ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ‌ ಚಿಕಿತ್ಸೆ ಮುಂದುವರಿಕೆ

ಮಂಗಳೂರು: ಹಿರಿಯ ಕಾಂಗ್ರೆಸ್‍ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ಕಾಂಗ್ರೆಸ್‍ ಮುಖಂಡ ಜನಾರ್ಧನ ಪೂಜಾರಿ, ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್, ಎಂ.ಬಿ ಪಾಟೀಲ್, ಯು.ಟಿ. ಖಾದರ್, ಪ್ರಮೋದ್ ಮಧ್ವರಾಜ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ವಿದ್ಯಾರ್ಥಿಗಳೇ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರ ಅನ್ನಿಸಿಲ್ಲವೇ: ಹಾಗಿದ್ರೆ ಬೇಗ ಅರ್ಜಿ ಸಲ್ಲಿಸಿ

ಬೆಂಗಳೂರು: ಎಸ್ಎಸ್ಎಲ್’ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬರಹುದು. ಫಲಿತಾಂಶ ರದ್ದುಪಡಿಸಿಕೊಂಡ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಜಿವ್ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ. ಜು.31ರೊಳಗೆ ಅರ್ಜಿಗಳನ್ನು […]

ಉಡುಪಿಯಲ್ಲಿ ಜು. 26 ರಿಂದ ಕೃಷಿ ಅಭಿಯಾನ ಕಾರ್ಯಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಾದ್ಯಂತ ಜುಲೈ 26 ರಿಂದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿ, ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಮಂಗಳವಾರ, ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಗ್ರ ಕೃಷಿ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜುಲೈ […]

ಉಡುಪಿ: ತೆಂಕುತಿಟ್ಟು ಯಕ್ಷಗಾನ ನಾಟ್ಯ ಉಚಿತ ತರಬೇತಿಯ ಹೊಸ ತರಗತಿಯ ಉದ್ಘಾಟನೆ

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಉಡುಪಿ ಸೋದೆ ಮಠದಲ್ಲಿ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮದ ನೂತನ ತರಗತಿಯ (ಬ್ಯಾಚ್) ಉದ್ಘಾಟನೆ ಮಂಗಳವಾರ ನಡೆಯಿತು. ಪುರೋಹಿತರಾದ ಶಶಿಕಾಂತ ಭಟ್ ಮತ್ತು ಯಕ್ಷಗುರು ರಾಕೇಶ್ ರೈ ಅಡ್ಕ ನೂತನ ಬ್ಯಾಚ್ ಅನ್ನು ಉದ್ಘಾಟಿಸಿದರು.   ಬಳಿಕ ಮಾತನಾಡಿದ ಶಶಿಕಾಂತ ಭಟ್, ಹೆಜ್ಜೆಗಾರಿಕೆ ಕಲಿಕೆಗೆ ಆಸಕ್ತಿ, ಶ್ರದ್ಧೆ ಮುಖ್ಯ. ಇವುಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ತರಬೇತಿಯಲ್ಲಿ ಭಾಗವಹಿಸಿದರೆ, ಹೆಜ್ಜೆಗಾರಿಕೆ ಕಲೆಯನ್ನು ಯಶಸ್ವಿಯಾಗಿ […]

ದ್ವಿತೀಯ ಪಿಯುಸಿ ಫಲಿತಾಂಶ: ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ 453 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾರ್ಕಳ ಗಣಿತ ನಗರದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಒಟ್ಟು 552 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸಿದ್ದು, 453 ವಿದ್ಯಾರ್ಥಿಗಳಿಗೆ  ಡಿಸ್ಟಿಂಕ್ಷನ್‍ ನಲ್ಲಿ ತೆರ್ಗಡೆಯಾಗಿದ್ದಾರೆ. ಕಾಲೇಜಿನಲ್ಲಿ100ಕ್ಕೆ 100 ಅಂಕಗಳಿಸಿದ ಒಟ್ಟು ಪಠ್ಯಪತ್ರಿಕೆಯ ಸಂಖ್ಯೆ 860 ಆಗಿದ್ದು, ಗಣಿತದಲ್ಲಿ 164, ಕನ್ನಡದಲ್ಲಿ 120, ಭೌತಶಾಸ್ತ್ರದಲ್ಲಿ 110, ಜೀವಶಾಸ್ತ್ರದಲ್ಲಿ 105, ಇಂಗ್ಲಿಷ್‍ನಲ್ಲಿ 103, ರಸಾಯನ ಶಾಸ್ತ್ರದಲ್ಲಿ 98, ಸಂಸ್ಕಂತದಲ್ಲಿ […]