ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ (76) ಅವರು ನಿಧನ ಹೊಂದಿದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಜಯಂತಿ ಎರಡು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಈಗ ಉಸಿರಾಟ ಸಮಸ್ಯೆ ಉಲ್ಭಣಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. 1968ರಲ್ಲಿ ‘ಜೇನುಗೂಡು’ ಚಿತ್ರದ ಮೂಲಕ ಸಿನಿ ಕ್ಷೇತ್ರಕ್ಕೆ ಪ್ರವೇಶಿಸಿದ್ದ ನಟಿ ಜಯಂತಿ ಕನ್ನಡದ ಒಟ್ಟು 190 ಸಿನಿಮಾಗಳಲ್ಲಿ ನಟಿಸಿ ಅಭಿನಯ ಶಾರದೆ ಎನಿಸಿಕೊಂಡಿದ್ದರು. ಅಲ್ಲದೇ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, […]