ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ
ಉಡುಪಿ: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು, ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು […]
ಉಡುಪಿ: ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ
ಉಡುಪಿ: ಜಿಲ್ಲೆಯ ತೋಟಗಾರಿಕಾ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕಾ ಕಸಿ ಅಥವಾ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ಕಸಿ ಕಾಳು ಮೆಣಸು, ತೆಂಗು ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಆಸಕ್ತ ರೈತರು […]
ವಿಶಾಲ ಗಾಣಿಗ ಕೊಲೆ ಪ್ರಕರಣ: ಪತಿ ಸಹಿತ ಇಬ್ಬರು ಆರೋಪಿಗಳ ಬಂಧನ
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮ್ರಗೋಡಿನ ಫ್ಲಾಟ್ನಲ್ಲಿ ಜುಲೈ 12ರಂದು ನಡೆದ ವಿಶಾಲ ಗಾಣಿಗ(35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ವಿಶಾಲ ಗಾಣಿಗರ ಪತಿ ಬೀಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೆ ಸುಪಾರಿ ನೀಡಿದ್ದ ಪತಿ: ವಿಶಾಲ ಗಾಣಿಗ ಹಾಗೂ ಆಕೆಯ ಪತಿ ರಾಮಕೃಷ್ಣ ಮಧ್ಯೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತನ್ನ […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 4,50,706 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಮೊದಲ ಶ್ರೇಣಿಯಲ್ಲಿ ಪಾಸ್
ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ನೀಡಿದ ಮಾಹಿತಿಯ ವಿವರ ಹೀಗಿದೆ: ಫ್ರೆಶರ್ಸ್ ಫಲಿತಾಂಶ ತಿರಸ್ಕರಿಸಿ ಮತ್ತೆ ಪರೀಕ್ಷೆ ತೆಗೆದುಕೊಂಡರೆ, ಅವರನ್ನು ಫ್ರೆಶರ್ಸ್ ಎಂದೇ ಪರಿಗಣಿಸಲಾಗುವುದು. ಫಲಿತಾಂಶದಿಂದ ತೃಪ್ತರಾಗದವರಿಗೆ ಆಗಸ್ಟ್ ತಿಂಗಳಲ್ಲಿ ಮತ್ತೆ ಪರೀಕ್ಷೆ ಫಲಿತಾಂಶದ ಬಗ್ಗೆ ಅಸಮಾಧಾನ ಇದ್ದವರು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 30 ಕಡೇ ದಿನಾಂಕ 2,239 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದಿಂದ […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಎಲ್ಲ ವಿದ್ಯಾರ್ಥಿಗಳೂ ಪಾಸ್
ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಈ ಬಾರಿ ಎಲ್ಲಾ ಪಿಯುಸಿ ವಿದ್ಯಾರ್ಥಿಗಳನ್ನು ಕೊರೊನಾ ಕಾರಣಕ್ಕಾಗಿ ಪಾಸ್ ಮಾಡಲಾಗಿದೆ. ಸಂಜೆ 5 ರ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಎಸ್ಎಸ್ಎಲ್ ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನ ಪರಿಗಣನೆಗೆ ತೆಗೆದುಕೊಂಡು ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ವೆಬ್ಸೈಟ್ www.karresults.nic.in ನಲ್ಲಿ ನೋಡಬಹುದಾಗಿದೆ.