ಅಲೆವೂರು: ಕಟ್ಟಡ ಕಾರ್ಮಿಕರ ಕಿಟ್ ದುರುಪಯೋಗ ಆಗಿಲ್ಲ; ಶ್ರೀಕಾಂತ್ ನಾಯಕ್ ಸ್ಪಷ್ಟನೆ

ಉಡುಪಿ: ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಮಂಜೂರಾಗಿರುವ ಆಹಾರ ಸಾಮಗ್ರಿಗಳ ಕಿಟ್ ಗಳಲ್ಲಿ ಯಾವುದೇ ದುರುಪಯೋಗ ಆಗಿಲ್ಲ. ಬಹುತೇಕ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಶ್ರೀಕಾಂತ್ ನಾಯಕ್ ಹೇಳಿದ್ದಾರೆ. ಅಲೆವೂರು ಗ್ರಾಪಂ ಅಧ್ಯಕ್ಷೆ ಪುಷ್ಪ ಅಂಚನ್ ಅವರು ತನ್ನ ವಿರುದ್ಧ ಮಾಡಿರುವ ‘ಕಟ್ಟಡ ಕಾರ್ಮಿಕರ ಕಿಟ್ ದುರುಪಯೋಗ ಆರೋಪಕ್ಕೆ’ ಸ್ಪಷ್ಟನೆ ನೀಡಿದರು. ಅಲೆವೂರು ಗ್ರಾಪಂ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಮಂಜೂರಾಗಿರುವ 200 ಕಿಟ್ ಗಳನ್ನು ಶಾಸಕರ ಆದೇಶದಂತೆ […]

ಪಂಜಾಬ್ ಕಾಂಗ್ರೆಸ್ ನ ಆಂತರಿಕ ಬಿಕ್ಕಟ್ಟು ಶಮನ: ಸಿಂಗ್ ಗೆ ಸಿಎಂ ಪಟ್ಟ, ಸಿಧುಗೆ ಪಕ್ಷದ ಸಾರಥ್ಯ

ನವದೆಹಲಿ: ಪಂಜಾಬ್‌ ಕಾಂಗ್ರೆಸ್‌ನ ಆಂತರಿಕ ಬಿಕ್ಕಟ್ಟು ಶಮನಗೊಳಿಸಲು ಹೈಕಮಾಂಡ್ ಮುಂದಾಗಿದ್ದು, ಅದರಂತೆ ನವಜೋತ್‌ ಸಿಂಗ್‌ ಸಿಧು ಅವರಿಗೆ ಪಕ್ಷದ ರಾಜ್ಯ ಘಟಕದ ಚುಕ್ಕಾಣಿ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಹಾಗೆ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ತೀರ್ಮಾನಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಂಜಾಬ್‌ ವಿಧಾನಸಭೆ ಸ್ಥಾನಗಳಿಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಪಕ್ಷದೊಳಗೆ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನಗೊಳಿಸಲು ಕಾಂಗ್ರೆಸ್‌ ತಿಂಗಳಿಂದ ಹಲವು ಸಭೆಗಳನ್ನು ನಡೆಸಿತ್ತು. ಇತ್ತೀಚೆಗೆ ನವಜೋತ್‌ ಸಿಂಗ್‌ ದೆಹಲಿಯಲ್ಲಿ […]

ಉಡುಪಿ: ಸ್ಥಳೀಯ ದೂರು ಸಮಿತಿಯಿಂದ ಕೈಬಿಟ್ಟ ವಿಚಾರ; ಡಿಸಿ ವಿರುದ್ಧ ಸಿಡಿದೆದ್ದ ವಕೀಲೆ ಸಹನಾ ಕುಂದರ್

ಉಡುಪಿ: ನನ್ನನ್ನು ಉಡುಪಿ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸಿದ ದಿನವೇ ಯಾವ ಕಾರಣಕ್ಕಾಗಿ ಆದೇಶವನ್ನು ಹಿಂಪಡೆಯಲಾಯಿತು ಎಂಬುದನ್ನು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ವಕೀಲೆ ಮತ್ತು ಬೆಳ್ಮಣ್ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಹನಾ ಕುಂದರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ನನ್ನನ್ನು ಜುಲೈ 8ರಂದು ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಗೆ ಆಯ್ಕೆ ಮಾಡಲಾಗಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದರು. ಉಡುಪಿಯಲ್ಲಿ ಮಹಿಳೆಯರಿಗೆ ಆಗುವ ಲೈಂಗಿಕ ದೌರ್ಜನ್ಯ, […]

ಉಡುಪಿ: ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣ ಎಸ್. ಹೆಬ್ಸೂರು ಮನೆ ಮೇಲೆ ಎಸಿಬಿ ದಾಳಿ

ಉಡುಪಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಕೃಷ್ಣ ಎಸ್.ಹೆಬ್ಸೂರು ಅವರ ನಿವಾಸ ಹಾಗೂ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ದೊಡ್ಡಣಗುಡ್ಡೆಯಲ್ಲಿರುವ ಅವರ ನಿವಾಸಕ್ಕೆ ತೆರಳಿದ ಎಸಿಬಿ ಅಧಿಕಾರಿಗಳು ಆಸ್ತಿಪತ್ರಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ: ಬೆಂಗಳೂರಿನಲ್ಲಿ ₹105ರ ಗಡಿ ದಾಟಿದ ಪೆಟ್ರೋಲ್

ನವದೆಹಲಿ: ದೇಶಾದ್ಯಂತ ಇಂಧನ ಬೆಲೆ ಮತ್ತೆ ಹೆಚ್ಚಳವಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಗುರುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ […]