ಉತ್ತರಪ್ರದೇಶದ ಜನಸಂಖ್ಯಾ ನಿಯಂತ್ರಣ ಮಾದರಿಯನ್ನು ರಾಜ್ಯದಲ್ಲೂ ಜಾರಿಗೆ ತನ್ನಿ: ಕುಯಿಲಾಡಿ ಆಗ್ರಹ
ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಜನಸಂಖ್ಯೆ ದಿನದ ಅಂಗವಾಗಿ ಹೊಸ ಜನಸಂಖ್ಯೆ ನೀತಿಯನ್ನು ಘೋಷಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಈ ಕ್ರಮ ಅನಿವಾರ್ಯವೆನಿಸಲಿದೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ […]
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಜುಲೈ 16ವರೆಗೆ ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ-ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಜುಲೈ 16 ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಭಾನುವಾರದಿಂದಲೇ ಮಳೆಯಾಗುತ್ತಿದ್ದು, ಇದರಿಂದ ವ್ಯವಸಾಯಕ್ಕೆ […]
ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣ: ನಾಲ್ಕು ಪೊಲೀಸರ ತಂಡ ರಚನೆ; ವಿವಿಧ ಆಯಾಮಗಳಲ್ಲಿ ತನಿಖೆ ಆರಂಭ
ಉಡುಪಿ: ಬ್ರಹ್ಮಾವರ ಕುಮ್ರಗೋಡುವಿನ ಫ್ಲಾಟ್ ವೊಂದರಲ್ಲಿ ಸೋಮವಾರ ಸಂಜೆ ನಡೆದ ವಿಶಾಲ ಗಾಣಿಗ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕನ ವಿಚಾರಣೆ.? ರಿಕ್ಷಾ ಚಾಲಕ ವಿಶಾಲ ಅವರಿಗೆ ಪರಿಚಯಸ್ಥನಾಗಿದ್ದು, ಅವರ ಅಪಾರ್ಟ್ ಮೆಂಟ್ ಪಕ್ಕದಲ್ಲೇ ವಾಸವಿದ್ದನು. ವಿಶಾಲ ಅವರು ತಮ್ಮ ಕೆಲಸಕಾರ್ಯಗಳಿಗೆ ಆತನ ರಿಕ್ಷಾದಲ್ಲೇ ಹೆಚ್ಚಾಗಿ ಓಡಾಡುತ್ತಿದ್ದರು. ಅಲ್ಲದೆ ಕೊಲೆ ನಡೆದ ದಿನವೂ […]
ಹೆಚ್ಚುವರಿ ಟಿಕೆಟ್ ದರ ಪಡೆಯುವಂತಹ ಬಸ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಆರ್ ಟಿಒ ಎಚ್ಚರಿಕೆ
ಮಂಗಳೂರು: ಟಿಕೆಟ್ ಗೆ ಹೆಚ್ಚುವರಿ ದರ ಪಡೆಯುವಂತಹ ಖಾಸಗಿ ಬಸ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ. ಹೆಚ್ಚುವರಿ ದರ ಪಡೆಯುವ ಬಸ್‌ನ ನೋಂದಣಿ ಸಂಖ್ಯೆ ಹಾಗೂ ರೂಟ್ ಮಾಹಿತಿಯನ್ನು ಲಿಖಿತವಾಗಿ, ಪುರಾವೆಯೊಂದಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗೆ ಸಲ್ಲಿಸಬೇಕು. ಅಂತಹ ವಾಹನಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಸರಕಾರದ ಅಧಿಸೂಚನೆಯ ಪ್ರಕಾರ ನಗರ ಮತ್ತು […]
ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಜಿಲ್ಲಾ ಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ
ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳು ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಮೇಲ್ಮನವಿ ಮತ್ತು ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. 2016ರಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 8ರಂದು […]