ವಿದ್ಯಾರ್ಥಿಗಳಿಗೆ ಮತ್ತೆ ಶಾಕ್: ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳೂ ಮುಂದೂಡಿಕೆ:
ಮಂಗಳೂರು: ಕೋವಿಡ್ ಕಾರಣದಿಂದ ವಿಧಿಸಿರುವ ನಿಯಮಗಳಿಗನುಸಾರವಾಗಿ ನಾಳೆ ಆ.4 ರಿಂದ ನಡೆಯಲಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ರದ್ದು ಮಾಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.ದ.ಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯ ಹಿನ್ನೆಯಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.ನಾಳೆಯಿಂದ ನಡೆಯಲಿರುವ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗಧಿಪಡಿಸಲಾಗುವುದು ಎಂದು ಪರೀಕ್ಷಾಂಗ ಮುಖ್ಯಸ್ಥ ಪ್ರೋ.ಧರ್ಮಾ ತಿಳಿಸಿದ್ದಾರೆ.
ಉಡುಪಿ: ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಉಡುಪಿ: ಜಿಲ್ಲೆಯ ಮಣಿಪಾಲ್‌ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿವಿಧ ವೃತ್ತಿಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶಾಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ www.emptrg.kar.nic.in ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ.ಸಂಸ್ಥೆ, ಪ್ರಗತಿ ನಗರ ಮಣಿಪಾಲ್ ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2986145 ನ್ನು ಸಂಪರ್ಕಿಸುವಂತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ: ಅರ್ಜಿ ಸಲ್ಲಿಸಿ
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟಿಯ ತೋಟಗಾರಿಕೆ ಮಿಷನ್ ಯೋಜನೆಯಡಿ ಲಭ್ಯವಿರುವ ಕಾಳ ಮೆಣಸು ಪುನಃಶ್ಚೇತನ, ಅಣಬೆ ಉತ್ಪಾದನಾ ಘಟಕಗಳು ಸ್ಫಾಪನೆ, ಕೃಷಿ ಹೊಂಡಗಳ ನಿರ್ಮಾಣ, ಸಮಗ್ರ ಪೀಡೆ/ ಪೋಷಕಾಂಶಗಳ ನಿರ್ವಹಣೆ 20 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಖರೀದಿಗೆ, ಪ್ಯಾಕ್ ಹೌಸ್ ಘಟಕ ನಿರ್ಮಾಣಕ್ಕೆ, ಪ್ರಾಥಮಿಕ/ ಬಹುಪಯೋಗಿ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ತೋಟಗಾರಿಕೆ ಬೆಳೆಗಳನ್ನು ಒಣಗಿಸಲು ನಿರ್ಮಾಣ ಮಾಡುವ ಸೋಲರ್ ಡ್ರೆöಯರ್ ಗಳಲ್ಲಿ ಉಪಯೋಗಿಸುವ ಸಿಲ್ ಪಾಲಿನ ಹಾಳೆಗಳಿಗೆ ಸಹಾಯ ಧನ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ […]
ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್: ನೂತನ ಸಂಪುಟದಲ್ಲಿ 24-30 ಸಚಿವರಿಗೆ ಅವಕಾಶ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 4ರ (ಬುಧವಾರ) ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ನಿಂದ ಪಟ್ಟಿ ರವಾನೆಯಾಗಿದ್ದು, 24-30 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ನೂತನ ಸಚಿವರ ಅಧಿಕೃತ ಪಟ್ಟಿ ಇಂದು ರಾತ್ರಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಾವಣಗೆರೆ: ಜಿಲ್ಲೆಯಾದ್ಯಂತ ಕೋವಿಡ್ ಕಠಿಣ ನಿಮಯ ಜಾರಿ; ವಾರಾಂತ್ಯಕ್ಕೆ ದೇಗುಲಗಳಿಗೆ ಪ್ರವೇಶವಿಲ್ಲ
ದಾವಣಗೆರೆ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಲ್ಲಿ ಕಠಿಣ ನಿಯಮವನ್ನು ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ನೀಡಿದೆ. ಪ್ರಸ್ತುತ ಜಾರಿಯಲ್ಲಿರುವ ನೈಟ್ ಕರ್ಫ್ಯೂ (ರಾತ್ರಿ 10ರಿಂದ ಬೆಳಿಗ್ಗೆ 5ರ ವರೆಗೆ) ರೂಲ್ಸ್ ಅನ್ನು ಮತ್ತಷ್ಟು ಬಿಗಿಗೊಳಿಸಿದೆ. ರಾತ್ರಿ 10ರ ಬಳಿಕ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಿದೆ. ಶನಿವಾರ, ಭಾನುವಾರ ದೇಗುಲಗಳಿಗೆ ಭಕ್ತರ ಪ್ರವೇಶವಿಲ್ಲ: ಶನಿವಾರ, ಭಾನುವಾರ ದಾವಣಗೆರೆ ಜಿಲ್ಲೆಯ ದೇಗುಲಗಳಿಗೆ ಭಕ್ತರ ಪ್ರವೇಶವಿಲ್ಲ. ವಾರದಲ್ಲಿ ಉಳಿದ ದಿನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ […]