ಮಣಿಪಾಲ: ಕೌಟುಂಬಿಕ ಕಲಹದಿಂದ ಮನನೊಂದ ನವವಿವಾಹಿತ ಆತ್ಮಹತ್ಯೆಗೆ ಶರಣು
ಹಿರಿಯಡಕ: ಕೌಟುಂಬಿಕ ಕಲಹದಿಂದ ಮನನೊಂದ ನವವಿವಾಹಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಣಂಕಿಲ 82 ಕುದಿ ಗ್ರಾಮದ ವರ್ವಾಡಿ ಕ್ರಾಸ್ ಎಂಬಲ್ಲಿ ನಡೆದಿದೆ. ಮಂಚಿ ರಾಜೀವನಗರದ ನಿವಾಸಿ ಅರುಣ (ಕುಟ್ಟಿ) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ ಯುವಕ. 28 ವರ್ಷದ ಈತ, ವರ್ಷದ ಹಿಂದೆಯಷ್ಟೇ ಪಡುಬೆಳ್ಳೆ ಪಾಂಬೂರಿನ ಪ್ರತೀಕ್ಷಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ಎರಡು ತಿಂಗಳ ಹಿಂದೆ ಪೆರ್ಣಂಕಿಲ 82 ಕುದಿ ಗ್ರಾಮದ ವರ್ವಾಡಿ ಕ್ರಾಸ್ ಎಂಬಲ್ಲಿ ಬಾಡಿಗೆ ಮನೆ ಮಾಡಿ ಇಬ್ಬರು ಒಟ್ಟಿಗೆ ಸಂಸಾರ […]
ಕೇಂದ್ರದಲ್ಲಿ ಬಾಕಿ ಇರುವ ಉಡುಪಿ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬಂದಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಗರ ಮಾಲಾ ಯೋಜನೆಯಡಿ […]
ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ
ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 30,000 ಮುಖಗವಸುಗಳನ್ನು (ಮಾಸ್ಕ್) ವಿತರಿಸಲಾಯಿತು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಅವರು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಇಂದು ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಮಣಿಪಾಲ ಸಂಸ್ಥೆಯು 2020ರ ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಿಟ್ಟಿತ್ತು. ಈಗ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ […]
6 ತಿಂಗಳಲ್ಲಿ ಮಾಧ್ಯಮಗಳನ್ನು ಕಂಟ್ರೋಲ್ಗೆ ತಗೋತೀವಿ ಅಂದ್ರಾ ಅಣ್ಣಾಮಲೈ
ಚೆನ್ನೈ: ತಮಿಳುನಾಡಿನಲ್ಲಿ ಮಾಧ್ಯಮಗಳು ಬಿಜೆಪಿಯನ್ನು ಸುಖಾಸುಮ್ಮನೆ ಟೀಕೆ ಮಾಡುತ್ತಿವೆ. ಮುಂದಿನ ಆರು ತಿಂಗಳಲ್ಲಿ ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ನಿಯೋಜಿತ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ ಎಂಬ ವರದಿಯಾಗಿದೆ. ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ತಮಿಳುನಾಡಿನ ನಿರ್ಗಮಿತ ಬಿಜೆಪಿ ಅಧ್ಯಕ್ಷ ಎಲ್.ಮುರಗನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಅಲ್ಲದೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಖಾತೆಯ ಸ್ಥಾನವನ್ನು ಎಲ್ ಮುರಗನ್ ಅವರಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ತಮಿಳುನಾಡಿನ ಬಿಜೆಪಿ […]
ಅಲೆವೂರು ಗ್ರಾಪಂನಿಂದ ಶೇ. 10ರಷ್ಟು ತೆರಿಗೆ ಕಡಿತ: ರಾಜ್ಯದಲ್ಲೇ ಪ್ರಥಮ
ಉಡುಪಿ: ಕೊರೊನಾ ಲಾಕ್ ಡೌನ್ ನಿಂದಾಗಿ ತೊಂದರೆಗೊಳಗಾಗಿರುವ ಜನರ ಸಂಕಷ್ಟಕ್ಕೆ ಮಿಡಿದಿರುವ ಅಲೆವೂರು ಗ್ರಾಮ ಪಂಚಾಯತ್, ಶೇ. 10ರಷ್ಟು ತೆರಿಗೆ ಕಡಿತ ಮಾಡುವ ಮೂಲಕ ಜನರ ಆರ್ಥಿಕ ಹೊರೆಯನ್ನು ಇಳಿಸಿದೆ. ಅಲೆವೂರು ಗ್ರಾಮ ಪಂಚಾಯತ್ ಕೈಗೊಂಡಿರುವ ಈ ನಿರ್ಧಾರ ರಾಜ್ಯದಲ್ಲಿಯೇ ಪ್ರಥಮವಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈಚೆಗೆ ನಡೆದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಲೆವೂರು ಹಾಗೂ ಕೊರಂಗ್ರಪಾಡಿ ಗ್ರಾಮಗಳ ಜನರಿಗೆ 2021- 22ನೇ ಸಾಲಿನ ಮನೆ ತೆರಿಗೆ, ವಾಣಿಜ್ಯ ಕಟ್ಟಡ ತೆರಿಗೆ ಮತ್ತು ಉದ್ಯಮ ಪರವಾನಿಗೆ […]