47 ವರ್ಷಗಳಿಂದ ವಿದ್ಯುತ್ ವಂಚಿತ ಕುಟುಂಬಕ್ಕೆ ಸೆಲ್ಕೋ ಸಂಸ್ಥೆಯ ಸಹಕಾರದಿಂದ ಸೋಲಾರ್ ಅಳವಡಿಕೆ

ಕಡಬ: ಸರಿಸುಮಾರು 47 ವರ್ಷಗಳಿಂದ ವಿದ್ಯುತ್ ಇಲ್ಲದೆ ಚಿಮಿನಿದೀಪದಲ್ಲಿಯೇ ಬದುಕು ಸಾಗಿಸುತ್ತಿದ್ದ ಕಡಬ ತಾಲ್ಲೂಕಿನ ಬಲ್ಪ ಗ್ರಾಮದ ಆರ್ಗುಡಿ ನಿವಾಸಿ ಕುಶಾಲಪ್ಪ ಅವರ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೆಲ್ಕೋ ಸಂಸ್ಥೆಯ ಸಹಕಾರದೊಂದಿಗೆ ಸೋಲಾರ್ ದೀಪ‌ ಅಳವಡಿಸಲಾಯಿತು. ಕುಶಾಲಪ್ಪ ಗೌಡ ಅವರ ಮನೆಯಲ್ಲಿ ನಾಲ್ಕು ಮಂದಿ ಇದ್ದು, ಪತ್ನಿ ಕಮಲ ಹಾಗೂ ಮಕ್ಕಳಾದ ನಿತೀಶ್ ಮತ್ತು ಮೋಕ್ಷಿತ್ ಅವರೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಕುಶಲಪ್ಪನವರು ಕೂಲಿ ಕೆಲಸಕ್ಕೆ ಹೋದರೆ, ಪತ್ನಿ ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕಡುಬಡವರಾಗಿರುವ […]

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. 49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.

ಉಡುಪಿ: ಬ್ಲ್ಯಾಕ್ ಫಂಗಸ್ ಗೆ ಇಬ್ಬರು ಬಲಿ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ. ಚಿತ್ರದುರ್ಗ ಜಿಲ್ಲೆಯ 45 ವರ್ಷ ಪ್ರಾಯದ ಪುರುಷ ಹಾಗೂ ಹಾವೇರಿ ಜಿಲ್ಲೆಯ 43 ವರ್ಷ ಪ್ರಾಯದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೊದಲು ಉಡುಪಿ ಜಿಲ್ಲೆಯ ಇಬ್ಬರು ಬ್ಲ್ಯಾಕ್ ಫಂಗಸ್ ನಿಂದ ಅಸುನೀಗಿದ್ದರು. ಜಿಲ್ಲೆಯಲ್ಲಿ ಒಟ್ಟು ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ […]

ನಾಳೆಯಿಂದ ಧಾರ್ಮಿಕ ಸ್ಥಳಗಳಲ್ಲಿ‌ ಸೇವೆಗೆ ಅವಕಾಶ: ಜಾತ್ರೆ, ಮೆರವಣಿಗೆಗೆ ಅವಕಾಶವಿಲ್ಲ

ಬೆಂಗಳೂರು: ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಾನುವಾರದಿಂದ (ಜುಲೈ 25) ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿ ಕಂದಾಯ ಇಲಾಖೆ ಶನಿವಾರ ಆದೇಶ ಹೊರಡಿಸಿದೆ. ಅದರಂತೆ ನಾಳೆಯಿಂದ ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸಬಹುದಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಸಲ್ಲಿಸಲು ಅವಕಾಶ ನೀಡಿ ಜುಲೈ ಮೊದಲ ವಾರ ಆದೇಶ ಹೊರಡಿಸಲಾಗಿತ್ತು. ಆದರೆ, ಯಾವುದೇ ರೀತಿಯ ಪೂಜೆ ಅಥವಾ ಸೇವೆ ಸಲ್ಲಿಸಲು ಅವಕಾಶ ಇರಲಿಲ್ಲ. ಇದೀಗ […]