ಬಕ್ರೀದ್ ಆಚರಣೆಗೆ ಮಾರ್ಗಸೂಚಿ ಪ್ರಕಟ: ಮಸೀದಿಗಳಲ್ಲಿ ಪ್ರಾರ್ಥನೆಗೆ 50 ಜನರ ಮಿತಿ

ಬೆಂಗಳೂರು: ಜುಲೈ 21ರಂದು‌ ನಡೆಯುವ ಬಕ್ರೀದ್ ಹಬ್ಬಕ್ಕೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಅದರಂತೆ ಮಸೀದಿಗಳಲ್ಲಿ ಒಮ್ಮೆಗೆ 50 ಜನರಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ನಮಾಜ್‌ ಮಾಡುವಾಗ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು. ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಮಾನ ಪರೀಕ್ಷಿಸಬೇಕು. […]

ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರಂದು ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್. ಸ್ನೇಹಲ್‌ ತಿಳಿಸಿದ್ದಾರೆ. ಶುಕ್ರವಾರದಿಂದಲೇ ಎಲ್ಲ ವಿದ್ಯಾರ್ಥಿಗಳಿಗೆ ನೋಂದಣಿ ಸಂಖ್ಯೆಯ ಮಾಹಿತಿಯನ್ನು ರವಾನಿಸಲಾಗುತ್ತಿದೆ. ಪ್ರತಿ ವರ್ಷ ನಿರ್ದಿಷ್ಟ ನೋಂದಣಿ ಸಂಖ್ಯೆ ಬಳಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಈ ಬಾರಿ ಪರೀಕ್ಷೆ ನಡೆಯದಿರುವ ಕಾರಣ, ನೋಂದಣಿ ಸಂಖ್ಯೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಿಂದ ಪಡೆದುಕೊಂಡು, ಅದರ ಮೂಲಕ ಫಲಿತಾಂಶ ನೋಡಬಹುದು ಎಂದು ತಿಳಿಸಿದ್ದಾರೆ. https://dpue-exam.karnataka.gov.in/iipu2021registrationnumber/regnumber ಈ ಲಿಂಕ್ ಬಳಸಿ ನೋಂದಣಿ ಸಂಖ್ಯೆ […]

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ದೆಹಲಿಯಿಂದಲೇ ವಿರೋಧಿ ಬಣಕ್ಕೆ ಯಡಿಯೂರಪ್ಪರಿಂದ ಖಡಕ್ ಸಂದೇಶ

ಉಡುಪಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು. ಅಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೆ, ರಾಜೀನಾಮೆ ನೀಡುವಂತೆ ಹೈಕಮಾಂಡ್ ನನಗೆ ಸೂಚಿಸಿಲ್ಲ ಎನ್ನುವ ಮೂಲಕ ರಾಜೀನಾಮೆ ವದಂತಿಯನ್ನು‌ ತಳ್ಳಿ‌ಹಾಕಿದರು.