ಮದ್ಯದ ದೊರೆ ‘ವಿಜಯ್ ಮಲ್ಯ’ ದಿವಾಳಿ: ಲಂಡನ್ ಹೈಕೋರ್ಟ್ ಘೋಷಣೆ
ಲಂಡನ್: ಉದ್ಯಮಿ ವಿಜಯ್ ಮಲ್ಯ ಹಾಗೂ ಭಾರತೀಯ ಬ್ಯಾಂಕ್ಗಳ ನಡುವಿನ ಕಾನೂನು ಹೋರಾಟದಲ್ಲಿ ಕಡೆಗೂ ಭಾರತೀಯ ಬ್ಯಾಂಕ್ಗಳ ಒಕ್ಕೂಟಕ್ಕೆ ದೊಡ್ಡಮಟ್ಟದ ಗೆಲುವು ಸಿಕ್ಕಿದೆ. ಉದ್ಯಮಿ ವಿಜಯ್ ಮಲ್ಯ ಅವರು ದಿವಾಳಿಯಾಗಿದ್ದಾರೆ ಎಂದು ಲಂಡನ್ ಹೈಕೋರ್ಟ್ ಸೋಮವಾರ ಘೋಷಣೆ ಮಾಡಿದೆ. ಇದರಿಂದ ಭಾರತೀಯ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿ ಹೊರ ದೇಶಕ್ಕೆ ಪರಾರಿಯಾಗಿ ಲಂಡನ್ ನಲ್ಲಿ ನೆಲೆಸಿರುವ ವಿಜಯ್ ಮಲ್ಯ ಅವರಿಗೆ ಇದೀಗ ಭಾರೀ ಹಿನ್ನೆಡೆಯಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಭಾಗಿತ್ವದ ಭಾರತೀಯ ಬ್ಯಾಂಕ್ಗಳ […]
ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ
ಬೆಳಗಾವಿ: ಬಿ.ಎಸ್. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ. ಬಿಜೆಪಿ ವರಿಷ್ಠರು ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಬೆಳಗಾವಿ ಪ್ರವಾಸಿಮಂದಿರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೆ ಸರಿ. ಯಡಿಯೂರಪ್ಪ ಕೇರ್ ಟೇಕರ್ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಇಂತಹ ಸಂದರ್ಭದಲ್ಲಿ ಪಡೆದದ್ದು ಸರಿಯಲ್ಲ ಎಂದರು.
ಉಡುಪಿ: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ ಫಲಕ ಕಡ್ಡಾಯ: ಡಿಸಿ ಜಿ. ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ನೊಂದಾಯಿತವಾದ ಎಲ್ಲಾ ಆಸ್ಪತ್ರೆ, ಕ್ಲಿನಿಕ್ಗಳು, ತಮ್ಮಲ್ಲಿ ದೊರೆಯುವ ವಿವಿಧ ಚಿಕಿತ್ಸೆಗಳು, ಚಿಕಿತ್ಸೆಯ ದರಗಳು, ಚಿಕಿತ್ಸಾ ವಿಧಾನಗಳು (ಅಲೋಪತಿ, ಆಯುರ್ವೇದ ಇತ್ಯಾದಿ), ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ಇದು ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತಿರಬೇಕು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ […]
ಹೆದ್ದಾರಿಗಳ ಪಕ್ಕದಲ್ಲಿ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಇನ್ಮುಂದೆ ಲೈಸೆನ್ಸ್ ನೀಡಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೆದ್ದಾರಿಯಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದು ಹೇಳಿದೆ. ಸುಪ್ರೀಂ ಕೋರ್ಟ್ನಿಂದ ಈ […]
ಉಡುಪಿ: ಕೊರೊನಾ ಮತ್ತೆ ಉಲ್ಬಣ; 214 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಮತ್ತೆ ಕೊರೊನಾ ಉಲ್ಬಣಗೊಂಡಿದೆ. ಇಂದು ಜಿಲ್ಲೆಯಲ್ಲಿ 214 ಕೊರೊನಾ ಪ್ರಕರಣ ದಾಖಲಾಗಿದೆ. ಆ ಮೂಲಕ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 882ಕ್ಕೆ ಏರಿಕೆಯಾಗಿದೆ. ಉಡುಪಿ ತಾಲ್ಲೂಕಿನಲ್ಲಿ 101, ಕುಂದಾಪುರದಲ್ಲಿ 51, ಕಾರ್ಕಳದಲ್ಲಿ 60 ಹಾಗೂ ಇಬ್ಬರು ಹೊರ ಜಿಲ್ಲೆಯ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಉಡುಪಿ ತಾಲೂಕಿನ 69 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದು, ಆ ಮೂಲಕ ಎರಡನೇ ಅಲೆಯಲ್ಲಿ ಒಟ್ಟು 220 ಮಂದಿ ಮೃತಪಟ್ಟಿದ್ದಾರೆ.