ಉಡುಪಿ: ದೊಡ್ಡಣಗುಡ್ಡೆಯ ನಿವಾಸಿ ನಾಪತ್ತೆ
ಉಡುಪಿ: ಉಡುಪಿ ದೊಡ್ಡಣಗುಡ್ಡೆ ಕರಂಬಳ್ಳಿಯ 5ನೇ ರಸ್ತೆಯ ನಿವಾಸಿ ಸತೀಶ್ ಕುಮಾರ್ (54) ನಾಪತ್ತೆಯಾಗಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜುಲೈ 28ರ ಸಂಜೆ 4 ಗಂಟೆಯಿಂದ ಮನೆಯಿಂದ ಹೊರಗಡೆ ಹೋದವರು ಈವರೆಗೂ ಮನೆಗೆ ವಾಪಸ್ಸು ಬಂದಿಲ್ಲ. ಸಂಬಂಧಿಕರು ಹಾಗೂ ಸ್ನೇಹಿತರು ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ತಿನ್ನಿ ಎಂದ ಬಿಜೆಪಿ ಸಚಿವ!
ಶಿಲ್ಲಾಂಗ್: ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಮುಂದಾಗಿದ್ದರೆ, ಮೇಘಾಲಯದಲ್ಲಿ ಮಾತ್ರ ಇದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್ ಶುಲ್ಲೈ, ‘ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸಿ’ ಎನ್ನುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ […]
ಸೆಮಿಫೈನಲ್‌ನಲ್ಲಿ ಪಿ.ವಿ. ಸಿಂಧುಗೆ ಸೋಲು: ಚಿನ್ನದ ಪದಕ ಗೆಲ್ಲುವ ಕನಸು ಭಗ್ನ
ಟೋಕಿಯೊ: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿ.ವಿ. ಸಿಂಧು ಸೋಲು ಅನುಭವಿಸಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಭಗ್ನಗೊಂಡಿದೆ. ಇಂದು ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಪಿ.ವಿ. ಸಿಂಧು, ಅಗ್ರಶ್ರೇಯಾಂಕದ ಆಟಗಾರ್ತಿ, ಥೈವಾನ್‌ನ ತೈ ಜು ಯಿಂಗ್ ವಿರುದ್ಧ 21-18, 21-12ರ ಅಂತರದಲ್ಲಿ ಸೋಲು ಅನುಭವಿಸಿದರು. ಇದರೊಂದಿಗೆ ಫೈನಲ್ ರೇಸ್‌ನಿಂದ ಹೊರಬಿದ್ದಿದ್ದಾರೆ. 2016ರ ರಿಯೊ ಒಲಿಂಪಿಕ್ಸ್‌ನ ಬೆಳ್ಳಿ ಪದಕ ಗೆದ್ದಿರುವ ಸಿಂಧು, ಈಗ ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ.
ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ, ನಾವಂತೂ ಮೇಕೆದಾಟು ಮಾಡೇ ಮಾಡುತ್ತೇವೆ: ಅಣ್ಣಾಮಲೈಗೆ ಬೊಮ್ಮಾಯಿ ಟಾಂಗ್
ದೆಹಲಿ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುವ ಕುರಿತಂತೆ ದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ ಎನ್ನುವ ಮೂಲಕ ಅಣ್ಣಾಮಲೈಗೆ ಟಾಂಗ್ ನೀಡಿದರು. ಅಣ್ಣಾಮಲೈ ಮೇಕೆದಾಟು ವಿರೋಧಿಸಿ ಆಗಸ್ಟ್ 5ಕ್ಕೆ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ […]
ಕೋವಿಡ್ ಹೆಚ್ಚಳ: ಕೇರಳ, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಲಸಿಕೆ ಪಡೆದಿದ್ದರೂ ನೆಗೆಟಿವ್ ವರದಿ ಕಡ್ಡಾಯ
ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದರಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾದ ಭೀತಿ ಶುರುವಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆ ಎರಡು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೆಲವು ಕಡ್ಡಾಯ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಎರಡು ಡೋಸ್ ಲಸಿಕೆ ಪಡೆದಿದ್ದರೂ, ರಾಜ್ಯಕ್ಕೆ ಬರುವ 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು […]