ಟೀಂ ಇಂಡಿಯಾದ ಆಟಗಾರ ಕೃಣಾಲ್ ಪಾಂಡ್ಯಗೆ ಕೋವಿಡ್‌ ದೃಢ: ಇಂದು ನಡೆಯಬೇಕಿದ್ದ ಎರಡನೇ ಟಿ20 ಪಂದ್ಯ ಮುಂದೂಡಿಕೆ

ಕೊಲಂಬೊ: ಭಾರತ ಕ್ರಿಕೆಟ್‌ ತಂಡದ ಆಲ್‌–ರೌಂಡರ್‌ ಕೃಣಾಲ್ ಪಾಂಡ್ಯ ಅವರಿಗೆ ಕೋವಿಡ್‌–19 ದೃಢಪಟ್ಟ ಹಿನ್ನೆಲೆಯಲ್ಲಿ ಕೊಲಂಬೊದ ಆರ್‌. ಪ್ರೇಮದಾಸಾ ಕ್ರೀಡಾಂಗಣದಲ್ಲಿ ಇಂದು ಶ್ರೀಲಂಕಾ ಎದುರು ನಡೆಯಬೇಕಿದ್ದ ಎರಡನೇ ಟಿ20 ಪಂದ್ಯವನ್ನು ಮುಂದೂಡಲಾಗಿದೆ. ಸೋಮವಾರವೇ ಕೃಣಾಲ್‌ ಅವರಿಗೆ ಕೋವಿಡ್‌ ದೃಢಪಟ್ಟಿದೆ. ಅವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಟೂರ್ನಿಯಲ್ಲಿ ಭಾಗಿಯಾಗಿರುವ ಎಲ್ಲರ ಆರ್‌ಟಿ–ಪಿಸಿಆರ್‌ ಫಲಿತಾಂಶಕ್ಕಾಗಿ ಎದುರು ನೋಡಲಾಗುತ್ತಿದೆ ಎಂದು ತಿಳಿದುಬಂದಿದೆ. ಭಾರತ ತಂಡದಲ್ಲಿರುವ ಇತರರ ಆರ್‌ಟಿ–ಪಿಸಿಆರ್‌ ಫಲಿತಾಂಶ ಇನ್ನಷ್ಟೇ ಬರಬೇಕಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. […]

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಬಹುತೇಕ ಖಚಿತ?

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಬಿ.ಎಸ್‌. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಆಯ್ಕೆಮಾಡುವ ಪ್ರಕ್ರಿಯೆ ಆರಂಭವಾಗಲಿದೆ. ನಗರದ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಆಯ್ಕೆಗೆ ಪಕ್ಷದ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಸಚಿವರಾದ ಧರ್ಮೇಂದ್ರ […]

ಉಡುಪಿಯಲ್ಲಿ AMAZING DANCE CREW ವತಿಯಿಂದ AEROBIC QUEEN ತರಗತಿ ಶುರು: ಈಗಲೇ ರಿಜಿಸ್ಟರ್ ಮಾಡ್ಕೊಳ್ಳಿ

ಉಡುಪಿ: ಉಡುಪಿಯಲ್ಲಿ AMAZING DANCE CREW ವತಿಯಿಂದ AEROBIC ತರಗತಿ ಶುರುವಾಗಿದ್ದು  ಪೂರ್ಣಿಮಾ ಪೆರ್ಗಣ್ಣ ಲೇಡಿಸ್ ಗೆ ಲೇಡಿ ಟ್ರೈನರ್ ಆಗಿ AEROBIC  ಕ್ವೀನ್ ತರಗತಿ ನಡೆಸಿಕೊಡಲಿದ್ದಾರೆ. ಆಗಸ್ಟ್ 2 ರಿಂದ ಸೋಮವಾರದಿಂದ ಶನಿವಾರದವರೆಗೆ ಎರಡು ಬ್ಯಾಚ್ ನಲ್ಲಿ ತರಗತಿಗಳು ಶುರುವಾಗಲಿದೆ. ಬೆಳಗ್ಗೆ 5.30 ರಿಂದ 7 ಒಂದು ಬ್ಯಾಚ್ ಮತ್ತು ಬೆಳಗ್ಗೆ 10 ರಿಂದ 12  ಮತ್ತೊಂದು ಬ್ಯಾಚ್ ತರಗತಿಗಳು ಲಭ್ಯವಿದೆ. ಉಡುಪಿಯ ಜನತೆಗೆ ಫಿಟ್ ಆಂಡ್ ಹೆಲ್ತಿ ಆಗಿರಲು ಇದೊಂದು ಸದವಕಾಶ. ಕೂಡಲೇ ರಿಜಿಸ್ಟರ್ […]

ಐದಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತರೆ ವಿಶೇಷ ಸೌಲಭ್ಯ: ಕೇರಳ ಕ್ಯಾಥೋಲಿಕ್ ಚರ್ಚ್ ಘೋಷಣೆ

ತಿರುವನಂತಪುರಂ: ಉತ್ತರ ಪ್ರದೇಶ ಸಹಿತ ವಿವಿಧ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ರೂಪಿಸಲು ಚಿಂತನೆ ನಡೆಸುತ್ತಿದ್ದರೆ, ಇದಕ್ಕೆ ತದ್ವಿರುದ್ಧ ಎಂಬಂತೆ ಕೇರಳದ ಕ್ಯಾಥೋಲಿಕ್ ಚರ್ಚ್ ಯೋಜನೆಯೊಂದನ್ನು ಘೋಷಣೆ ಮಾಡಿದೆ. ಕೇರಳ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಶ್ಚಿಯನ್​ ಸಮುದಾಯದ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯದಲ್ಲಿ ಜನನ ಪ್ರಮಾಣ ಶೇ.14ಕ್ಕಿಂತ ಕಡಿಮೆಯಾಗಿದೆ. ಆದ್ದರಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದ ಕುಟುಂಬಕ್ಕೆ ಅಗತ್ಯವಿರುವ ವಿಶೇಷ ಸೌಲಭ್ಯಗಳನ್ನು ಏರ್ಪಡಿಸುವುದಾಗಿ ಕೇರಳದ ಕ್ಯಾಥೋಲಿಕ್ ಚರ್ಚ್ ಹೇಳಿಕೆ ನೀಡಿದೆ. ಸಿರೋ-ಮಲಬಾರ್ ಚರ್ಚ್ ಅಡಿಯಲ್ಲಿ ಬರುವ […]

ಅಶ್ಲೀಲ ಚಿತ್ರಗಳ ನಿರ್ಮಾಣ: ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ರಾಜ್‌ ಕುಂದ್ರಾ ಸೇರಿದಂತೆ ಪೊಲೀಸ್‌ ವಶದಲ್ಲಿರುವ ಎಲ್ಲಾ 10 ಆರೋಪಿಗಳಿಗೂ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.