ಉಡುಪಿ: ನಾಪತ್ತೆಯಾಗಿದ್ದ ಸಂತೆಕಟ್ಟೆ ನಿವಾಸಿ ಶವವಾಗಿ ಪತ್ತೆ.!
ಉಡುಪಿ: ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಇಂದು ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಉಪ್ಪೂರು ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ. ಮೃತದೇಹವನ್ನು ಶ್ರೀಧರ ಮಯ್ಯ ಅವರದೆಂದು ಅವರ ಪತ್ನಿ ಹಾಗೂ ಪುತ್ರಿ ಗುರುತಿಸಿದ್ದಾರೆ ಎಂದು ಪೊಲೀಸರು […]
ಉಡುಪಿ: ನಾಗರಿಕ ಸಮಿತಿಯಿಂದ 154 ಅನಾಥ ಶವಗಳಿಗೆ ಸದ್ಗತಿ ಸಂಸ್ಕಾರ
ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಕೊರೊನಾದಿಂದ ಮೃತಪಟ್ಟಿರುವ, ಅಪಘಾತ, ಸಹಿತ, ಕಾಯಿಲೆಗಳಿಂದ ಮೃತಪಟ್ಟಿರುವ 154 ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ, ಗೌರಯುತವಾಗಿ ನಡೆಸಲಾಗಿದೆ. ಅಮವಾಸ್ಯೆಯ ದಿನವಾದ ಇಂದು 154 ಅನಾಥ ಆತ್ಮಗಳಿಗೆ ಸದ್ಗಗತಿ ಪ್ರಾಪ್ತಿಗಾಗಿ ಪೆರಂಪಳ್ಳಿ ಶೀಂಬ್ರಾ ಶ್ರೀಸಿದ್ಧಿವಿನಾಯಕ ದೇವಸ್ಥಾನದ ಯಾಗ ಸಭಾಂಗಣದಲ್ಲಿ ಕರಂಬಳ್ಳಿ ನಾಗರಾಜ್ ಐತಾಳ್ ಸಾರಥ್ಯದ ಪುರೋಹಿತ ಬಳಗದಿಂದ, ತಿಲಹೋಮ, ನಾರಾಯಣ ಬಲಿ ಮೊದಲಾದ ಧಾರ್ಮಿಕ ಪ್ರಕ್ರಿಯೆಗಳು ನಡೆಸಲಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಮುಂದಾಳತ್ವದಲ್ಲಿ ಎಲ್ಲಾ […]
ಹೆಗಲ ಮೇಲೆ ಕೈ ಹಾಕಿದ ಕಾರ್ಯಕರ್ತನಿಗೆ ಹೊಡೆದ ಡಿಕೆಶಿ
ಮಂಡ್ಯ: ಹೆಗಲ ಮೇಲೆ ಕೈ ಹಾಕಿದ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಲೆಗೆ ಹೊಡೆದ ಘಟನೆ ಮಂಡ್ಯದಲ್ಲಿ ನಡೆದಿದ್ದು, ಇದೀಗ ಘಟನೆ ಕುರಿತ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಶುಕ್ರವಾರ ಸಂಜೆ ಡಿಕೆಶಿ ಭಾರತೀನಗರಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶಿವಕುಮಾರ್ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಅಣ್ಣಾ ಎನ್ನುತ್ತಾ ಬಂದ ಕಾರ್ಯಕರ್ತನೊಬ್ಬ ಅವರ ಹೆಗಲ ಮೇಲೆ ಕೈ ಇಟ್ಟಿದ್ದಾನೆ. ಇದರಿಂದ ಸಿಟ್ಟಿಗೆದ್ದ ಡಿಕೆಶಿ […]
ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಆಯ್ಕೆ
ಉಡುಪಿ: ನೂತನವಾಗಿ ರಚನೆಯಾದ ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘಗಳ ಒಕ್ಕೂಟದ (ಎಫ್.ಓ.ಬಿ.ಎ.ಕೆ.ಎಸ್.) ಅಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಅವರು ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳು: ಕಾರ್ಯಾಧ್ಯಕ್ಷ- ಲಿಂಗಾರೆಡ್ಡಿ ಚಿತ್ರದುರ್ಗ, ಉಪಾಧ್ಯಕ್ಷರು- ಸದಾನಂದ ಛಾತ್ರ ಉಡುಪಿ, ಮಂಜುನಾಥ ತುಮಕೂರು, ಅನ್ವರ್ ಪಾಶಾ ಚಾಮರಾಜನಗರ, ರಂಗಪ್ಪ ಶಿವಮೊಗ್ಗ, ಮಲ್ಲೇಶಪ್ಪ ದಾವಣಗೆರೆ, ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಮತ್ತು ವಜ್ರಗೌಡ ಮೈಸೂರು, ಪ್ರಧಾನ ಕಾರ್ಯದರ್ಶಿ- ಕೆ. ಕೆ. ಬಾಲಕೃಷ್ಣ ಚಿಕ್ಕಮಗಳೂರು. ಕಾರ್ಯದರ್ಶಿ- ವಿಕ್ರಮ್ ಬೆಂಗಳೂರು, ಜೊತೆ ಕಾರ್ಯದರ್ಶಿಗಳು- ಜೀವಂಧರ ಅಧಿಕಾರಿ ಮಂಗಳೂರು, ಮಂಜೇಗೌಡ […]
ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ: ರಾಜ್ಯದಲ್ಲೂ ಆತಂಕ ಶುರು.!
ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಇದರಿಂದ ರಾಜ್ಯದಲ್ಲೂ ಆತಂಕ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಿದೆ. ಆದರೆ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಶೇ.4 ಮತ್ತು ಶೇ.10ರಷ್ಟಿದೆ. ಆ ರಾಜ್ಯಗಳಿಂದ ಕರ್ನಾಟಕ ಹಾಗೂ ಬೆಂಗಳೂರಿಗೆ ಸಾಕಷ್ಟು ಜನರು ಪ್ರಯಾಣ ಮಾಡುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.