ಒಲಿಂಪಿಕ್ಸ್ ಹಾಕಿ: ಬ್ರಿಟನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸೆಮಿಫೈನಲ್‌ಗೆ ಲಗ್ಗೆ
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇಂದು ನಡೆದ ರೋಚಕ ಕ್ವಾರ್ಟರ್‌ಫೈನಲ್ ಮುಖಾಮುಖಿಯಲ್ಲಿ ಭಾರತ ತಂಡವು ಬ್ರಿಟನ್ ವಿರುದ್ಧ 3-1 ಗೋಲುಗಳ ಅಂತರದ ಗೆಲುವು ದಾಖಲಿಸಿದೆ. 1980ರಲ್ಲಿ ಮಾಸ್ಕೋದಲ್ಲಿ ಚಿನ್ನದ ಪದಕ ಗಳಿಸಿದ ನಂತರ ಭಾರತಕ್ಕೆ ಇದುವರೆಗೆ ಒಂದೂ ಪದಕ ಒಲಿದಿಲ್ಲ. ಈಗ 41 ವರ್ಷಗಳ ನಂತರ ಬಳಿಕ ಸೆಮಿಫೈನಲ್‌ಗೇರಿದ ಸಾಧನೆ ಮಾಡಿದೆ.
ಟೋಕಿಯೊ ಒಲಿಂಪಿಕ್ಸ್: ಭಾರತಕ್ಕೆ ಎರಡನೇ ಪದಕ
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಇಂದು ಮಹಿಳಾ ಸಿಂಗಲ್ಸ್ ವಿಭಾಗದ ಕಂಚಿನ ಪದಕಕ್ಕೆ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹಿ ಬಿಂಗ್‌ಜಿಯಾವೊ ವಿರುದ್ಧ 21-13, 21-15ರ ಅಂತರದಲ್ಲಿ ಗೆಲುವು ದಾಖಲಿಸಿದರು. ಇದರೊಂದಿಗೆ 26 ವರ್ಷದ ಸಿಂಧು, ಒಲಿಂಪಿಕ್ಸ್‌ನಲ್ಲಿ ಸತತವಾಗಿ ಎರಡನೇ ಬಾರಿಗೂ ಪದಕ ಗೆದ್ದ ಸಾಧನೆ ಮಾಡಿದ್ದಾರೆ. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು. ಈಗ […]
ಉಡುಪಿ: ಆಟೊ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರ ಬಂಧನ
ಉಡುಪಿ: ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿ ಆಟೊ ರಿಕ್ಷಾದಲ್ಲಿ ಗಾಂಜಾ ಮಾರಾಟ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹40 ಸಾವಿರ ಮೌಲ್ಯದ 1.226 ಕೆ.ಜಿ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಗ್ರಾಮದ ಕುಂಪಳ ನಿವಾಸಿಗಳಾದ ಕಾರ್ತಿಕ್ (24) ಹಾಗೂ ತೇಜಸ್ (18) ಬಂಧಿತ ಆರೋಪಿಗಳು. ಆರೋಪಿಗಳು ಜುಲೈ 31ರಂದು ರಾತ್ರಿ 7.45ಕ್ಕೆ ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯ ಬಬ್ಬುಸ್ವಾಮಿ ದೈವಸ್ಥಾನದ ಎದುರು […]
ಹಿರಿಯಡಕ: ಕೋಳಿ ಗೂಡಿಗೆ ನುಗ್ಗಿದ್ದ ಹೆಬ್ಬಾವು ಸೆರೆ.!
ಹಿರಿಯಡಕ: ಇಲ್ಲಿನ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ಎಂಬಲ್ಲಿ ಬೃಹದಾಕಾರದ ಹೆಬ್ಬಾವೊಂದು ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಪುತ್ತಿಗೆಯ ಶಶಾಂಕ್ ಅಮೀನ್ ಎಂಬವರ ಮನೆಯಲ್ಲಿರುವ ಕೋಳಿ ಗೂಡಿಗೆ ಬೃಹದಾಕಾರದ ಹೆಬ್ಬಾವೊಂದು ನುಗ್ಗಿತ್ತು. ಗೂಡಿನಲ್ಲಿದ್ದ ಎರಡು ಕೋಳಿಗಳ ಪೈಕಿ ಒಂದು ಕೋಳಿ ತಪ್ಪಿಸಿಕೊಂಡಿದ್ದು, ಹುಂಜ ಕೋಳಿಯೊಂದನ್ನು ಹಾವು ಸುತ್ತುಹಾಕಿ ಕೊಂದು ಹಾಕಿದೆ. ಬಳಿಕ ಕಾಜಾರಗುತ್ತುವಿನ ದ್ವಿತೇಶ್ ಕಾಮತ್ ಅವರು ಸ್ಥಳಕ್ಕೆ ಬಂದು ಸ್ಥಳೀಯರ ಸಹಕಾರದೊಂದಿಗೆ ಹೆಬ್ಬಾವನ್ನು ಸೆರೆಹಿಡಿದು […]
ಉಡುಪಿ: ಆಗಸ್ಟ್ 2 ರಂದು ಮೀನುಗಾರರಿಗೆ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ, ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ ಮಲ್ಪೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರರಿಗೆ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ಕಾರ್ಯಕ್ರಮವು ಆಗಸ್ಟ್ 2 ರಂದು ಬೆಳಗ್ಗೆ 9.30 ಕ್ಕೆ ಮಲ್ಪೆಯ ಮೀನುಗಾರರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ. ಆರೋಗ್ಯ ಇಲಾಖೆಯ ವತಿಯಿಂದ ತಂಬಾಕು, ಮದ್ಯಪಾನ, […]