ಇಂಧನ ಬೆಲೆ ಏರಿಕೆ: ಸೈಕಲ್ ನಲ್ಲಿ ಓಡಾಡಿದ್ರೆ ಒಳ್ಳೆಯ ವ್ಯಾಯಮ ಆಗುತ್ತೆ ಎಂದ ಬಿಜೆಪಿ ಸಂಸದ.!
ದಾವಣಗೆರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಪೆಟ್ರೋಲ್ ಬೆಲೆ ಏರಿಕೆಯಿಂದ ಜನರು ಸೈಕಲ್ ಏರುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ” ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೈಕಲ್ ನಲ್ಲಿ ಓಡಾಡಿದ್ರೆ ಒಳ್ಳೆಯ ವ್ಯಾಯಮ ಆಗುತ್ತದೆ ಎಂದು ಉಢಾಪೆಯ ಉತ್ತರ ನೀಡಿದ್ದಾರೆ. ಕಚ್ಚಾ ತೈಲದ ಬೆಲೆ ಜಾಸ್ತಿ ಇದೆ, ಹೀಗಾಗಿ ಪೆಟ್ರೋಲ್ ಬೆಲೆ ಜಾಸ್ತಿ ಆಗಿದೆ. ಜನ ಸೈಕಲ್ನಲ್ಲಿ ಓಡಾಡಿದ್ರೆ ಏನ್ ಆಗುತ್ತೆ. […]
ಕೇರಳದಲ್ಲಿ ಝೇಕಾ ವೈರಸ್ ಹೆಚ್ಚಳ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ
ಬೆಂಗಳೂರು: ಕೇರಳದಲ್ಲಿ ದಿನೇ ದಿನೇ ಝೀಕಾ ವೈರಸ್ ಹೆಚ್ಚಾಗುತ್ತಿದ್ದು, ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಯಾವ ರೀತಿ ಹರಡುತ್ತದೆ.? ಝೀಕಾ ವೈರಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಇವು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಇದು ಕೇವಲ ಸೊಳ್ಳೆ ಕಡಿತದಿಂದ ಮಾತ್ರವಲ್ಲ, ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ […]
ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅನಿತಾ ಡಿ’ಸೋಜ ಬೆಳ್ಮಣ್ ಆಯ್ಕೆ
ಕಾರ್ಕಳ: ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅನಿತಾ ಡಿ’ಸೋಜ ಬೆಳ್ಮಣ್ ಅವರು ಆಯ್ಕೆಯಾಗಿದ್ದಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು. ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ ಅವರು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಗೀತಾ ವಾಗ್ಳೆ ಅವರು ನೀಡಿರುವ ಆದೇಶ ಪತ್ರವನ್ನು ಅನಿತಾ ಡಿ’ಸೋಜ ಅವರಿಗೆ ಹಸ್ತಾಂತರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ […]
ಉಡುಪಿ: ಕೋಟೆ ಗ್ರಾಪಂ ಸದಸ್ಯೆ ನಿಧನ
ಉಡುಪಿ: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ (45) ಅವರು ಇಂದು ಕೋಟೆ ಕಂಡಿಗೆಯ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಪ್ರಮೀಳಾ ಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ದೇಶದ್ರೋಹದ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ಕಾರ್ಕಳ ಕ್ಷೇತ್ರದ ಎಸ್ ಟಿ ಮೋರ್ಚಾ ಆಗ್ರಹ
ಕಾರ್ಕಳ: ರಾಷ್ಟ್ರ ರಕ್ಷಣೆಗಾಗಿ ಪ್ರಾಣದ ಹಂಗನ್ನು ತೊರೆದು ದೇಶ ಸೇವೆಯನ್ನು ಮಾಡುತ್ತಿರುವ ವೀರ ಸೈನಿಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ ರಾಧಾಕೃಷ್ಣ ಎಂಬ ವ್ಯಕ್ತಿಯನ್ನು ಕಾರ್ಕಳ ಪೋಲೀಸರು ವಿಚಾರಣೆ ಮಾಡಿದ ಸಂದರ್ಭದಲ್ಲಿ ಅದನ್ನು ವಿರೋಧಿಸಿ, ಆತನನ್ನು ಬೆಂಬಲಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಖಂಡನೀಯ. ಈ ನೆಲದ ಅಸ್ಮಿತೆ, ಧರ್ಮ ಸ್ಥಾಪನೆಗಾಗಿ ಹೋರಾಡಿದ ಶಿವಾಜಿ ಮಹಾರಾಜರು ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಮತ್ತು ಮತಾಂತರದ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ […]