ಕಾರ್ಕಳ: ಕೆರೆಯಲ್ಲಿ ಮುಳುಗಿ ತಾಯಿ-ಮಗು ಮೃತ್ಯು
ಕಾರ್ಕಳ: ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ತಾಯಿಮಗು ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಡ್ಪಾಲ್ ನಿವಾಸಿ ಸೌಮ್ಯ (27) ಹಾಗೂ ಅವರ ಮೂರು ವರ್ಷ ಪ್ರಾಯದ ಮಗ ಆರೂಷ್ (3) ಎಂದು ಗುರುತಿಸಲಾಗಿದೆ. ಸೌಮ್ಯ ಅವರು ಜುಲೈ 31ರಂದು ಟೈಲರಿಂಗ್ ಕಲಿಯಲು ಮಗುವಿನೊಂದಿಗೆ ಹೋಗಿದ್ದರು. ಆದರೆ, ಸಂಜೆಯಾದರೂ ಮನೆಗೆ ವಾಪಾಸ್ ಬಾರದಿದ್ದಾಗ ಸೌಮ್ಯಳ ತಂಗಿ ಸರಿತಾ ಹುಡುಕಾಡಿದ್ದಾರೆ. ಈ ವೇಳೆ ಮಡಿವಾಳ ಕಟ್ಟೆಯ ಕೆರೆಯ ನೀರಿನಲ್ಲಿ ಆರೂಷ್ ಧರಿಸಿದ್ದ ಚಪ್ಪಲಿ, […]
ಒಲಿಂಪಿಕ್ಸ್ ಮಹಿಳಾ ಹಾಕಿ: ಬಲಿಷ್ಠ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೆ ಪ್ರವೇಶಿಸಿದ ಭಾರತ
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 1-0 ಗೋಲುಗಳ ಅಂತರದಲ್ಲಿ ಮಣಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಆ ಮೂಲಕ ಒಲಿಂಪಿಕ್ಸ್ ನಲ್ಲಿ ಭಾರತ ಹೊಸ ಇತಿಹಾಸ ನಿರ್ಮಾಣ ಮಾಡಿದೆ. 1980ರಲ್ಲಿ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಭಾರತ ಮಹಿಳಾ ಹಾಕಿ ತಂಡದ ಇದುವರೆಗಿನ ಶ್ರೇಷ್ಠ ಸಾಧನೆಯಾಗಿದೆ. ಅಂದು ಒಟ್ಟು ಆರು ತಂಡಗಳು ಸ್ಪರ್ಧಿಸಿತ್ತು. ಆಗಸ್ಟ್ 4ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಭಾರತ ತಂಡವು ಅರ್ಜೆಂಟೀನಾ ಸವಾಲನ್ನು ಎದುರಿಸಲಿದೆ. ಮಗದೊಂದು ಕ್ವಾರ್ಟರ್‌ನಲ್ಲಿ […]