ಕುಂದಾಪುರ: ಸೈಕಲ್ ಗೆ ಕಾರು ಡಿಕ್ಕಿ; ಸೈಕಲ್ ಸವಾರ ಮೃತ್ಯು

ಕುಂದಾಪುರ: ಸೈಕಲ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಜಾಲಾಡಿಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್ (52) ಮೃತ ದುರ್ದೈವಿ. ಕಾರು ಢಿಕ್ಕಿಯಾದ ಪರಿಣಾಮ ರಾಮ ಕುಲಾಲ್ ಗಂಭೀರ ಗಾಯಗೊಂಡಿದ್ದು, ಅವರನ್ನು ಗಂಗೊಳ್ಳಿ ಆಪತ್ಭಾಂದವ ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ […]

12 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಮಗ: ತಾಯಿ ಮಗನನ್ನು ಒಂದು ಮಾಡಿದ ನಾಗರಿಕ ಸಮಿತಿ ಕಾರ್ಯಕ್ಕೆ ಶ್ಲಾಘನೆ

ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು, ಉಡುಪಿಯಲ್ಲಿ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ಯುವಕನ ಮನವೊಲಿಸಿ, ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿರುವ ಮನೆಗೆ ಮಂಗಳವಾರ ಸೇರಿಸಿದ್ದಾರೆ. ಕಾಣೆಯಾಗಿರುವ ಮಗ 12 ವರ್ಷಗಳ ಬಳಿಕ ಮನೆಗೆ ಬಂದಿರುವುದು ಹೆತ್ತಬ್ಬೆಯಲ್ಲಿ ಸಂತಸ ಮೂಡಿಸಿತು. ಮನೆಯಲ್ಲಿ ಹಬ್ಬದ ವಾತಾವರಣ ಕಂಡುಬಂದಿತು. ನಾಗರಿಕ ಸಮಿತಿಯ ಮಾನವೀಯ ಸೇವಾ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಾಕ್ತವಾಗಿದೆ. ಉಡುಪಿ ನಗರ ಪರಿಸರದಲ್ಲಿ ಕೆಲವು ವರ್ಷಗಳಿಂದ ಅಪರಿಚಿತ ಯುವಕನೊರ್ವ ನೆಲೆಕಂಡಿದ್ದ. ಉದರ […]

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋತ್ ಪ್ರಮಾಣವಚನ ಭೋದಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬೊಮ್ಮಾಯಿಯವರ ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ., ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ.