ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ
ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮವನ್ನು ಹೊಸ ತರಗತಿಯೊಂದಿಗೆ ಆರಂಭಿಸುತ್ತಿದೆ. ಇದೇ ಬರುವ ಜುಲೈ 20ರ ಮಂಗಳವಾರದಿಂದ ಹೊಸ ತರಗತಿಯು ಆರಂಭಗೊಳ್ಳಲಿದೆ. ಕಳೆದ 4 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ ಅವರು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ತರಬೇತಿ ಉಚಿತವಾಗಿದ್ದು, ಹೊಸ ತರಗತಿ ಪ್ರತೀ ಮಂಗಳವಾರ ಸಂಜೆ 5ರಿಂದ 6ರ ವರೆಗೆ ಉಡುಪಿಯ ಸೋದೆ ಮಠದಲ್ಲಿ ನಡೆಯಲಿದೆ. […]
ದೇಶದ ಮೊದಲ ಕೋವಿಡ್ ಸೋಂಕಿತೆಗೆ ಮತ್ತೆ ಕೋವಿಡ್ ಪಾಸಿಟಿವ್.!
ತ್ರಿಸ್ಸೂರ್: ದೇಶದಲ್ಲಿಯೇ ಮೊದಲ ಬಾರಿಗೆ ಕೇರಳದಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿತ್ತು. ಕೇರಳದ ತ್ರಿಸ್ಸೂರ್ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಸುಮಾರು ಒಂದೂವರೆ ವರ್ಷಗಳ ನಂತರ ಅದೇ ವಿದ್ಯಾರ್ಥಿಯಲ್ಲಿ ಮತ್ತೆ ಪಾಸಿಟಿವ್ ಕಂಡುಬಂದಿದೆ. ಕೋವಿಡ್ ಹುಟ್ಟಿದ್ದ ಚೀನಾದ ವುಹಾನ್ ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗೆ ಕಳೆದ ವರ್ಷ ಜನವರಿ 30 ರಂದು ಕೋವಿಡ್ -19 ಪಾಸಿಟಿವ್ ದೃಢಪಟ್ಟಿತ್ತು. ಆ ಮೂಲಕ ದೇಶದಲ್ಲಿ ಕೋವಿಡ್-19 ಸೋಂಕು ತಗುಲಿದ ಮೊದಲ ವ್ಯಕ್ತಿಯಾಗಿ ಹೊರಹೊಮ್ಮಿದ್ದರು. ಈಕೆ ವುಹಾನ್ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ […]
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನ
ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ (78) ವಯೋಸಹಜ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ತಮ್ಮ ಹದಿಮೂರರ ಹರೆಯದಲ್ಲೇ ಯಕ್ಷಗಾನ ರಂಗ ಪ್ರವೇಶಿಸಿ ಸುದೀರ್ಘ ಆರು ದಶಕಗಳ ಕಲಾಸೇವೆಗೈದು ನಾಲ್ಕು ವರ್ಷದ ಹಿಂದೆ ವೃತ್ತಿರಂಗದಿಂದ ನಿವೃತ್ತರಾಗಿದ್ದರು. ಕುಂಡಾವು, ವೇಣೂರು, ಇರುವೈಲು, ಸೌಕೂರು, ಕಟೀಲು, ಎಡನೀರು, ಹನುಮಗಿರಿ ಮೇಳಗಳಲ್ಲಿ ತಿರುಗಾಟ ಮಾಡಿದ್ದಾರೆ. ಸಾತ್ವಿಕ, ರಾಜಸ ಎರಡೂ ರೀತಿಯ ಪೌರಾಣಿಕ ಪಾತ್ರಗಳಲ್ಲಿ ಸಮರ್ಥ ನಿರ್ವಹಣೆಯ ಮೂಲಕ ಅಪಾರ ಯಕ್ಷಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. […]
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಅರ್ಜಿ […]
ಉಡುಪಿ: ಜುಲೈ 14ರ ಕೋವಿಡ್ ಲಸಿಕಾ ಲಭ್ಯತೆ ವಿವರ
ಉಡುಪಿ: ಜಿಲ್ಲೆಯಲ್ಲಿ ಜುಲೈ 14 ರಂದು ಉಡುಪಿ ನಗರ ಪ್ರದೇಶದ ಕೊರೊನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ […]