾನಸಭಾವಾರು ಮಾಹಿತಿ ತರಿಸಿಕೊಂಡು ಮೂರ್ನಾಲ್ಕು ತಿಂಗಳೊಳಗೆ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗುವುದು ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿರುವ ಕುಮ್ಕಿ ಹಾಗೂ ಬಾಣ ಜಮೀನು ಹಂಚಿಕೆ ಸಂಬಂಧ ರಾಜ್ಯಮಟ್ಟದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ […]
ಕುಂದಾಪುರ: ಹಿರಿಯ ಯಕ್ಷಗಾನ ಭಾಗವತ ಮತ್ಯಾಡಿ ನರಸಿಂಹ ಶೆಟ್ಟಿ ನಿಧನ
ಉಡುಪಿ: ಬಡಗುತಿಟ್ಟಿನ ಹಿರಿಯ ಭಾಗವತರಾದ ಮತ್ಯಾಡಿ ನರಸಿಂಹ ಶೆಟ್ಟಿ (95) ಇಂದು ಕುಂದಾಪುರದ ಮತ್ಯಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ಕಲಾಸೇವೆಗೈದ ಇವರು, ಕೊಡವೂರು, ಪೆರ್ಡೂರು, ಅಮೃತೇಶ್ವರೀ, ಮಂದಾರ್ತಿ, ಮಾರಣಕಟ್ಟೆ, ಗೋಳಿಗರಡಿ ಹಾಗೂ ಕಳುವಾಡಿ ಮೇಳಗಳಲ್ಲಿ ಒಟ್ಟು ಸುಮಾರು 45 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಯಕ್ಷಗಾನ ಭಾಗವತರಾಗಿದ್ದರು. ಇವರಿಗೆ 40ಕ್ಕೂ ಹೆಚ್ಚು ಪೌರಾಣಿಕ ಪ್ರಸಂಗಗಳು ಕಂಠಸ್ಥವಾಗಿದ್ದವು. ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಯಕ್ಷಗಾನ ಕಲಾರಂಗವು ಭಾಗವತ […]
ಕೇಂದ್ರ ಕೃಷಿ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ಉಡುಪಿ ಬಿಜೆಪಿ ಕಚೇರಿಯ ಎದುರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ಮಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ […]
ನಾಳೆಯಿಂದ (ಜುಲೈ 11) ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ
ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ನಾಳೆಯಿಂದ (ಜುಲೈ 11) ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರಿಗೆ ಭಕ್ತರಿಗೆ ಶ್ರೀಕೃಷ್ಣ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶಯದಂತೆ ನಾಳೆಯಿಂದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನ ಆರಂಭಿಸಲು ಪರ್ಯಾಯ ಅದಮಾರು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಭಕ್ತರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬೇಕೆಂದು ಮಠದ ಪ್ರಕಟಣೆ ತಿಳಿಸಿದೆ.