ಸಿಂಪಲ್ಲಾಗಿ ಇಂಗ್ಲೀಷ್ ಕಲೀರಿ:ಈ ವಾರದ ಇಂಗ್ಲೀಷ್ ಕ್ಲಾಸ್ ಕೇಳಿ

ನಿಮಗೆ ಬೇಗ ಬೇಗ ಇಂಗ್ಲೀಷ್ ಕಲಿಬೇಕು, ಇಂಗ್ಲೀಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲೀಷ್ ಪಾಠ ಮಾಡ್ತಾರೆ.  ಕೆಳಗಿನ ಲಿಂಕ್ ಒತ್ತಿ ಈ ವಾರದ ಇಂಗ್ಲೀಷ್  ಕ್ಲಾಸ್ ಗೆ ಎಂಟ್ರಿ ಆಗಿ https://youtu.be/IUoKN1DZYNc

ಬ್ರಹ್ಮಾವರ ವಿದ್ಯಾಲಕ್ಷ್ಮೀ ಗ್ರೂಫ್ ಆಫ್ ಇನ್ ಸ್ಟಿಟ್ಯೂಷನ್ ಕಾಲೇಜಿನಲ್ಲಿ ಕೊರೊನಾ ಲಸಿಕಾ ಅಭಿಯಾನ

ಉಡುಪಿ: ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಗ್ರೂಫ್ ಆಫ್ ಇನ್ ಸ್ಟಿಟ್ಯೂಷನ್ ಕಾಲೇಜಿನಲ್ಲಿ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದ್ದು, ಮೊದಲ ದಿನದಂದು 143 ಡೋಸ್ ಲಸಿಕೆಯನ್ನು ನೀಡಲಾಗಿದೆ. ಬ್ರಹ್ಮಾವರ ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಜೀತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ […]

ಹಾಡಹಗಲೇ ಬ್ಯಾಂಕ್ ನೊಳಗೆ ವ್ಯಕ್ತಿಯ ಹತ್ಯೆ

ಬೆಂಗಳೂರು: ಬ್ಯಾಂಕ್ ನಲ್ಲಿಯೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡ ಮಚ್ಚಿನಿಂದ ಹಲ್ಲೆಗೈದು ಕೊಲೆ ಮಾಡಿದ ಘಟನೆ ಕೋರಮಂಗಲದ ಯೂನಿಯನ್​ ಬ್ಯಾಂಕ್​ನಲ್ಲಿ ಇಂದು ನಡೆದಿದೆ. ಕೋರಮಂಗಲ 8ನೇ ಬ್ಲಾಕ್ ಯೂನಿಯನ್ ಬ್ಯಾಂಕ್ ನಲ್ಲಿ ರೌಡಿಶೀಟರ್ ಬಬ್ಲಿ ತನ್ನ ಪತ್ನಿ ಜೊತೆ ಬ್ಯಾಂಕ್‌ಗೆ ಆಗಮಿಸಿದ್ದನು. ಈ ವೇಳೆ ಬ್ಯಾಂಕ್‌ ನೊಳಗೆ ನುಗ್ಗಿದ ಕೆಲ ಕಿಡಿಗೇಡಿಗಳು, ಬಬ್ಲಿಯನ್ನು ಅಟ್ಯಾಕ್ ಮಾಡಿ ಹತ್ಯೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಆಗ್ನೇಯ ವಿಭಾಗ ಡಿಸಿಪಿ‌‌ ಜೋಷಿ‌ ಶ್ರೀನಾಥ್ ಮಹದೇವ್ ಪರಿಶೀಲನೆ ನಡೆಸುತ್ತಿದ್ದಾರೆ.

ಸಿಎಂ ಬದಲಾವಣೆ ವಿಚಾರ ತೀವ್ರಗೊಂಡ ಬೆನ್ನಲ್ಲೇ ಬಿಎಸ್ ವೈ ಭೇಟಿಗೆ ಮುಂದಾದ ಮಿತ್ರಮಂಡಳಿ‌ ನಾಯಕರು

ಬೆಂಗಳೂರು: ಸಿಎಂ ಬಿ.ಎಸ್.​​ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವಿಚಾರ ಹಾಗೂ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗುತ್ತಿದ್ದಂತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದ ಮಿತ್ರ ಮಂಡಳಿ ನಾಯಕರಲ್ಲಿ ಆತಂಕ ಶುರುವಾಗಿದೆ. ನಾಯಕತ್ವ ಬದಲಾವಣೆಗೆ ಹೈಕಮಾಂಡ್​ ಸೂಚನೆ ನೀಡಿದೆ ಎಂಬ ಸುದ್ದಿ ಹೊರ ಬರುತ್ತಿದಂತೆ ಸಚಿವರು ಸಿಎಂ ಬಿಎಸ್​​ವೈ ಅವರನ್ನು ಭೇಟಿ ಮಾಡಲು ಮುಂದಾಗಿದ್ದು, ಈಗಾಗಲೇ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕೃಷಿ ಸಚಿವ ಬಿ.ಸಿ ಪಾಟೀಲ್​​ ಹಾಗೂ […]

ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣ; ಪೊಲೀಸರಿಂದ ಪತಿಯ ತೀವ್ರ ವಿಚಾರಣೆ

ಉಡುಪಿ: ಬ್ರಹ್ಮಾವರ ಕುಮ್ರಗೋಡು ಫ್ಲ್ಯಾಟ್‌ನಲ್ಲಿ ನಡೆದ ವಿಶಾಲ ಗಾಣಿಗ(35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.‌ ಸುಪಾರಿ ಕೊಟ್ಟು ಕೊಲೆ?: ಸುಪಾರಿ ಕೊಟ್ಟು ವಿಶಾಲ ಗಾಣಿಗ ಅವರನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಸುಪಾರಿ ಕಿಲ್ಲರ್‌ಗಳನ್ನು ಪೊಲೀಸರು ಹೊರ ರಾಜ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ತೀವ್ರ ತನಿಖೆ ಮುಂದುವರೆದಿದೆ. ಪತಿಯ ತೀವ್ರ ವಿಚಾರಣೆ: ಪತ್ನಿಯ ಕೊಲೆಯ ನಂತರ ದುಬೈಯಿಂದ ಊರಿಗೆ ಬಂದಿದ್ದ ಪತಿ ಬೀಜೂರು […]