ಉಡುಪಿ: ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಚೇತನ್ ಪಡುಬಿದ್ರಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ತೆಗೆದು ಕೊಂಡ ನಿರ್ಣಯದಂತೆ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಚೇತನ್ ಪಡುಬಿದ್ರಿ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಅರುಣ್ ಕುಮಾರ್ ಶಿರೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಆಗಿ ಬೊಮ್ಮಾಯಿ ನೇಮಕಗೊಂಡ ಬೆನ್ನಲ್ಲೇ ಮೂವರು ಡಿಸಿಎಂಗಳ ಘೋಷಣೆ

ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾದ ಬೆನ್ನಲ್ಲೇ ಮೂವರು ಡಿಸಿಎಂಗಳನ್ನೂ ನೇಮಕ ಮಾಡಲಾಗಿದೆ. ಮಾಜಿ ಸಚಿವರಾದ ಆರ್. ಅಶೋಕ್, ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಲಾಗಿದೆ. ಅದರಂತೆ ನಾಳೆ ಮಧ್ಯಾಹ್ನ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮೂವರು ಡಿಸಿಎಂಗಳು ಕೂಡ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಗಿ ಬಂದ ಹಾದಿ ಹೀಗಿದೆ

ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ಜನನ: 18-1-1960 ಜನ್ಮ ಸ್ಥಳ: ಹುಬ್ಬಳ್ಳಿ ತಂದೆ: ಎಸ್.ಆರ್.ಬೊಮ್ಮಾಯಿ (ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ) ತಾಯಿ: ಗಂಗಮ್ಮ ಎಸ್ ಬೊಮ್ಮಾಯಿ ಧರ್ಮ ಪತ್ನಿ: ಚನ್ನಮ್ಮ ಪಿ ಬೊಮ್ಮಾಯಿ ವಿದ್ಯಾಭ್ಯಾಸ: ರೋಟರಿ ಇಂಗ್ಲಿಷ್ ಶಾಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರಾಥಮಿಕ / ಮಾಧ್ಯಮಿಕ ಶಿಕ್ಷಣ, ಪಿಯುಸಿ: ಪಿ.ಸಿ ಜಾಬಿನ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಧ್ಯಯನ ಪದವಿ ಶಿಕ್ಷಣ:ಬಿ. ವ್ಹಿ. ಬೂಮರೆಡ್ಡಿ ತಾಂತ್ರಿಕ ‌ಮಹಾವಿದ್ಯಾಲಯದಲ್ಲಿ ಮೆಕಾನಿಕ್ ವಿಭಾಗದಲ್ಲಿ ಇಂಜಿನಿಯರಿಂಗ್ […]

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ […]

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ನಗರದ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಸಿಎಂ ಹುದ್ದೆಗೆ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಆಯ್ಕೆಗೆ ಪಕ್ಷದ ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಮತ್ತು ಕಿಶನ್‌ ರೆಡ್ಡಿ, ಪಕ್ಷದ ರಾಜ್ಯ ಘಟಕದ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರ ಸಮ್ಮುಖದಲ್ಲಿ ನೂತನ‌ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಿತು.